1 ಸಮುಯೇಲ 25:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನಿನ್ನ ದಾಸಿಯ ಅಪರಾಧಕ್ಕೆ ಕ್ಷಮಾಪಣೆಯಾಗಲಿ. ಸ್ವಾಮಿಯೇ, ನೀನು ಯೆಹೋವನ ಶತ್ರುಗಳೊಡನೆ ಯುದ್ಧಮಾಡುವುದರಿಂದ ಆತನು ನಿನ್ನ ಮನೆಯನ್ನು ಶಾಶ್ವತವಾಗಿ ಸ್ಥಿರಪಡಿಸುವನು. ಆದ್ದರಿಂದ ನಿನ್ನ ಜೀವಮಾನದಲ್ಲೆಲ್ಲಾ ನಿನ್ನಲ್ಲಿ ಕೆಟ್ಟತನವು ಕಾಣದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ನಿಮ್ಮ ದಾಸಿಯ ಅಪರಾಧಕ್ಕೆ ಕ್ಷಮಾಪಣೆಯಾಗಲಿ; ಒಡೆಯಾ, ತಾವು ಸರ್ವೇಶ್ವರನ ಶತ್ರುಗಳೊಡನೆ ಯುದ್ಧಮಾಡುವುದರಿಂದ ಅವರು ನಿಮ್ಮ ಮನೆಯನ್ನು ಶಾಶ್ವತವಾಗಿ ಸ್ಥಿರಪಡಿಸುವರು. ಆದುದರಿಂದ ನಿಮ್ಮ ಜೀವಮಾನದಲ್ಲೆಲ್ಲಾ ನಮ್ಮಲ್ಲಿ ಕೆಟ್ಟತನ ಕಾಣದಿರಲಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ನಿನ್ನ ದಾಸಿಯ ಅಪರಾಧಕ್ಕೆ ಕ್ಷಮಾಪಣೆಯಾಗಲಿ; ಸ್ವಾವಿುಯೇ, ನೀನು ಯೆಹೋವನ ಶತ್ರುಗಳೊಡನೆ ಯುದ್ಧಮಾಡುವದರಿಂದ ಆತನು ನಿನ್ನ ಮನೆಯನ್ನು ಶಾಶ್ವತವಾಗಿ ಸ್ಥಿರಪಡಿಸುವನು. ಆದದರಿಂದ ನಿನ್ನ ಜೀವಮಾನದಲ್ಲೆಲ್ಲಾ ನಿನ್ನಲ್ಲಿ ಕೆಟ್ಟತನವು ಕಾಣದಿರಲಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ನಾನು ಮಾಡಿದ ತಪ್ಪನ್ನು ದಯವಿಟ್ಟು ಕ್ಷಮಿಸು. ಯೆಹೋವನು ನಿನ್ನ ಕುಟುಂಬವನ್ನು ಪ್ರಬಲಗೊಳಿಸುತ್ತಾನೆಂದೂ ನಿನ್ನ ಕುಟುಂಬದಿಂದ ಅನೇಕ ರಾಜರು ಬರುತ್ತಾರೆಂದೂ ನನಗೆ ತಿಳಿದಿದೆ! ನೀನು ಯೆಹೋವನ ಯುದ್ಧಗಳಲ್ಲಿ ಹೋರಾಡುವುದರಿಂದ ಯೆಹೋವನು ಇದನ್ನು ನೆರವೇರಿಸುತ್ತಾನೆ. ನೀನು ಜೀವಿಸಿರುವ ತನಕ ಜನರು ನಿನ್ನಲ್ಲಿ ಯಾವುದೇ ಬಗೆಯ ಕೆಟ್ಟದನ್ನು ಕಂಡುಹಿಡಿಯುವುದಿಲ್ಲ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 “ನೀನು ದಯಮಾಡಿ ನಿನ್ನ ದಾಸಿಯ ತಪ್ಪನ್ನು ಮನ್ನಿಸಬೇಕು. ಏಕೆಂದರೆ ನನ್ನ ಒಡೆಯನು ಯೆಹೋವ ದೇವರ ಯುದ್ಧಗಳನ್ನು ನಡೆಸುತ್ತಾನೆ. ಆದ್ದರಿಂದ ನಿನ್ನ ಜೀವಮಾನದಲ್ಲೆಲ್ಲಾ ನಿನ್ನಲ್ಲಿ ಕೆಟ್ಟತನ ಕಾಣದಿರಲಿ. ಯೆಹೋವ ದೇವರು ನಿಶ್ಚಯವಾಗಿ ನನ್ನ ಒಡೆಯನಾದ ನಿನಗೆ ಶಾಶ್ವತ ರಾಜ್ಯವನ್ನು ಸ್ಥಿರಪಡಿಸುವರು. ಅಧ್ಯಾಯವನ್ನು ನೋಡಿ |