1 ಸಮುಯೇಲ 26:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಗ ದಾವೀದನು ಹಿತ್ತಿಯನ ಮಗನಾದ ಅಹೀಮೆಲೆಕನಿಗೂ, ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ, “ನಿಮ್ಮಲ್ಲಿ ನನ್ನ ಸಂಗಡ ಸೌಲನ ಪಾಳೆಯಕ್ಕೆ ಯಾರು ಬರುವಿರಿ?” ಎಂದು ಕೇಳಿದ್ದಕ್ಕೆ ಅಬೀಷೈಯು, “ನಾನು ಬರುತ್ತೇನೆ” ಎಂದು ಉತ್ತರ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನು ಹಾಗು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯನ್ನು ಉದ್ದೇಶಿಸಿ, “ನಿಮ್ಮಲ್ಲಿ ನನ್ನ ಸಂಗಡ ಸೌಲನ ಪಾಳೆಯಕ್ಕೆ ಯಾರು ಬರುವಿರಿ?” ಎಂದು ಕೇಳಿದನು. ಅದಕ್ಕೆ ಅಬೀಷೈಯು, “ನಾನು ಬರುತ್ತೇನೆ,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನೂ ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯನ್ನೂ ಕುರಿತು - ನಿಮ್ಮಲ್ಲಿ ನನ್ನ ಸಂಗಡ ಸೌಲನ ಪಾಳೆಯಕ್ಕೆ ಯಾರು ಬರುವಿರಿ ಎಂದು ಕೇಳಿದ್ದಕ್ಕೆ ಅಬೀಷೈಯು - ನಾನು ಬರುತ್ತೇನೆ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ದಾವೀದನು ಹಿತ್ತಿಯನಾದ ಅಹೀಮೆಲೆಕನ ಮತ್ತು ಚೆರೂಯಳ ಮಗನೂ ಯೋವಾಬನ ಸಹೋದರನೂ ಆದ ಅಬೀಷೈರೊಡನೆ ಮಾತನಾಡಿದನು. ಅವನು ಅವರಿಗೆ, “ನನ್ನೊಡನೆ ಸೌಲನ ಪಾಳೆಯಕ್ಕೆ ಯಾರು ಬರುತ್ತೀರಿ?” ಎಂದು ಕೇಳಿದನು. “ನಾನು ಬರುತ್ತೇನೆ” ಎಂದು ಅಬೀಷೈ ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನು ಮತ್ತು ಚೆರೂಯಳ ಮಗನಾಗಿರುವ ಯೋವಾಬನ ಸಹೋದರ ಅಬೀಷೈಯನ್ನು ನೋಡಿ, “ನನ್ನ ಸಂಗಡ ಸೌಲನ ದಂಡಿನಲ್ಲಿ ಪ್ರವೇಶಿಸಲು ಬರುವವರು ಯಾರು?” ಎಂದು ಕೇಳಿದನು. ಅದಕ್ಕೆ ಅಬೀಷೈಯನು, “ನಾನು ನಿನ್ನ ಸಂಗಡ ಬರುವೆನು,” ಎಂದನು. ಅಧ್ಯಾಯವನ್ನು ನೋಡಿ |
ಯೆರುಬ್ಬೇಷೆತನ ಮಗನಾದ ಅಬೀಮೆಲೇಕನನ್ನು ಕೊಂದವರು ಯಾರು ಎಂದು ನಿಮಗೆ ಗೊತ್ತಿಲ್ಲವೋ? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲನ್ನು ಅವನ ಮೇಲೆ ಎತ್ತಿ ಹಾಕಿ ಅವನನ್ನು ಕೊಂದಳಲ್ಲವೇ. ಹೀಗಿರುವುದರಿಂದ ನೀವು ಗೋಡೆಯ ಸಮೀಪಕ್ಕೆ ಹೋದದ್ದೇಕೆ?’ ಎಂದು ಕೇಳಿದರೆ ನೀನು, ಹಿತ್ತಿಯನಾದ ನಿನ್ನ ಸೇವಕ ಊರೀಯನು ಮೃತನಾದನೆಂದು ಹೇಳು” ಎಂಬುದಾಗಿ ಆಜ್ಞಾಪಿಸಿ ಅವನನ್ನು ಕಳುಹಿಸಿದನು.