Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಸುಮಾರು ಹತ್ತು ದಿನಗಳಾದನಂತರ ನಾಬಾಲನು ಯೆಹೋವನಿಂದ ಹತನಾಗಿ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಸರ್ವೇಶ್ವರ ವಿಧಿಸಿದ ದಂಡನೆಯ ನಿಮಿತ್ತ ಸುಮಾರು ಹತ್ತು ದಿನಗಳಾದ ನಂತರ ನಾಬಾಲನು ಸತ್ತುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಸುಮಾರು ಹತ್ತು ದಿನಗಳಾದ ನಂತರ ನಾಬಾಲನು ಯೆಹೋವನಿಂದ ಹತನಾಗಿ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಹತ್ತು ದಿನಗಳಾದ ಮೇಲೆ, ಯೆಹೋವನು ನಾಬಾಲನಿಗೆ ಸಾವನ್ನು ಬರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಹೆಚ್ಚು ಕಡಿಮೆ ಹತ್ತು ದಿವಸಗಳಾದ ತರುವಾಯ, ಯೆಹೋವ ದೇವರ ದಂಡನೆಯ ನಿಮಿತ್ತ ನಾಬಾಲನು ಸತ್ತುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:38
13 ತಿಳಿವುಗಳ ಹೋಲಿಕೆ  

ಇದಲ್ಲದೆ ದಾವೀದನು, “ಯೆಹೋವನ ಆಣೆ, ಅವನು ಯೆಹೋವನಿಂದ ಸಾಯುವನು, ಇಲ್ಲವೆ ಕಾಲ ತುಂಬಿದ ಮೇಲೆ ಮರಣ ಹೊಂದುವನು ಅಥವಾ ಯುದ್ಧದಲ್ಲಿ ಸಾಯುವನು.


ಆ ಘನತೆಯನ್ನು ಅವನು ದೇವರಿಗೆ ಸಲ್ಲಿಸದೆ, ಹೋದುದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.


ಅರಸನು ಜನರ ಮಾತನ್ನು ಕೇಳದೆ ಹೋದದ್ದು ದೈವಯೋಗದಿಂದಲೇ. ಈ ಪ್ರಕಾರ ಯೆಹೋವನು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿದ ಮಾತು ನೆರವೇರಿತು.


ಅದೇ ರಾತ್ರಿಯಲ್ಲಿ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯದ ಪಾಳೆಯದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಸೈನಿಕರನ್ನು ಸಂಹರಿಸಿದನು. ಅಶ್ಶೂರ್ಯರು ಬೆಳಿಗ್ಗೆ ಎದ್ದು ನೋಡಿದಾಗ ಪಾಳೆಯದ ತುಂಬಾ ಹೆಣಗಳು ಬಿದ್ದಿದ್ದವು.


ಯೆಹೋವನು ಅವನನ್ನು ಕುಷ್ಠರೋಗದಿಂದ ಶಿಕ್ಷಿಸಿದನು. ಆದುದರಿಂದ ಇವನು ಜೀವದಿಂದಿರುವವರೆಗೂ ಪ್ರತ್ಯೇಕವಾದ ಮನೆಯಲ್ಲಿ ವಾಸಮಾಡಬೇಕಾಯಿತು. ರಾಜಗೃಹಾಧಿಪತ್ಯವನ್ನೂ, ಪ್ರಜಾಪಾಲನೆಯನ್ನೂ ಇವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು.


ಆಗ ಯೆಹೋವನು ಉಜ್ಜನ ಮೇಲೆ ಕೋಪಗೊಂಡು, ಈ ತಪ್ಪಿಗೆ ಅವನನ್ನು ಸಂಹರಿಸಿದನು. ಅವನು ಅಲ್ಲೇ ದೇವರ ಮಂಜೂಷದ ಬಳಿಯಲ್ಲಿ ಸತ್ತನು.


ಸ್ವಹಸ್ತದಿಂದ ಮುಯ್ಯಿ ತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ನನ್ನನ್ನು ತಡೆದ ನೀನೂ, ನಿನ್ನ ಬುದ್ಧಿಯೂ ಸ್ತೋತ್ರಾರ್ಹವೆ. ಸರಿ.


ಅ ಹಸುಗಳು ತಾವಾಗಿ ಸ್ವದೇಶದ ದಾರಿ ಹಿಡಿದು ಬೇತ್ ಷೆಮೆಷಿನ ಕಡೆಗೆ ಹೋದರೆ ಈ ದೊಡ್ಡ ಕೇಡನ್ನು ಬರಮಾಡಿದವನು ಯೆಹೋವನೇ ಎಂದೂ, ಆ ಮಾರ್ಗವನ್ನು ಹಿಡಿಯದಿದ್ದರೆ ಆತನ ಹಸ್ತವು ನಮ್ಮನ್ನು ಬಾಧಿಸಲ್ಲಿಲ್ಲ ಇದು ಆಕಸ್ಮಿಕವಾಗಿ ಬಂದಿದೆ ಎಂದು, ತಿಳಿದುಕೊಳ್ಳಿರಿ” ಅಂದರು.


ಮಧ್ಯರಾತ್ರಿಯಲ್ಲಿ ಯೆಹೋವನು ಸಿಂಹಾಸನದಲ್ಲಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನವರೆಗೂ, ಐಗುಪ್ತ ದೇಶದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಸಂಹಾರ ಮಾಡಿದನು. ಪಶುಗಳ ಚೊಚ್ಚಲು ಮರಿಗಳನ್ನೂ ಸಂಹಾರಮಾಡಿದನು.


ಮರುದಿನ ಬೆಳಿಗ್ಗೆ ಅಮಲಿಳಿದ ನಂತರ ಈಕೆಯು ಈ ವರ್ತಮಾನವನ್ನು ಅವನಿಗೆ ತಿಳಿಸಲಾಗಿ, ಅವನ ಹೃದಯವೇ ನಿಂತಂತೆ ಆಯಿತು. ಅವನು ಸ್ತಬ್ಧನಾದನು.


ಯಾರೊಬ್ಬಾಮನು ಅಬೀಯನ ಜೀವಮಾನದಲ್ಲಿ ತಿರುಗಿ ಬಲಗೊಳ್ಳಲೇ ಇಲ್ಲ. ಯೆಹೋವನು ಅವನನ್ನು ಬಾಧಿಸಿದ್ದರಿಂದ ಅವನು ಸತ್ತನು.


ನೀನು ವಿಮುಖನಾಗಲು ತಲ್ಲಣಿಸುತ್ತವೆ; ಅವುಗಳ ಶ್ವಾಸವನ್ನು ತೆಗೆದುಬಿಡಲು ಅವು ಸತ್ತು ತಿರುಗಿ ಮಣ್ಣಿಗೆ ಸೇರುತ್ತವೆ.


ಅವರು ನಿಮಿಷಮಾತ್ರದಲ್ಲಿಯೇ ಹಾಳಾಗಿ ಹೋಗುತ್ತಾರೆ; ಭಯಂಕರ ರೀತಿಯಿಂದ ಸಂಹಾರವಾಗಿ ಮುಗಿದು ಹೋಗುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು