ಆಗ ಮೂವತ್ತು ಜನರಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ, “ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯವನ್ನು ಕೊಡುವವನಾಗಿದ್ದಾನೆ” ಎಂದು ಹೇಳಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇಮಿಸಿದನು.
“ನಾನು ನನ್ನ ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.
ಅಹೀಮಾಚನು ಹತ್ತಿರ ಬಂದು ಅರಸನಿಗೆ, “ಶುಭವಾಗಲಿ” ಎಂದು ಹೇಳಿ ಸಾಷ್ಟಾಂಗನಮಸ್ಕಾರ ಮಾಡಿ, “ಅರಸನಿಗೆ ವಿರೋಧವಾಗಿ ಕೈಯೆತ್ತಿದವರನ್ನು ಸ್ವಾಧೀನಪಡಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ” ಎಂದನು.
ಅದಕ್ಕೆ ಅವನು, “ನೀವು ಸಮಾಧಾನವಾಗಿರಿ. ನೀವೇನೂ ಭಯಪಡಬೇಡಿರಿ ನಿಮಗೂ ನಿಮ್ಮ ತಂದೆಗೂ ದೇವರಾಗಿರುವಾತನು ನಿಮ್ಮ ಚೀಲಗಳಲ್ಲಿ ಹಣವನ್ನು ಇಟ್ಟಿರಬೇಕು. ನಿಮ್ಮ ಹಣವು ನನಗೆ ಮುಟ್ಟಿತು” ಎಂದು ಹೇಳಿ, ಅವನು ಸಿಮೆಯೋನನನ್ನು ಅವರ ಬಳಿಗೆ ಕರೆದುಕೊಂಡು ಬಂದನು.