1 ಸಮುಯೇಲ 25:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವನ ಹೆಂಡತಿಯ ಹೆಸರು ಅಬೀಗೈಲ್. ಆಕೆಯು ಬಹು ಬುದ್ಧಿವಂತೆಯೂ, ಸುಂದರಿಯೂ ಆಗಿದ್ದಳು. ಕಾಲೇಬನ ವಂಶದವನಾದ ಆ ಮನುಷ್ಯನು ನಿಷ್ಠುರನೂ, ದುಷ್ಕರ್ಮಿಯೂ ಆಗಿದ್ದನು. ಅವನು ಬಹು ಶ್ರೀಮಂತನಾಗಿದ್ದನು. ಅವನಿಗೆ ಮೂರು ಸಾವಿರ ಕುರಿಗಳೂ, ಸಾವಿರ ಆಡುಗಳೂ ಇದ್ದವು. ಅವನು ಒಂದು ಸಾರಿ ಕರ್ಮೆಲಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅವನ ಹೆಂಡತಿಯ ಹೆಸರು ಅಬೀಗೈಲ್. ಆಕೆ ಬಹು ಬುದ್ಧಿವಂತೆ ಹಾಗು ಸುಂದರಿ. ಕಾಲೇಬನ ವಂಶದವನಾದ ಆ ಮನುಷ್ಯನಾದರೊ ನಿಷ್ಠುರನು ಹಾಗು ದುಷ್ಕರ್ಮಿ. ಅವನು ಬಹು ಧನವಂತನೂ ಆಗಿದ್ದ. ಅವನಿಗೆ ಮೂರು ಸಾವಿರ ಕುರಿಗಳೂ ಸಾವಿರ ಆಡುಗಳೂ ಇದ್ದವು. ಅವನು ಒಮ್ಮೆ ಕರ್ಮೆಲಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವನ ಹೆಂಡತಿಯ ಹೆಸರು ಅಬೀಗೈಲ್. ಆಕೆಯು ಬಹುಬುದ್ಧಿವಂತೆಯೂ ಸುಂದರಿಯೂ ಆಗಿದ್ದಳು; ಕಾಲೇಬನ ವಂಶದವನಾದ ಆ ಮನುಷ್ಯನು ನಿಷ್ಠುರನೂ ದುಷ್ಕರ್ಮಿಯೂ ಆಗಿದ್ದನು. ಅವನು ಬಹು ಧನವಂತನು. ಅವನಿಗೆ ಮೂರು ಸಾವಿರ ಕುರಿಗಳೂ ಸಾವಿರ ಆಡುಗಳೂ ಇದ್ದವು. ಅವನು ಒಂದು ಸಾರಿ ಕರ್ಮೆಲಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಈ ಮನುಷ್ಯನ ಹೆಸರು ನಾಬಾಲ್. ಅವನ ಹೆಂಡತಿಯ ಹೆಸರು ಅಬೀಗೈಲ್. ಅಬೀಗೈಲಳು ಬುದ್ಧಿವಂತೆಯೂ ಸುಂದರಿಯೂ ಆಗಿದ್ದಳು. ಆದರೆ ನಾಬಾಲನು ಕ್ರೂರಿ ಮತ್ತು ಕೀಳಾದ ವ್ಯಕ್ತಿ. ನಾಬಾಲನು ಕಾಲೇಬನ ಕುಟುಂಬಕ್ಕೆ ಸೇರಿದವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವನು ಕರ್ಮೆಲಿನಲ್ಲಿ ತನ್ನ ಕುರಿಗಳ ಉಣ್ಣೆ ಕತ್ತರಿಸುತ್ತಿದ್ದನು. ಈ ಮನುಷ್ಯನ ಹೆಸರು ನಾಬಾಲನು. ಅವನ ಹೆಂಡತಿಯ ಹೆಸರು ಅಬೀಗೈಲಳು. ಆ ಸ್ತ್ರೀಯು ಬಹು ಬುದ್ಧಿವಂತೆ ಹಾಗು ಸುಂದರಿ. ಆದರೆ ಆ ಮನುಷ್ಯನು ಒರಟಾದವನೂ ದುಷ್ಕರ್ಮಿಯೂ ಆಗಿದ್ದನು. ಅವನು ಕಾಲೇಬನ ವಂಶಸ್ಥನು. ಅಧ್ಯಾಯವನ್ನು ನೋಡಿ |