Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 24:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅನಂತರ ಸೌಲನು ತನ್ನ ಮನೆಗೆ ಹೊರಟನು. ದಾವೀದನು ತನ್ನ ಜನರೊಡನೆ ಆಶ್ರಯಗಿರಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅನಂತರ ಸೌಲನು ತನ್ನ ಮನೆಗೆ ಹೊರಟನು; ದಾವೀದನು ತನ್ನ ಜನರೊಡನೆ ಆಶ್ರಯಗಿರಿಗೆ ಮರಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅನಂತರ ಸೌಲನು ತನ್ನ ಮನೆಗೆ ಹೊರಟನು; ದಾವೀದನು ತನ್ನ ಜನರೊಡನೆ ಆಶ್ರಯಗಿರಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಸೌಲನ ವಂಶದವರನ್ನು ಕೊಲ್ಲುವುದಿಲ್ಲವೆಂದು ದಾವೀದನು ಪ್ರಮಾಣಮಾಡಿದನು. ನಂತರ ಸೌಲನು ಮನೆಗೆ ಹಿಂದಿರುಗಿದನು. ದಾವೀದನು ಮತ್ತು ಅವನ ಜನರು ತಾವು ಅಡಗಿಕೊಂಡಿದ್ದ ಸ್ಥಳಕ್ಕೆ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಹಾಗೆಯೇ ದಾವೀದನು ಸೌಲನಿಗೆ ಪ್ರಮಾಣ ಮಾಡಿದನು. ಆಗ ಸೌಲನು ತನ್ನ ಮನೆಗೆ ಹೋದನು. ಆದರೆ ದಾವೀದನೂ ಅವನ ಮನುಷ್ಯರೂ ಆಶ್ರಯಗಿರಿಗೆ ಏರಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 24:22
9 ತಿಳಿವುಗಳ ಹೋಲಿಕೆ  

ದಾವೀದನು ಅಲ್ಲಿಂದ ಗಟ್ಟಾಹತ್ತಿ ಹೋಗಿ ಏಂಗೆದಿಯ ಗಿರಿಗಳಲ್ಲಿ ವಾಸಿಸಿದನು.


ಆದರೆ ಯೇಸು ಎಲ್ಲವನ್ನೂ ಬಲ್ಲವನಾದುದರಿಂದ ಅವರಿಗೆ ವಶವಾಗಲಿಲ್ಲ,


ಆಗ ಸೌಲನು ದಾವೀದನಿಗೆ, “ನನ್ನ ಮಗನೇ ದಾವೀದನೇ ನೀನು ಆಶೀರ್ವಾದ ಹೊಂದು. ನೀನು ಹೇಗೂ ಮಹಾಕಾರ್ಯಗಳನ್ನು ನಡಿಸಿ ಸಫಲನಾಗುವಿ” ಎಂದು ಹೇಳಿ ತನ್ನ ಊರಿಗೆ ಹೊರಟನು. ದಾವೀದನು ತನ್ನ ದಾರಿಯನ್ನು ಹಿಡಿದನು.


ಆ ಕಾಲದಲ್ಲಿ ಅಬೀಮೆಲೆಕನು ತನ್ನ ಸೇನಾಧಿಪತಿಯಾದ ಫೀಕೋಲನ ಸಮೇತ ಅಬ್ರಹಾಮನಿಗೆ, “ನೀನು ಮಾಡುವ ಎಲ್ಲಾ ಕೆಲಸಗಳಲ್ಲಿಯೂ ದೇವರು ನಿನ್ನ ಸಂಗಡ ಇದ್ದಾನೆ.


ಆದುದರಿಂದ ನೀನು ನನಗೂ, ನನ್ನ ಮಕ್ಕಳಿಗೂ, ನನ್ನ ಸಂತತಿಗೂ ಅನ್ಯಾಯ ಮಾಡದೆ, ನಾನು ನಿನಗೆ ಹಿತವನ್ನು ಮಾಡಿದಂತೆಯೇ, ನನಗೂ, ನೀನು ವಾಸಿಸುವ ಈ ದೇಶಕ್ಕೂ ಹಿತವನ್ನು ಮಾಡುವುದಾಗಿ ದೇವರ ಮೇಲೆ ಪ್ರಮಾಣ ಮಾಡಬೇಕು” ಎಂದು ಹೇಳಿದನು.


ಯೆಹೋವನಿಂದ ಆರಿಸಲ್ಪಟ್ಟ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು, ಯೆಹೋವನ ಸನ್ನಿಧಿಯಲ್ಲಿ ಅವರನ್ನು ನೇತು ಹಾಕುವೆವು” ಎಂದರು. ಅದಕ್ಕೆ ಅರಸನು, “ಆಗಲಿ ಅವರನ್ನು ನಿಮಗೆ ಒಪ್ಪಿಸುತ್ತೇನೆ” ಅಂದನು.


ದಾವೀದನು ತಾನು ಸೌಲನ ಮಗನಾದ ಯೋನಾತಾನನಿಗೆ ಯೆಹೋವನ ಹೆಸರಿನಲ್ಲಿ ಮಾಡಿದ ಪ್ರಮಾಣವನ್ನು ನೆನಪುಮಾಡಿಕೊಂಡು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು