Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಕರ್ಮೆಲಿನಲ್ಲಿ ಸ್ವಂತ ಸೊತ್ತು ಹೊಂದಿದ್ದ ಒಬ್ಬ ಮನುಷ್ಯನಿದ್ದನು. ಅವನು ಮಾವೋನಿನಲ್ಲಿ ವಾಸಿಸುತ್ತಿದ್ದನು. ಅವನ ಹೆಸರು ನಾಬಾಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಕರ್ಮೆಲಿನಲ್ಲಿ ಸ್ವಂತ ಸೊತ್ತು ಪಡೆದಿದ್ದ ಒಬ್ಬ ಮನುಷ್ಯ ಮಾವೋನಿನಲ್ಲಿ ವಾಸಿಸುತ್ತಿದ್ದನು. ಅವನ ಹೆಸರು ನಾಬಾಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಕರ್ಮೆಲಿನಲ್ಲಿ ಸ್ವಾಸ್ತ್ಯವಿದ್ದಂಥ ಒಬ್ಬ ಮನುಷ್ಯನು ಮಾವೋನಿನಲ್ಲಿ ವಾಸಿಸುತ್ತಿದ್ದನು; ಅವನ ಹೆಸರು ನಾಬಾಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಮಾವೋನ್‌ನಲ್ಲಿ ಒಬ್ಬ ಮನುಷ್ಯನು ವಾಸಿಸುತ್ತಿದ್ದನು. ಈ ಮನುಷ್ಯನು ಬಹಳ ಶ್ರೀಮಂತನಾಗಿದ್ದನು. ಅವನು ಮೂರು ಸಾವಿರ ಕುರಿಗಳನ್ನೂ ಒಂದು ಸಾವಿರ ಆಡುಗಳನ್ನೂ ಹೊಂದಿದ್ದನು. ಅವನು ಕರ್ಮೆಲಿನಲ್ಲಿ ವ್ಯಾಪಾರ ಮಾಡುತ್ತಿದ್ದನು. ಒಮ್ಮೆ ಅವನು ಕುರಿಗಳ ತುಪ್ಪಟವನ್ನು ಕತ್ತರಿಸುವುದಕ್ಕಾಗಿ ಕರ್ಮೆಲಿಗೆ ಹೋಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದರೆ ಕರ್ಮೆಲಿನಲ್ಲಿ ಸೊತ್ತುಗಳಿರುವ ಮಾವೋನಿನ ಒಬ್ಬ ಮನುಷ್ಯನಿದ್ದನು. ಅವನು ಬಹು ಸಿರಿವಂತನಾಗಿದ್ದನು. ಅವನಿಗೆ ಮೂರು ಸಾವಿರ ಕುರಿಗಳೂ ಸಾವಿರ ಮೇಕೆಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:2
17 ತಿಳಿವುಗಳ ಹೋಲಿಕೆ  

ಅವರು ಹೊರಟು ಸೌಲನ ಮುಂದಾಗಿ ಜೀಫಿಗೆ ಬಂದರು. ದಾವೀದನೂ ಅವನ ಜನರೂ ಮಾವೋನ ಅರಣ್ಯದ ದಕ್ಷಿಣ ದಿಕ್ಕಿನಲ್ಲಿರುವ ಅರಾಬ್ ಎಂಬ ತಗ್ಗಾದ ಪ್ರದೇಶದಲ್ಲಿದ್ದನು.


ಆಗ ತಾಮಾರಳಿಗೆ, “ಮಾವನು ತನ್ನ ಕುರಿಗಳ ಉಣ್ಣೇ ಕತ್ತರಿಸುವುದಕ್ಕೋಸ್ಕರ ತಿಮ್ನಾ ಊರಿಗೆ ಹೋಗುತ್ತಿದ್ದಾನೆ” ಎಂದು ತಿಳಿದು ಬಂದಿತು


ಯೆಹೋವನು ಯೋಬನ ಮೊದಲನೆಯ ಸ್ಥಿತಿಗಿಂತಲೂ ಅವನ ಕಡೆಯ ಸ್ಥಿತಿಯನ್ನು ಹೀಗೆ ಹೆಚ್ಚಾಗಿ ಆಶೀರ್ವದಿಸಿದನು. ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ, ಆರು ಸಾವಿರ ಒಂಟೆಗಳೂ, ಒಂದು ಸಾವಿರ ಜೋಡಿ ಎತ್ತುಗಳೂ, ಒಂದು ಸಾವಿರ ಹೆಣ್ಣುಕತ್ತೆಗಳೂ ಉಂಟಾದವು.


ಅವನಿಗೆ ಏಳು ಸಾವಿರ ಕುರಿಗಳೂ, ಮೂರು ಸಾವಿರ ಒಂಟೆಗಳೂ, ಐನೂರು ಜೋಡಿ ಎತ್ತುಗಳೂ, ಐನೂರು ಹೆಣ್ಣು ಕತ್ತೆಗಳೂ, ಬಹುಮಂದಿ ಸೇವಕರೂ ಇದ್ದುದರಿಂದ ಅವನು ಮೂಡಣ ದೇಶದವರಲ್ಲೆಲ್ಲಾ ಹೆಚ್ಚು ಸ್ವತ್ತುಳ್ಳವನಾಗಿದ್ದನು.


ಇವನು ಎಂಬತ್ತು ವರ್ಷದ ಮುದುಕನು. ಇವನು ಬಹು ಶ್ರೀಮಂತನಾಗಿದ್ದುದರಿಂದ ದಾವೀದನು ಮಹನಯಿಮಿನಲ್ಲಿದ್ದ ಕಾಲದಲ್ಲೆಲ್ಲಾ ಅವನ ಜೀವನಕ್ಕೆ ಬೇಕಾದದ್ದನ್ನು ಇವನೇ ಒದಗಿಸಿಕೊಡುತ್ತಿದ್ದನು.


ದಾವೀದನ ಇಬ್ಬರು ಹೆಂಡತಿಯರಾದ ಇಜ್ರೇಲಿನವಳಾದ ಅಹೀನೋವಮಳೂ, ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸೆರೆಯಾಗಿ ಹೋಗಿದ್ದರು.


ಅವನ ಐಶ್ವರ್ಯವು ದಿನೇ ದಿನೇ ಹೆಚ್ಚಿದ್ದರಿಂದ ಬಹು ಧನವಂತನಾದನು.


ಅಬ್ರಾಮನು ಬಹು ಐಶ್ವರ್ಯವಂತನಾಗಿದ್ದನು; ಅವನಿಗೆ ಪಶುಗಳೂ ಬೆಳ್ಳಿಬಂಗಾರವೂ ಇದ್ದವು.


ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದು ನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು; ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ. ಅವರು ಸಂತಾನವೃದ್ಧಿಹೊಂದಿ ಉಳಿದ ಆಸ್ತಿಯನ್ನು ತಮ್ಮ ಮಕ್ಕಳಿಗೆ ಬಿಡುತ್ತಾರೆ.


ಸಮುವೇಲನು ಬೆಳಿಗ್ಗೆ ಎದ್ದು ಸೌಲನನ್ನು ನೋಡುವುದಕ್ಕೆ ಹೊರಟಾಗ ಅವನಿಗೆ, “ಸೌಲನು ಕರ್ಮೆಲಿಗೆ ಹೋಗಿ ಅಲ್ಲಿ ತನಗೋಸ್ಕರ ಒಂದು ಜ್ಞಾಪಕಸ್ತಂಭವನ್ನು ನಿಲ್ಲಿಸಿ, ಅಲ್ಲಿಂದ ಗಟ್ಟಾ ಇಳಿದು ಗಿಲ್ಗಾಲಿಗೆ ಹೋದನು” ಎಂಬ ವರ್ತಮಾನವು ಬಂದದ್ದರಿಂದ


ಆಗ ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವುದಕ್ಕೋಸ್ಕರ ಹೋಗಿದ್ದನು. ಹೀಗಿರುವಲ್ಲಿ ರಾಹೇಲಳು ತನ್ನ ತಂದೆಯ ಮನೆಯಲ್ಲಿದ್ದ ವಿಗ್ರಹಗಳನ್ನು ಕದ್ದುಕೊಂಡಳು.


ಇನ್ನೂರು ಆಡುಕುರಿ, ಇಪ್ಪತ್ತು ಹೋತ, ಇಪ್ಪತ್ತು ಟಗರು, ಮರಿಯೊಡನೆ ಹಾಲು ಕರೆಯುವ


ಯಾವುವೆಂದರೆ, ಪಟ್ಟಕ್ಕೆ ಬಂದ ದಾಸನು, ಹೊಟ್ಟೆತುಂಬಿದ ನೀಚನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು