Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯೆಹೋವನು ನನ್ನ ಸ್ವಾಮಿಯಾದ ನಿನಗೆ ವಾಗ್ದಾನಮಾಡಿರುವ ಎಲ್ಲಾ ಸೌಭಾಗ್ಯವನ್ನು ದಯಪಾಲಿಸಲಿ. ನಿನ್ನನ್ನು ಇಸ್ರಾಯೇಲ್ಯರ ಪ್ರಭುವನ್ನಾಗಿ ಮಾಡಿದ ಮೇಲೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಸರ್ವೇಶ್ವರ ನನ್ನ ಒಡೆಯರಾದ ನಿಮಗೆ ವಾಗ್ದಾನಮಾಡಿದ ಎಲ್ಲಾ ಸೌಭಾಗ್ಯವನ್ನು ದಯಪಾಲಿಸಿ, ನಿಮ್ಮನ್ನು ಇಸ್ರಯೇಲಿನ ಅರಸರನ್ನಾಗಿ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯೆಹೋವನು ನನ್ನ ಸ್ವಾವಿುಯಾದ ನಿನಗೆ ವಾಗ್ದಾನ ಮಾಡಿದ ಎಲ್ಲಾ ಸೌಭಾಗ್ಯವನ್ನು ದಯಪಾಲಿಸಿ ನಿನ್ನನ್ನು ಇಸ್ರಾಯೇಲ್ ಪ್ರಭುವನ್ನಾಗಿ ಮಾಡಿದ ಮೇಲೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನಿನಗಾಗಿ ಅನೇಕ ಒಳ್ಳೆಯ ಕಾರ್ಯಗಳನ್ನು ಮಾಡುವುದಾಗಿ ಯೆಹೋವನು ವಾಗ್ದಾನ ಮಾಡಿದ್ದಾನೆ. ಯೆಹೋವನು ತನ್ನ ಎಲ್ಲ ವಾಗ್ದಾನಗಳನ್ನೂ ನೆರವೇರಿಸುತ್ತಾನೆ! ದೇವರು ನಿನ್ನನ್ನು ಇಸ್ರೇಲರ ನಾಯಕನನ್ನಾಗಿ ಮಾಡಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಇದಲ್ಲದೆ ನನ್ನ ಒಡೆಯನಾದ ನಿನ್ನನ್ನು ಕುರಿತು ಯೆಹೋವ ದೇವರು ಹೇಳಿದ ಒಳ್ಳೆಯದೆಲ್ಲವನ್ನು ನಿನಗೆ ಮಾಡಿ, ನಿನ್ನನ್ನು ಇಸ್ರಾಯೇಲರ ಮೇಲೆ ನಾಯಕನಾಗಿ ನೇಮಿಸಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:30
7 ತಿಳಿವುಗಳ ಹೋಲಿಕೆ  

ಈಗಲಾದರೋ ನಿನ್ನ ಅರಸುತನವು ನಿಲ್ಲುವುದಿಲ್ಲ; ನೀನು ಯೆಹೋವನ ಆಜ್ಞೆಯನ್ನು ಕೈಕೊಳ್ಳದೆ ಹೋದುದರಿಂದ ಆತನು ತನಗೆ ಒಪ್ಪುವ ಬೇರೊಬ್ಬ ಪುರುಷನನ್ನು ತನ್ನ ಪ್ರಜೆಯ ಮೇಲೆ ಪ್ರಭುವಾಗಿ ನೇಮಿಸಿದ್ದಾನೆ” ಎಂದು ಹೇಳಿದನು.


ನನ್ನ ಸೇವಕನಾದ ದಾವೀದನನ್ನು ಕಂಡು, ಪರಿಶುದ್ಧ ತೈಲದಿಂದ ಅವನನ್ನು ಅಭಿಷೇಕಿಸಿದ್ದೇನೆ.


ದಾವೀದನಿಗೆ, “ಭಯಪಡಬೇಡ; ನೀನು ನನ್ನ ತಂದೆಯಾದ ಸೌಲನ ಕೈಗೆ ಸಿಕ್ಕಿಬೀಳುವುದಿಲ್ಲ. ನೀನು ಇಸ್ರಾಯೇಲ್ಯರ ಅರಸನಾಗುವಿ; ನಾನು ನಿನಗೆ ಎರಡನೆಯವನಾಗಿರುವೆನು. ಹೀಗಾಗುವುದೆಂದು ನನ್ನ ತಂದೆಯಾದ ಸೌಲನೂ ತಿಳಿದುಕೊಂಡಿದ್ದಾನೆ” ಎಂದು ಹೇಳಿ, ದೇವರಲ್ಲಿ ಅವನನ್ನು ಬಲಪಡಿಸಿದನು.


ಆಗ ಸಮುವೇಲನು ಅವನಿಗೆ, “ಯೆಹೋವನು ಈ ಹೊತ್ತು ಇಸ್ರಾಯೇಲಿನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನಗಿಂತ ಉತ್ತಮನಾದ ಇನ್ನೊಬ್ಬನಿಗೆ ಕೊಟ್ಟಿದ್ದಾನೆ.


ನಿರಪರಾಧಿಯ ರಕ್ತವನ್ನು ಸುರಿಸಿ ಮುಯ್ಯಿ ತೀರಿಸಿದ್ದರಿಂದ ಉಂಟಾಗುವ ಪಶ್ಚಾತ್ತಾಪ ಮನೋವ್ಯಥೆಗಳಿಗೆ ಕಾರಣವಿರುವುದಿಲ್ಲ. ಆತನೇ ನಿನ್ನನ್ನು ಮಹಾ ಪದವಿಗೆ ತರುವಾಗ ನಿನ್ನ ದಾಸಿಯಾದ ನನ್ನನ್ನು ಮರೆತುಬಿಡಬೇಡ” ಅಂದಳು.


ಹಿಂದಿನ ದಿನಗಳಲ್ಲಿ ಅಂದರೆ, ಸೌಲನ ಆಡಳಿತದಲ್ಲಿ, ಇಸ್ರಾಯೇಲರ ದಳಾಧಿಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ಯೆಹೋವನು, ‘ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ ಪಾಲಕನೂ ಆಗಿರುವಿಯೆಂದು ಹೇಳಿದ್ದಾನೆ’” ಅಂದರು.


ಹೀಗಿರುವುದರಿಂದ ನೀನು ನನ್ನ ಸಂತಾನವನ್ನು ನಿರ್ಮೂಲಮಾಡುವುದಿಲ್ಲವೆಂದೂ, ನಮ್ಮ ಕುಲದಿಂದ ನನ್ನ ಹೆಸರನ್ನು ತೆಗೆದುಹಾಕುವುದಿಲ್ಲವೆಂದೂ ಯೆಹೋವನ ಹೆಸರಿನಲ್ಲಿ ಪ್ರಮಾಣ ಮಾಡು” ಎಂದು ಬೇಡಿಕೊಂಡ ಹಾಗೆ ದಾವೀದನು ಪ್ರಮಾಣಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು