Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 24:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಅವನು ಎಲ್ಲಾ ಇಸ್ರಾಯೇಲರಲ್ಲಿ ಶ್ರೇಷ್ಠರಾದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ಕಾಡುಗುರಿಬಂಡೆಗಳಲ್ಲಿದ್ದ ದಾವೀದನನ್ನೂ, ಅವನ ಜನರನ್ನೂ ಹುಡುಕುವುದಕ್ಕೋಸ್ಕರ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ಅವನು ಇಸ್ರಯೇಲರಲ್ಲಿ ಶ್ರೇಷ್ಠರಾದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ಕಾಡುಗುರಿಬಂಡೆಗಳಲ್ಲಿದ್ದ ದಾವೀದನನ್ನೂ ಅವನ ಜನರನ್ನೂ ಹುಡುಕುವುದಕ್ಕಾಗಿ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ಅವನು ಎಲ್ಲಾ ಇಸ್ರಾಯೇಲ್ಯರಲ್ಲಿ ಶ್ರೇಷ್ಠರಾದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ಕಾಡು ಗುರಿಬಂಡೆಗಳಲ್ಲಿದ್ದ ದಾವೀದನನ್ನೂ ಅವನ ಜನರನ್ನೂ ಹುಡುಕುವದಕ್ಕೋಸ್ಕರ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಇಸ್ರೇಲಿನ ಮೂರು ಸಾವಿರ ಜನರನ್ನು ಸೌಲನು ಆರಿಸಿದನು. ಸೌಲನು ಈ ಜನರೊಂದಿಗೆ ದಾವೀದನನ್ನು ಮತ್ತು ಅವನ ಜನರನ್ನು ಹುಡುಕಲು ಆರಂಭಿಸಿದನು. ಅವರು ಕಾಡು ಹೋತದ ಬಂಡೆಗಳ ಹತ್ತಿರ ಹುಡುಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಸೌಲನು ಸಮಸ್ತ ಇಸ್ರಾಯೇಲಿನಲ್ಲಿ ಶ್ರೇಷ್ಠರಾದ ಮೂರು ಸಾವಿರ ಸೈನಿಕರನ್ನು ತೆಗೆದುಕೊಂಡು ದಾವೀದನನ್ನೂ, ಅವನ ಜನರನ್ನೂ ಹುಡುಕಲು ಕಾಡುಮೇಕೆಗಳಿರುವ ಬಂಡೆಗಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 24:2
9 ತಿಳಿವುಗಳ ಹೋಲಿಕೆ  

ಆಗ ಸೌಲನು ಇಸ್ರಾಯೇಲರಲ್ಲಿ ಶ್ರೇಷ್ಠರಾದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ದಾವೀದನನ್ನು ಹುಡುಕುವುದಕ್ಕೋಸ್ಕರ ಜೀಫ್ ಅರಣ್ಯಕ್ಕೆ ಹೋಗಿ ಅದರ ಮೂಡಣದಿಕ್ಕಿನಲ್ಲಿ,


ಅವರ ಪ್ರಮುಖರು ಕಡುಬಂಡೆಯಿಂದ ಕೆಳಕ್ಕೆ ದೊಬ್ಬಲ್ಪಟ್ಟ ಮೇಲೆ, ಜನರು ನನ್ನ ಮಾತುಗಳಿಗೆ ಕಿವಿಗೊಡುವರು, ಅವು ಅವರಿಗೆ ಹಿತವಾಗಿರುವವು.


ಕಾಡಕುರಿಗಳಿಗೆ ಉನ್ನತವಾದ ಪರ್ವತಗಳೂ, ಬೆಟ್ಟದ ಮೊಲಗಳಿಗೆ ಬಂಡೆಗಳೂ ಆಶ್ರಯಸ್ಥಾನಗಳಾಗಿವೆ.


ನನ್ನ ಪ್ರಾಣವನ್ನು ತೆಗೆಯಬೇಕೆನ್ನುವವರು ನನಗೆ ಉರುಲುಗಳನ್ನು ಒಡ್ಡಿದ್ದಾರೆ; ನನ್ನ ವಿಪತ್ತನ್ನು ಕೋರುವವರು ನನಗೆ ನಾಶನವನ್ನೇ ನಿಶ್ಚಯಿಸಿಕೊಂಡು, ಯಾವಾಗಲೂ ಮೋಸವನ್ನು ಕಲ್ಪಿಸುತ್ತಿದ್ದಾರೆ.


ದುಷ್ಟನು ಹೊಂಚುಹಾಕಿ ನೀತಿವಂತನನ್ನು ಕೊಲ್ಲಬೇಕೆಂದು ಸಮಯನೋಡುತ್ತಾನೆ.


ಅವನು ಇಸ್ರಾಯೇಲರಿಂದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡನು, ಅವರಲ್ಲಿ ಎರಡು ಸಾವಿರ ಜನರು ಅವನೊಂದಿಗೆ ಮಿಕ್ಮಾಷಿನಲ್ಲಿಯೂ, ಬೇತೇಲಿನ ಗುಡ್ಡದಲ್ಲಿಯೂ ಇದ್ದರು. ಒಂದು ಸಾವಿರ ಜನರನ್ನು ಬೆನ್ಯಾಮೀನ್ಯರ ಗಿಬೆಯದಲ್ಲಿದ್ದ ಯೋನಾತಾನನ ವಶಕ್ಕೆ ಕೊಟ್ಟನು. ಉಳಿದ ಇಸ್ರಾಯೇಲರನ್ನು ಅವರವರ ಮನೆಗಳಿಗೆ ಕಳುಹಿಸಿದನು.


ಯೆಹೋವನು ನನ್ನ ಬಂಡೆಯೂ, ನನ್ನ ಕೋಟೆಯೂ ನನ್ನ ವಿಮೋಚಕನೂ ಆಗಿದ್ದಾನೆ.


ಬೆಟ್ಟದ ಮೇಕೆಗಳು ಈಯುವ ಸಮಯವನ್ನು ತಿಳಿದುಕೊಂಡಿದ್ದೀಯೋ? ಹರಿಣಗಳ ಹೆರಿಗೆಯನ್ನು ನೋಡಿಕೊಳ್ಳುವೆಯಾ?


ಅವನು ದಾವೀದನನ್ನು ಹಿಡಿಯುವ ಕೆಲಸವನ್ನು ಬಿಟ್ಟು ಫಿಲಿಷ್ಟಿಯರ ವಿರುದ್ಧ ಯುದ್ಧಮಾಡಲು ಹೊರಟನು. ಆದುದರಿಂದ ಆ ಬೆಟ್ಟಕ್ಕೆ “ಮಕ್ಹೆಲೋಕೆತ್” ಎಂದರೆ “ಪಾರಾದ ಬಂಡೆ” ಎಂದು ಹೆಸರಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು