1 ಸಮುಯೇಲ 24:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಜನರು ದಾವೀದನಿಗೆ “ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು, ಆಗ ನೀನು ಅವನನ್ನು ಮನಸ್ಸಿಗೆ ಬಂದಂತೆ ನಡೆಸಬಹುದು ಎಂದು ಯೆಹೋವನು ನಿನಗೆ ಹೇಳಿದ ಮಾತು ನೆರವೇರುವ ದಿನ ಇದೇ” ಅಂದಾಗ ಅವನೆದ್ದು ಮೆಲ್ಲನೆ ಹೋಗಿ ಸೌಲನ ನಿಲುವಂಗಿಯ ತುದಿಯನ್ನು ಕತ್ತರಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಜನರು ದಾವೀದನಿಗೆ, “’ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಆಗ ನೀನು ಅವನನ್ನು ನಿನ್ನ ಇಷ್ಟಾನುಸಾರ ನಡೆಸಬಹುದು,’ ಎಂದು ಸರ್ವೇಶ್ವರ ನಿನಗೆ ಹೇಳಿದ ಮಾತು ನೆರವೇರುವ ಸುದಿನವಿದು,” ಎಂದರು. ಅವನೆದ್ದು ಮೆಲ್ಲಗೆ ಹೋಗಿ ಸೌಲನ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಜನರು ದಾವೀದನಿಗೆ - ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಆಗ ನೀನು ಅವನನ್ನು ಮನಸ್ಸಿಗೆ ಬಂದಂತೆ ನಡಿಸಬಹುದು ಎಂದು ಯೆಹೋವನು ನಿನಗೆ ಹೇಳಿದ ಮಾತು ನೆರವೇರುವ ದಿವಸ ಇದೇ ಅಂದಾಗ ಅವನೆದ್ದು ಮೆಲ್ಲಗೆ ಹೋಗಿ ಸೌಲನ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಜನರು ದಾವೀದನಿಗೆ, “ಯೆಹೋವನು ಈ ದಿನವನ್ನೇ ಕುರಿತು ನಿನ್ನೊಂದಿಗೆ ಮಾತನಾಡಿದನು. ಯೆಹೋವನು ನಿನಗೆ, ‘ನಾನು ನಿನ್ನ ಶತ್ರುವನ್ನು ನಿನಗೆ ಒಪ್ಪಿಸುತ್ತೇನೆ. ನಿನ್ನ ಇಷ್ಟದಂತೆ ಶತ್ರುವಿಗೆ ಏನು ಬೇಕಾದರೂ ಮಾಡು’ ಎಂದು ಹೇಳಿದನು” ಎಂದರು. ನಂತರ ದಾವೀದನು ಸೌಲನ ಹತ್ತಿರಕ್ಕೆ ತೆವಳುತ್ತಾ ಹೋಗಿ ಸೌಲನ ಅಂಗಿಯ ಒಂದು ಮೂಲೆಯನ್ನು ಕತ್ತರಿಸಿದನು. ದಾವೀದನನ್ನು ಸೌಲನು ನೋಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ದಾವೀದನ ಜನರು ಅವನಿಗೆ, “ ‘ನಾನು ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು. ಆಗ ನೀನು ನಿನ್ನ ಇಷ್ಟಾನುಸಾರ ಅವನಿಗೆ ಮಾಡಬಹುದು,’ ಎಂದು ಯೆಹೋವ ದೇವರು ನಿನಗೆ ಹೇಳಿದ ದಿನವು ಇದೇ,” ಎಂದರು. ಆಗ ದಾವೀದನು ಎದ್ದು ಹೋಗಿ ರಹಸ್ಯವಾಗಿ ಸೌಲನ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡನು. ಅಧ್ಯಾಯವನ್ನು ನೋಡಿ |