Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 24:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆಹೋವನು ನನ್ನನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟರೂ ನೀನು ನನ್ನನ್ನು ಕೊಲ್ಲಲಿಲ್ಲ. ಇದರಿಂದ ನೀನು ನನಗೆ ಹಿತವನ್ನೇ ಮಾಡುವಂಥವನೆಂಬುದು ಈ ಹೊತ್ತು ಪ್ರಕಟವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸರ್ವೇಶ್ವರ ನನ್ನನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟರೂ ನೀನು ನನ್ನನ್ನು ಕೊಲ್ಲಲಿಲ್ಲ. ಇದರಿಂದ ನೀನು ನನಗೆ ಹಿತವನ್ನೇ ಮಾಡುವಂಥವನೆಂಬುದು ಈ ದಿನ ಖಚಿತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೆಹೋವನು ನನ್ನನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟರೂ ನೀನು ನನ್ನನ್ನು ಕೊಲ್ಲಲಿಲ್ಲ; ಇದರಿಂದ ನೀನು ನನಗೆ ಹಿತವನ್ನೇ ಮಾಡುವಂಥವನೆಂಬದು ಈ ಹೊತ್ತು ಪ್ರಕಟವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೀನು ನನಗೆ ಮಾಡಿದ ಒಳ್ಳೆಯ ಕಾರ್ಯಗಳ ಬಗ್ಗೆ ನನಗೆ ತಿಳಿಸಿರುವೆ. ಯೆಹೋವನು ನನ್ನನ್ನು ನಿನ್ನ ಬಳಿಗೆ ಕರೆದು ತಂದನು, ಆದರೆ ನೀನು ನನ್ನನ್ನು ಕೊಲ್ಲಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೆಹೋವ ದೇವರು ನನ್ನನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಾಗ, ನೀನು ನನ್ನನ್ನು ಕೊಂದುಹಾಕದೆ ಇದ್ದುದರಿಂದ, ನೀನು ನನಗೆ ಉಪಕಾರ ಮಾಡಿದ್ದನ್ನು ಈ ಹೊತ್ತು ತೋರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 24:18
10 ತಿಳಿವುಗಳ ಹೋಲಿಕೆ  

ಯೆಹೋವನು ಪ್ರತಿಯೊಬ್ಬನಿಗೂ ಅವನವನ ನೀತಿಸತ್ಯತೆಗಳಿಗೆ ಅನುಸಾರವಾಗಿ ಪ್ರತಿಫಲವನ್ನು ಕೊಡುವನು. ಆತನು ಈ ಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೂ, ನೀನು ಯೆಹೋವನ ಅಭಿಷಿಕ್ತನೆಂದು ನಾನು ನಿನ್ನ ಮೇಲೆ ಕೈಹಾಕಲಿಲ್ಲ.


ನೀನು ನನ್ನನ್ನು ಶತ್ರುಗಳ ಕೈಕೆಳಗೆ ಬೀಳಿಸಲಿಲ್ಲ; ನಿರಾತಂಕ ಸ್ಥಾನದಲ್ಲಿ ನನ್ನನ್ನು ನಿಲ್ಲಿಸಿದಿ.


ಅಬೀಷೈಯು ದಾವೀದನಿಗೆ, “ದೇವರು ಈ ಹೊತ್ತು ನಿನ್ನ ವೈರಿಯನ್ನು ನಿನ್ನ ಕೈಗೆ ಒಪ್ಪಿಸಿದ್ದಾನೆ, ಅಪ್ಪಣೆಯಾಗಲಿ ನಾನು ಬರ್ಜಿಯಿಂದ ಒಂದೇ ಪೆಟ್ಟಿನಲ್ಲಿ ಅವನನ್ನು ನೆಲಕ್ಕೆ ಹತ್ತಿಕೊಳ್ಳುವಂತೆ ತಿವಿಯುವೆನು. ಎರಡನೆಯ ಸಾರಿ ಹೊಡೆಯುವಂತ ಅವಕಾಶವಿರುವುದಿಲ್ಲ” ಎಂದು ಹೇಳಿದನು.


ಈ ಹೊತ್ತು ಯೆಹೋವನು ಗವಿಯಲ್ಲಿ ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದಾನೆಂಬುದು ಈಗ ನಿನಗೆ ಗೊತ್ತಾಯಿತಲ್ಲವೋ? ನಿನ್ನನ್ನು ಕೊಂದುಬಿಡಬೇಕೆಂದು ಕೆಲವರು ನನಗೆ ಹೇಳಿದರು. ಆದರೆ ನಾನು ಅವರಿಗೆ, ‘ಯೆಹೋವನ ಅಭಿಷಿಕ್ತನಾದ ನನ್ನ ಒಡೆಯನ ಮೇಲೆ ಕೈಹಾಕುವುದಿಲ್ಲ’ ಎಂದು ಹೇಳಿ ನಿನ್ನನ್ನು ಉಳಿಸಿದೆನು.


ದಾವೀದನು ತಿರುಗಿ ಯೆಹೋವನನ್ನು, “ಕೆಯೀಲದವರು ನನ್ನನ್ನೂ, ನನ್ನ ಜನರನ್ನೂ ಸೌಲನ ಕೈಗೆ ಒಪ್ಪಿಸುವರೋ” ಎಂದು ಕೇಳಿದಾಗ ಆತನು, “ಒಪ್ಪಿಸಿಕೊಡುವರು” ಎಂದು ಉತ್ತರಕೊಟ್ಟನು.


ದಾವೀದನು ಕೆಯೀಲದಲ್ಲಿದ್ದಾನೆಂಬ ವರ್ತಮಾನವು ಸೌಲನಿಗೆ ಮುಟ್ಟಿತು. ಆಗ ಅವನು, ದೇವರು ದಾವೀದನನ್ನು ನನ್ನ ಕೈಗೆ ಒಪ್ಪಿಸಿದನು. ಅವನು ಅಗುಳಿ ಬಾಗಿಲುಗಳಿಂದ ಭದ್ರವಾಗಿರುವ ಪಟ್ಟಣವನ್ನು ಪ್ರವೇಶಿಸಿದ್ದಾನಲ್ಲಾ ಅವನು ಅಲ್ಲಿಂದ ತಪ್ಪಿಸಿಕೊಳ್ಳಲಾರನು ಅಂದುಕೊಂಡು,


ಯಾವನಾದರೂ ತನ್ನ ಕೈಗೆ ಸಿಕ್ಕಿದ ವೈರಿಯನ್ನು ಸುಕ್ಷೇಮದಿಂದ ಕಳುಹಿಸಿಬಿಡುವನೋ? ನೀನು ಈ ಹೊತ್ತು ನನಗೆ ಉಪಕಾರಮಾಡಿದ್ದಕ್ಕಾಗಿ ಯೆಹೋವನು ನಿನಗೆ ಉಪಕಾರ ಮಾಡಲಿ.


ಯೆಹೂದನು ಅವುಗಳ ಗುರುತನ್ನು ತಿಳಿದು, “ನಾನು, ನನ್ನ ಮಗನಾದ ಶೇಲಹನನ್ನು ಆಕೆಗೆ ಮದುವೆ ಮಾಡಿಸಲಿಲ್ಲ. ಆದುದರಿಂದ ಆಕೆಯು ನನಗಿಂತಲೂ ನೀತಿವಂತಳು” ಎಂದು ಹೇಳಿದನು. ಅವನು ಪುನಃ ಆಕೆಯ ಸಹವಾಸ ಮಾಡಲಿಲ್ಲ.


ನನ್ನ ಮಾನವನ್ನು ಮಣ್ಣುಪಾಲು ಮಾಡಲಿ. ನಾನಂಥವನಲ್ಲ; ನಿಷ್ಕಾರಣ ವೈರಿಯನ್ನು ರಕ್ಷಿಸಿದೆನಲ್ಲ. ಸೆಲಾ


ಹೀಗೆ ಅವನ ತಲೆಯ ಮೇಲೆ ಕೆಂಡ ಸುರಿದಂತಾಗುವುದು. ಯೆಹೋವನೇ ನಿನಗೆ ಪ್ರತಿಫಲಕೊಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು