Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಬೇಗನೇ ಒಂದು ಕತ್ತೆಯನ್ನು ಹತ್ತಿ, ತನ್ನ ಐದು ಮಂದಿ ದಾಸಿಯರ ಸಹಿತವಾಗಿ ದಾವೀದನ ಸೇವಕರ ಜೊತೆಯಲ್ಲಿ ಹೊರಟು ಹೋಗಿ ಅವನ ಹೆಂಡತಿಯಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಅಲ್ಲದೆ ಬೇಗನೆ ಒಂದು ಕತ್ತೆಯನ್ನು ಹತ್ತಿ ತನ್ನ ಐದುಮಂದಿ ದಾಸಿಯರ ಸಹಿತವಾಗಿ ದಾವೀದನ ಸೇವಕರ ಜೊತೆಯಲ್ಲೆ ಹೊರಟುಹೋಗಿ ಅವನ ಹೆಂಡತಿಯಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಬೇಗನೆ ಒಂದು ಕತ್ತೆಯನ್ನು ಹತ್ತಿ ತನ್ನ ಐದು ಮಂದಿ ದಾಸಿಯರ ಸಹಿತವಾಗಿ ದಾವೀದನ ಸೇವಕರ ಜೊತೆಯಲ್ಲಿ ಹೊರಟುಹೋಗಿ ಅವನ ಹೆಂಡತಿಯಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಅಬೀಗೈಲಳು ಬೇಗನೆ ಒಂದು ಕತ್ತೆಯ ಮೇಲೇರಿ, ದಾವೀದನ ಸಂದೇಶಕರೊಂದಿಗೆ ಹೊರಟುಹೋದಳು. ಅಬೀಗೈಲಳು ಐದು ಜನ ಸೇವಕಿಯರನ್ನು ತನ್ನೊಂದಿಗೆ ಕರೆದುಕೊಂಡು ಹೋದಳು. ಅವಳು ದಾವೀದನ ಹೆಂಡತಿಯಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಅಬೀಗೈಲಳು ತ್ವರೆಯಾಗಿ ಎದ್ದು ಕತ್ತೆಯ ಮೇಲೆ ಹತ್ತಿಕೊಂಡು, ತನ್ನ ಸಂಗಡ ಇರುವ ಐದು ಮಂದಿ ದಾಸಿಯರನ್ನು ಕರೆದುಕೊಂಡು ದಾವೀದನ ಸೇವಕರ ಹಿಂದೆ ಹೋಗಿ, ಅವನಿಗೆ ಹೆಂಡತಿಯಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:42
7 ತಿಳಿವುಗಳ ಹೋಲಿಕೆ  

ಅವನೂ, ಅವನ ಜನರೂ ತಮ್ಮ ತಮ್ಮ ಕುಟುಂಬ ಸಹಿತವಾಗಿ ಆಕೀಷನ ಊರಾದ ಗತ್ ಊರಿನಲ್ಲಿ ವಾಸಮಾಡಿದರು. ದಾವೀದನ ಹೆಂಡತಿಯರಾಗಿರುವ ಇಜ್ರೇಲ್ಯಳಾದ ಅಹೀನೋವಮಳೂ, ಕರ್ಮೇಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಅವನ ಸಂಗಡ ಇದ್ದರು.


ದಾವೀದನ ಇಬ್ಬರು ಹೆಂಡತಿಯರಾದ ಇಜ್ರೇಲಿನವಳಾದ ಅಹೀನೋವಮಳೂ, ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸೆರೆಯಾಗಿ ಹೋಗಿದ್ದರು.


ಆಗ ದಾವೀದನು ತನ್ನ ಇಬ್ಬರು ಹೆಂಡತಿಯರಾದ ಇಜ್ರೇಲಿನ ಅಹೀನೋವಮಳನ್ನೂ, ಕರ್ಮೇಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳನ್ನೂ ಕರೆದುಕೊಂಡು ಅಲ್ಲಿಗೆ ಹೋದನು.


ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಹುಟ್ಟಿದ ಮಕ್ಕಳು; ಚೊಚ್ಚಲ ಮಗನು ಅಮ್ನೋನನು, ಇವನು ಇಜ್ರೇಲಿನವಳಾದ ಅಹೀನೋವಮಳಲ್ಲಿ ಹುಟ್ಟಿದವನು.


ಎರಡನೆಯವನು ಕಿಲಾಬನು. ಇವನು ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳಲ್ಲಿ ಹುಟ್ಟಿದವನು. ಮೂರನೆಯವನು ಅಬ್ಷಾಲೋಮನು. ಇವನು ಗೆಷೂರಿನ ಅರಸನಾದ ತಲ್ಮೈ ಎಂಬುವನ ಮಗಳಾದ ಮಾಕಳ ಪುತ್ರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು