Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 26:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯಾವ ಪಾಪಕ್ಕೆ ಕೈಹಾಕಿದೆನು? ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ, ಆತನಿಗೆ ಘಮಘಮಿಸುವ ನೈವೇದ್ಯವನ್ನು ಅಂಗೀಕರಿಸಬೇಕು. ಮನುಷ್ಯರಾಗಿದ್ದರೆ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ ಯಾಕೆಂದರೆ ಯೆಹೋವನ ಸ್ವತ್ತಿನಲ್ಲಿ ನನಗೆ ಪಾಲು ಸಿಕ್ಕದಂತೆ ‘ಹೋಗಿ ಅನ್ಯದೇವತೆಗಳನ್ನು ಸೇವಿಸು’ ಎಂದು ನನ್ನನ್ನು ತಳ್ಳಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನನ್ನ ಅರಸನಾದ ಒಡೆಯರು ದಯವಿಟ್ಟು ತಮ್ಮ ಸೇವಕನ ಮಾತುಗಳನ್ನು ಆಲಿಸಬೇಕು. ನಿಮ್ಮನ್ನು ನನಗೆ ವಿರೋಧವಾಗಿ ಎತ್ತಿ ಕಟ್ಟಿದವರು ಸರ್ವೇಶ್ವರನೇ ಆಗಿರುವ ಪಕ್ಷದಲ್ಲಿ ಅವರಿಗೆ ಗಮಗಮಿಸುವ ನೈವೇದ್ಯವನ್ನು ಸಮರ್ಪಿಸಬೇಕು. ಮನುಷ್ಯರಾಗಿದ್ದರೆ, ಈಗ ಅವರು ನನಗೆ ಸರ್ವೇಶ್ವರನ ಸೌಭಾಗ್ಯದಲ್ಲಿ ಪಾಲುಸಿಕ್ಕದಂತೆ, ‘ಹೋಗಿ ಅನ್ಯದೇವತೆಗಳನ್ನು ಪೂಜಿಸು’ ಎಂದು ನನ್ನನ್ನು ತಳ್ಳಿಬಿಟ್ಟಿದ್ದಾರೆ. ಆದುದರಿಂದ ಸರ್ವೇಶ್ವರನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ ಆತನಿಗೆ ಗಮಗವಿುಸುವ ನೈವೇದ್ಯವನ್ನು ಸಮರ್ಪಿಸಬೇಕು; ಮನುಷ್ಯರಾಗಿದ್ದರೆ ಈಗ ಅವರು ನನಗೆ ಯೆಹೋವನ ಸ್ವಾಸ್ತ್ಯದಲ್ಲಿ ಪಾಲುಸಿಕ್ಕದಂತೆ - ಹೋಗಿ ಅನ್ಯದೇವತೆಗಳನ್ನು ಸೇವಿಸು ಎಂದು ನನ್ನನ್ನು ತಳ್ಳಿಬಿಟ್ಟಿದ್ದಾರಾದದರಿಂದ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನನ್ನ ಒಡೆಯನೇ, ನನ್ನ ರಾಜನೇ, ನನ್ನ ಮಾತುಗಳನ್ನು ಆಲಿಸು! ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಯೆಹೋವನು ಮಾಡಿರುವುದಾದರೆ ಆತನಿಗೆ ನೈವೇದ್ಯವನ್ನು ಅರ್ಪಿಸೋಣ. ಆದರೆ ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಜನರು ಮಾಡಿದ್ದರೆ, ಅವರಿಗೆ ಯೆಹೋವನು ಕೇಡಾಗುವಂತೆ ಮಾಡಲಿ. ನನಗೆ ಯೆಹೋವನು ನೀಡಿದ ಭೂಮಿಯನ್ನು ನಾನು ಬಿಡುವಂತೆ ಜನರು ಬಲವಂತಪಡಿಸಿದರು. ‘ಹೋಗು, ಹೊರದೇಶೀಯರೊಂದಿಗೆ ನೆಲೆಸು. ಹೋಗು, ಇತರ ದೇವರುಗಳನ್ನು ಆರಾಧಿಸು’ ಎಂದು ಜನರು ನನಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನನ್ನ ಕೈಯಲ್ಲಿ ಏನು ಕೆಟ್ಟತನವಿದೆ? ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಯೆಹೋವ ದೇವರು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ, ಕಾಣಿಕೆಯನ್ನು ಅಂಗೀಕರಿಸಲಿ. ಆದರೆ ಮಾನವರು ಇದನ್ನು ಮಾಡಿದರೆ, ಅವರು ಯೆಹೋವ ದೇವರ ಮುಂದೆ ಶಾಪಗ್ರಸ್ತರಾಗಿರಲಿ. ಏಕೆಂದರೆ, ‘ನೀನು ಹೋಗಿ? ಅನ್ಯದೇವರುಗಳನ್ನು ಸೇವಿಸು,’ ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಯೆಹೋವ ದೇವರ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 26:19
32 ತಿಳಿವುಗಳ ಹೋಲಿಕೆ  

ನಮ್ಮ ಪಟ್ಟಣವು ಇಸ್ರಾಯೇಲರಲ್ಲಿ ಸಮಾಧಾನವುಳ್ಳದ್ದೂ, ರಾಜನಿಷ್ಠೆಯುಳ್ಳದ್ದೂ ಆಗಿದೆ. ನೀನು ಇಸ್ರಾಯೇಲರ ಪಟ್ಟಣಗಳಲ್ಲಿ ತಾಯಿಯೆಂದು ಹೆಸರುಗೊಂಡ ಈ ಪಟ್ಟಣವನ್ನು ಹಾಳುಮಾಡಬೇಕೆಂದಿರುವೆ. ನೀನು ಯೆಹೋವನ ಸ್ವತ್ತನ್ನು ನುಂಗಿಬಿಡುವುದೇಕೆ?” ಎಂದಳು.


ಇದಲ್ಲದೆ ಅವನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ, “ನೋಡಿರಿ, ನನ್ನಿಂದ ಹುಟ್ಟಿದ ನನ್ನ ಮಗನೇ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವಲ್ಲಿ ಈ ಬೆನ್ಯಾಮೀನನು ಹೀಗೆ ಮಾಡುವುದು ಯಾವ ದೊಡ್ಡ ಮಾತು? ಬಿಡಿರಿ, ಅವನು ಶಪಿಸಲಿ. ಹೀಗೆ ಮಾಡಬೇಕೆಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ್ದಾನೆ.


ಅರಸನು ತನ್ನ ಸೇವಕಿಯಾದ ನನ್ನ ಬಿನ್ನಹವನ್ನು ಲಾಲಿಸಿ ನನ್ನನ್ನೂ, ನನ್ನ ಮಗನನ್ನೂ ದೇವರ ಸ್ವತ್ತಿನಿಂದ ತೆಗೆದುಹಾಕಬೇಕೆಂದಿರುವವರ ಕೈಗೆ ಸಿಕ್ಕದಂತೆ ತಪ್ಪಿಸಿ ರಕ್ಷಿಸುವನೆಂದು ನಂಬಿಕೊಂಡಿದ್ದೇನೆ.’


ಅಯ್ಯೋ, ನಾನು ಮೇಷೆಕಿನವರಲ್ಲಿ ತಂಗಬೇಕಲ್ಲಾ! ಕೇದಾರಿನವರ ಪಾಳೆಯಗಳಲ್ಲಿ ವಾಸಿಸಬೇಕಾಯಿತಲ್ಲಾ!


ಸೈತಾನನು ಇಸ್ರಾಯೇಲರಿಗೆ ವಿರುದ್ಧ ಎದ್ದು, ಇಸ್ರಾಯೇಲರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದನು.


ಮರುದಿನ ದೇವರಿಂದ ಕಳುಹಿಸಲ್ಪಟ್ಟ ದುರಾತ್ಮವು ಸೌಲನ ಮೇಲೆ ಬಂದದ್ದರಿಂದ ಅವನು ಬುದ್ಧಿಗೆಟ್ಟು ಮನೆಯೊಳಗೆ ಕೂಗುತ್ತಿದ್ದನು. ಅವನ ಕೈಯಲ್ಲಿ ಒಂದು ಈಟಿ ಇತ್ತು. ದಾವೀದನು ವಾಡಿಕೆಯ ಪ್ರಕಾರ ಕಿನ್ನರಿಯನ್ನು ನುಡಿಸುತ್ತಾ ಇದ್ದನು.


ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, “ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ.


ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು. ಕರ್ತನು ಅವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಅವನಿಗೆ ಕೊಡುವನು.


ನಿಮ್ಮನ್ನು ಕಳವಳಪಡಿಸುವವರು ತಮ್ಮನೇ ತಾವು ಅಂಗಚ್ಛೇದನೆಯನ್ನಾದರೂ ಮಾಡಿಕೊಂಡರೆ ಚೆನ್ನಾಗಿತ್ತು.


ನೀನು ತೆಗೆದುಕೊಳ್ಳುವ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವುಂಟಾದರೆ ನೀನು ಪ್ರೀತಿಗೆ ತಕ್ಕಂತೆ ನಡೆಯುವವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಪ್ರಾಣಕೊಟ್ಟನೋ ಅವನನ್ನು ನಿನಗೆ ಇಷ್ಟವಾದ ಆಹಾರದ ನಿಮಿತ್ತ ಕೆಡಿಸಬಾರದು.


ನೀನು ಅವರನ್ನು ನೋಡಿ ಸಂತೋಷ ಸಂಭ್ರಮ ಪಡುವೆ, ನಿನ್ನ ಹೃದಯವು ಹರ್ಷಿಸಿ ಉಲ್ಲಾಸಿಸುವುದು; ಏಕೆಂದರೆ ಸಮುದ್ರ ವ್ಯಾಪಾರದ ಸಮೃದ್ಧಿಯು ನಿನಗೆ ಅತಿಯಾದ ಲಾಭತರುವುದು. ಕಡೆಗೆ ತಿರುಗುವುದು, ಜನಾಂಗಗಳ ಐಶ್ವರ್ಯವು ನಿನಗೆ ದೊರೆಯುವುದು.


ಆಳಿನ ಮೇಲೆ ದಣಿಗೆ ದೂರನ್ನು ಹೇಳಬೇಡ, ಅವನು ಶಪಿಸಾನು, ನಿನ್ನಲ್ಲೇ ದೋಷವು ಕಂಡು ಬಂದೀತು.


‘ಹೇಗೆ ಪ್ರೇರೇಪಿಸುವಿ?’ ಎಂದು ಯೆಹೋವನು ಕೇಳಲು ಅದು, ‘ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳಲ್ಲಿ ಸೇರುವೆನು’ ಎಂದು ಉತ್ತರಕೊಟ್ಟಿತು. ಆಗ ಆತನು ಅದಕ್ಕೆ, ‘ಹೋಗಿ ಅದರಂತೆ ಮಾಡು ಅವನನ್ನು ಪ್ರೇರೇಪಿಸಿ ಸಫಲವಾಗುವಿ’ ಅಂದನು.


ಯೆಹೋವನು ಪುನಃ ಇಸ್ರಾಯೇಲರ ಮೇಲೆ ಕೋಪಗೊಂಡು ದಾವೀದನನ್ನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳವರ ಜನಗಣತಿ ಮಾಡುವುದಕ್ಕೆ ಪ್ರೇರೇಪಿಸಿದನು.


ಆ ಮೇಲೆ ಅವನ ಪಾದಗಳ ಮೇಲೆ ಬಿದ್ದು ಅವನಿಗೆ, “ಸ್ವಾಮೀ ಅಪರಾಧವು ನನ್ನ ಮೇಲೆ ಇರಲಿ. ನಿನ್ನ ದಾಸಿಯು ಮಾತನಾಡುವುದಕ್ಕೆ ಅಪ್ಪಣೆಯಾಗಲಿ. ನನ್ನ ಮಾತನ್ನು ಲಾಲಿಸಬೇಕು.


ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು. ನಿಮ್ಮ ದೇವಸ್ಥಾನಗಳನ್ನು ನಾಶಮಾಡುವೆನು; ನೀವು ಸಮರ್ಪಿಸುವ ಸುಗಂಧದ್ರವ್ಯಗಳ ಪರಿಮಳವನ್ನು ನಾನು ಮೂಸಿಯೂ ನೋಡುವುದಿಲ್ಲ.


ಯೆಹೂದನು ಹತ್ತಿರಕ್ಕೆ ಬಂದು, “ನನ್ನ ಒಡೆಯನೇ, ನಿನ್ನ ಸೇವಕನಾದ ನಾನು ಒಂದು ಮಾತನ್ನು ನನ್ನ ಒಡೆಯನಿಗೆ ಬಿಡಿಸಿ ಹೇಳುವುದಕ್ಕೆ ಅಪ್ಪಣೆಯಾಗಬೇಕು. ನಿನ್ನ ದಾಸನ ಮೇಲೆ ಕೋಪಗೊಳ್ಳಬಾರದು. ಏಕೆಂದರೆ ನೀನು ಫರೋಹನಿಗೆ ಸಮಾನನು ಎಂದು ನಾನು ಬಲ್ಲೇ.


“ದಾವೀದನು ನಿನಗೆ ಕೇಡುಮಾಡಬೇಕೆಂದಿರುತ್ತಾನೆಂದು ಹೇಳುವವರ ಮಾತಿಗೆ ನೀನೇಕೆ ಕಿವಿಗೊಡುತ್ತೀ?


ದಾವೀದನು ತನ್ನ ಮನಸ್ಸಿನಲ್ಲಿ, “ನಾನು ಇಲ್ಲೇ ಇದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಸಾಯಲೇಬೇಕು ಆದ್ದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆ ಮೇಲೆ ಸೌಲನು ಇಸ್ರಾಯೇಲ್ಯರ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕದೆ ಬಿಟ್ಟುಬಿಡುವನು. ನಾನು ಅವನ ಕೈಗೆ ತಪ್ಪಿಸಿಕೊಂಡವನಾಗಿರುವೆನು” ಅಂದುಕೊಂಡನು.


ಆಗ ಅರಸನಾದ ದಾವೀದನು ಗಿಬ್ಯೋನ್ಯರನ್ನು ಕರೆದು, “ನಾನು ನಿಮಗೋಸ್ಕರ ಏನು ಮಾಡಬೇಕೆನ್ನುತ್ತೀರಿ? ನಿಮಗೆ ಪ್ರಾಯಶ್ಚಿತ್ತವಾಗಿ ಯಾವುದನ್ನು ಮಾಡಿದರೆ ನೀವು ಯೆಹೋವನ ಸ್ವತ್ತನ್ನು ಆಶೀರ್ವದಿಸುವಿರಿ?” ಎಂದು ಕೇಳಿದನು.


ಇಸ್ರಾಯೇಲರ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗಬಾರದು. ಇಸ್ರಾಯೇಲರೆಲ್ಲರೂ ತಮ್ಮತಮ್ಮ ಕುಲಗಳ ಸ್ವತ್ತನ್ನು ಹೊಂದಿಕೊಂಡೇ ಇರಬೇಕು.


ಹೀಗೆ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗದೆ ಇಸ್ರಾಯೇಲರ ಪ್ರತಿಯೊಂದು ಕುಲವು ತನ್ನ ಸ್ವತ್ತನ್ನು ಹೊಂದಿಕೊಂಡೇ ಇರುವುದು” ಎಂದು ಆಜ್ಞಾಪಿಸಿದನು.


ಏಕೆಂದರೆ ನಿಮ್ಮ ದೇವರಾದ ಯೆಹೋವನು, “ಇವರು ಸಂಪೂರ್ಣ ಹೃದಯದಿಂದಲೂ ಮತ್ತು ಸಂಪೂರ್ಣ ಮನಸ್ಸಿನಿಂದಲೂ ತನ್ನನ್ನೇ ಪ್ರೀತಿಸುವವರು ಹೌದೋ ಅಲ್ಲವೋ” ಎಂಬುದನ್ನು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾನೆ.


ಅದಕ್ಕೆ ಅರಸನು, “ಚೆರೂಯಳ ಮಕ್ಕಳೇ, ನಾನು ನಿಮಗೇನು ಮಾಡಿದೆ? ಬಹುಶಃ ಅವನು ನನ್ನನ್ನು ಶಪಿಸಿದ್ದಾನೆ, ಏಕೆಂದರೆ, ‘ದಾವೀದನನ್ನು ಶಪಿಸು’ ಎಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ ಮೇಲೆ ‘ನೀನು ಹೀಗೇಕೆ ಮಾಡಿದಿ?’ ಎಂದು ಅವನನ್ನು ಕೇಳುವವರು ಯಾರು?” ಎಂದು ಉತ್ತರ ಕೊಟ್ಟನು.


ಆತನು ನಿನ್ನ ಇಷ್ಟಾರ್ಥವನ್ನು ನೆರವೇರಿಸಲಿ; ನಿನ್ನ ಎಲ್ಲಾ ಸಂಕಲ್ಪಗಳನ್ನು ಸಫಲಮಾಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು