Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 24:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯಾವನಾದರೂ ತನ್ನ ಕೈಗೆ ಸಿಕ್ಕಿದ ವೈರಿಯನ್ನು ಸುಕ್ಷೇಮದಿಂದ ಕಳುಹಿಸಿಬಿಡುವನೋ? ನೀನು ಈ ಹೊತ್ತು ನನಗೆ ಉಪಕಾರಮಾಡಿದ್ದಕ್ಕಾಗಿ ಯೆಹೋವನು ನಿನಗೆ ಉಪಕಾರ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಯಾವನಾದರೂ ತನ್ನ ಕೈಗೆ ಸಿಕ್ಕಿದ ವೈರಿಯನ್ನು ಸುಕ್ಷೇಮದಿಂದ ಕಳುಹಿಸಿಬಿಡುತ್ತಾನೆಯೇ? ನೀನು ಈ ದಿನ ನನಗೆ ಮಾಡಿದ ಉಪಕಾರಕ್ಕಾಗಿ ಸರ್ವೇಶ್ವರ ನಿನಗೆ ಪ್ರತ್ಯುಪಕಾರಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯಾವನಾದರೂ ತನ್ನ ಕೈಗೆ ಸಿಕ್ಕಿದ ವೈರಿಯನ್ನು ಸುಕ್ಷೇಮದಿಂದ ಕಳುಹಿಸಿಬಿಡುವನೋ? ನೀನು ಈಹೊತ್ತು ನನಗೆ ಉಪಕಾರಮಾಡಿದ್ದಕ್ಕಾಗಿ ಯೆಹೋವನು ನಿನಗೆ ಉಪಕಾರಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಒಬ್ಬ ಮನುಷ್ಯನು ತನ್ನ ಶತ್ರುವನ್ನು ಹಿಡಿದುಕೊಂಡರೆ, ಅವನಿಗೆ ಕೇಡನ್ನು ಮಾಡದೆ ಕಳುಹಿಸಿಬಿಡುವನೇ? ಅವನು ಶತ್ರುವಿಗೆ ಒಳ್ಳೆಯದನ್ನು ಮಾಡುವುದಿಲ್ಲ. ನೀನು ನನಗೆ ಈ ದಿನ ಒಳ್ಳೆಯದನ್ನು ಮಾಡಿರುವುದರಿಂದ ಯೆಹೋವನು ನಿನಗೆ ಒಳ್ಳೆಯದನ್ನು ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಏಕೆಂದರೆ ಯಾವನಾದರೂ ತನ್ನ ಶತ್ರುವನ್ನು ಹಿಡಿದುಕೊಂಡರೆ, ಅವನನ್ನು ಸುರಕ್ಷಿತನಾಗಿ ಬಿಟ್ಟುಬಿಡುವನೋ? ಈ ಹೊತ್ತು ನೀನು ನನಗೆ ಒಳ್ಳೆಯದನ್ನು ಮಾಡಿದ್ದರಿಂದ ಯೆಹೋವ ದೇವರು ನಿನಗೆ ಒಳ್ಳೆಯದನ್ನು ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 24:19
8 ತಿಳಿವುಗಳ ಹೋಲಿಕೆ  

ಯೆಹೋವನು ನನ್ನ ನೀತಿಗೆ ಸರಿಯಾಗಿ ಮೇಲನ್ನು ಮಾಡಿದನು, ನನ್ನ ಕೈಗಳ ಶುದ್ಧತ್ವಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಟ್ಟನು.


ಆಗ ಸೌಲನು ದಾವೀದನಿಗೆ, “ನನ್ನ ಮಗನೇ ದಾವೀದನೇ ನೀನು ಆಶೀರ್ವಾದ ಹೊಂದು. ನೀನು ಹೇಗೂ ಮಹಾಕಾರ್ಯಗಳನ್ನು ನಡಿಸಿ ಸಫಲನಾಗುವಿ” ಎಂದು ಹೇಳಿ ತನ್ನ ಊರಿಗೆ ಹೊರಟನು. ದಾವೀದನು ತನ್ನ ದಾರಿಯನ್ನು ಹಿಡಿದನು.


ಆಗ ಸೌಲನು ಅವರಿಗೆ, “ನೀವು ನನ್ನ ಮೇಲೆ ಕನಿಕರ ತೋರಿಸಿ ಸಹಾಯ ಮಾಡುತ್ತಿರುವುದರಿಂದ ಯೆಹೋವನ ಆಶೀರ್ವಾದವು ನಿಮ್ಮ ಮೇಲಿರಲಿ.


ಇಗೋ, ಆ ಸಾವಿರದ ನೂರು ರೂಪಾಯಿಗಳು ನನ್ನ ಹತ್ತಿರ ಇವೆ; ನಾನು ತೆಗೆದುಕೊಂಡಿದ್ದೆನು” ಎಂದು ಹೇಳಿದನು. ಆಕೆಯು, “ನನ್ನ ಮಗನೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ” ಅಂದಳು.


ನೀನು ಮಾಡಿದ್ದ ಎಲ್ಲಾ ಒಳ್ಳೆಯಕಾರ್ಯದ ಪ್ರತಿಫಲವಾಗಿ ಯೆಹೋವನು ನಿನಗೆ ಒಳ್ಳೆಯ ಫಲವನ್ನು ಕೊಡಲಿ; ನೀನು ಯಾವ ದೇವರ ಕೃಪಾಶಿರ್ವಾದದ ಆಶ್ರಯ ಹೊಂದಲು ಬಂದಿರುವೆಯೋ ಆ ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಉತ್ತಮವಾದ ಆಶ್ರಯವನ್ನು ಪ್ರತಿಫಲವನ್ನು ಅನುಗ್ರಹಿಸಲಿ” ಎಂದು ಉತ್ತರ ಕೊಟ್ಟನು.


ದಾವೀದನಿಗೆ, “ಭಯಪಡಬೇಡ; ನೀನು ನನ್ನ ತಂದೆಯಾದ ಸೌಲನ ಕೈಗೆ ಸಿಕ್ಕಿಬೀಳುವುದಿಲ್ಲ. ನೀನು ಇಸ್ರಾಯೇಲ್ಯರ ಅರಸನಾಗುವಿ; ನಾನು ನಿನಗೆ ಎರಡನೆಯವನಾಗಿರುವೆನು. ಹೀಗಾಗುವುದೆಂದು ನನ್ನ ತಂದೆಯಾದ ಸೌಲನೂ ತಿಳಿದುಕೊಂಡಿದ್ದಾನೆ” ಎಂದು ಹೇಳಿ, ದೇವರಲ್ಲಿ ಅವನನ್ನು ಬಲಪಡಿಸಿದನು.


ಯೆಹೋವನು ಪ್ರತಿಯೊಬ್ಬನಿಗೂ ಅವನವನ ನೀತಿಸತ್ಯತೆಗಳಿಗೆ ಅನುಸಾರವಾಗಿ ಪ್ರತಿಫಲವನ್ನು ಕೊಡುವನು. ಆತನು ಈ ಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೂ, ನೀನು ಯೆಹೋವನ ಅಭಿಷಿಕ್ತನೆಂದು ನಾನು ನಿನ್ನ ಮೇಲೆ ಕೈಹಾಕಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು