Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 26:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅನಂತರ ತಾನಾಗಿಯೇ ಸೌಲನ ಪಾಳೆಯದ ಹತ್ತಿರ ಹೋಗಿ, ಸೌಲನೂ, ನೇರನ ಮಗನಾದ ಅವನ ಸೇನಾಪತಿ ಅಬ್ನೇರನೂ ಮಲಗಿದ್ದ ಸ್ಥಳಗಳನ್ನು ಕಂಡುಹಿಡಿದನು. ಸೌಲನು ರಥಗಳನ್ನು ಬಿಟ್ಟಿರುವ ಸ್ಥಳಮಧ್ಯದಲ್ಲಿ ಮಲಗಿದ್ದನು. ಅವನ ಸುತ್ತಲೂ ಸೈನಿಕರು ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅನಂತರ ತಾನಾಗಿಯೇ ಸೌಲನ ಪಾಳೆಯದ ಹತ್ತಿರಕ್ಕೆ ಹೋಗಿ, ಸೌಲನು ಹಾಗು ನೇರನ ಮಗನಾದ ಅವನ ಸೇನಾಪತಿ ಅಬ್ನೇರನು ಮಲಗಿದ್ದ ಸ್ಥಳಗಳನ್ನು ಕಂಡುಹಿಡಿದನು. ಸೌಲನು ಬಂಡಿಗಳನ್ನು ಬಿಡುವ ಸ್ಥಳ ಮಧ್ಯದಲ್ಲಿ ಮಲಗಿದ್ದನು. ಅವನ ಸುತ್ತಲೂ ಸೈನಿಕರು ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅನಂತರ ತಾನಾಗಿಯೇ ಸೌಲನ ಪಾಳೆಯದ ಹತ್ತಿರ ಹೋಗಿ ಸೌಲನೂ ನೇರನ ಮಗನಾದ ಅವನ ಸೇನಾಪತಿ ಅಬ್ನೇರನೂ ಮಲಗಿದ್ದ ಸ್ಥಳಗಳನ್ನು ಕಂಡುಹಿಡಿದನು. ಸೌಲನು ಬಂಡಿಗಳನ್ನು ಬಿಟ್ಟಿರುವ ಸ್ಥಳಮಧ್ಯದಲ್ಲಿ ಮಲಗಿದ್ದನು; ಅವನ ಸುತ್ತಲೂ ಸೈನಿಕರು ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಸೌಲನು ಪಾಳೆಯ ಮಾಡಿಕೊಂಡಿದ್ದ ಸ್ಥಳಕ್ಕೆ ದಾವೀದನು ಹೋಗಿ ಸೌಲನು ಮತ್ತು ಅಬ್ನೇರನು ಮಲಗಿರುವ ಸ್ಥಳವನ್ನು ನೋಡಿಕೊಂಡನು. (ನೇರನ ಮಗನಾದ ಅಬ್ನೇರನು ಸೌಲನ ಸೈನ್ಯದಲ್ಲಿ ಸೇನಾಪತಿಯಾಗಿದ್ದನು.) ಸೌಲನು ಪಾಳೆಯದ ಮಧ್ಯದಲ್ಲಿ ಮಲಗಿದ್ದನು. ಸೌಲನ ಸುತ್ತ ಸೈನ್ಯವೆಲ್ಲವೂ ಇದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದಾವೀದನು ಎದ್ದು ಸೌಲನು ಇಳಿದುಕೊಂಡಿದ್ದ ಸ್ಥಳಕ್ಕೆ ಬಂದನು. ಸೌಲನೂ, ಅವನ ದಂಡಿನ ನಾಯಕನಾಗಿರುವ ನೇರನ ಮಗನಾದ ಅಬ್ನೇರನೂ ಮಲಗಿರುವ ಸ್ಥಳವನ್ನು ದಾವೀದನು ನೋಡಿದನು. ಸೌಲನು ಮಧ್ಯದಲ್ಲಿ ಮಲಗಿದ್ದನು. ಜನರು ಅವನ ಸುತ್ತಲೂ ದಂಡಾಗಿ ಇಳಿದುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 26:5
10 ತಿಳಿವುಗಳ ಹೋಲಿಕೆ  

ದಾವೀದನು ಫಿಲಿಷ್ಟಿಯರೊಡನೆ ಯುದ್ಧಮಾಡುವುದಕ್ಕೆ ಹೊರಟದ್ದನ್ನು ಸೌಲನು ಕಂಡು ತನ್ನ ಸೇನಾಪತಿಯಾದ ಅಬ್ನೇರನನ್ನು, “ಅಬ್ನೇರನೇ ಈ ಹುಡುಗನು ಯಾರ ಮಗನು?” ಎಂದು ಕೇಳಿದ್ದಕ್ಕೆ ಅವನು ಸೌಲನಿಗೆ, “ಅರಸನೇ ನಿನ್ನ ಜೀವದಾಣೆ ನನಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟನು.


ದಾವೀದನು ಮರುದಿನ ಬೆಳಿಗ್ಗೆ ಎದ್ದು ಕುರಿ ಕಾಯುವವನಿಗೆ ಕುರಿಗಳನ್ನು ಒಪ್ಪಿಸಿ, ತನ್ನ ತಂದೆಯಾದ ಇಷಯನು ಹೇಳಿದವುಗಳನ್ನು ತೆಗೆದುಕೊಂಡು ಸೈನ್ಯವು ಹೊರಟು ಯುದ್ಧಕ್ಕಾಗಿ ಅರ್ಭಟಿಸುವ ಹೊತ್ತಿನಲ್ಲಿ ಪಾಳೆಯದ ರಥಗಳು ನಿಂತಿದ್ದ ಸ್ಥಳಕ್ಕೆ ಬಂದನು.


ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾತಾನನನ್ನೂ, ಮಲ್ಕೀಷೂವನನ್ನೂ, ಅಬೀನಾದಾಬನನ್ನೂ, ಎಷ್ಬಾಳನನ್ನು ಪಡೆದನು.


ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ರಹಸ್ಯ ಸಂಭಾಷಣೆಗೋ ಎಂಬಂತೆ ಊರಬಾಗಿಲಿನೊಳಗೆ ಕರೆದುಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನನ್ನು ಕೊಂದದ್ದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದು ಕೊಂದನು.


ಬೆನ್ಯಾಮೀನ್ ಕುಲದಲ್ಲಿ ಕೀಷನೆಂಬ ಒಬ್ಬ ಐಶ್ವರ್ಯವಂತ ಮತ್ತು ಪ್ರಭಾವಶಾಲಿಯಾದ ಮನುಷ್ಯನಿದ್ದನು. ಕೀಷನು ಅಬೀಯೇಲನ ಮಗ, ಅಬೀಯೇಲನು ಚೆರೋರನ ಮಗ, ಬೆಕೋರತನ ಮೊಮ್ಮಗ ಹಾಗೂ ಅಫೀಹನ ಮರಿಮಗನು.


ಅವನು ಕೂಡಲೇ ಗೂಢಚಾರರನ್ನು ಕಳುಹಿಸಿ ಸೌಲನು ಇಳಿದುಕೊಂಡಿದ್ದ ಸ್ಥಳವನ್ನು ಗೊತ್ತುಮಾಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು