Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 26:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದಾವೀದನೂ ಮತ್ತು ಅಬೀಷೈಯೂ ರಾತ್ರಿಯಲ್ಲಿ ಆ ಪಾಳೆಯಕ್ಕೆ ಹೋದಾಗ ಸೌಲನು ಬಂಡಿಗಳ ಗುಂಪಿನ ಮಧ್ಯದಲ್ಲಿ ಮಲಗಿಕೊಂಡು ನಿದ್ರೆಮಾಡುತ್ತಿದ್ದನು. ಅವನ ಬರ್ಜಿಯು ಅವನ ತಲೆಯ ಹತ್ತಿರ ನೆಲದಲ್ಲಿ ನೆಡಲ್ಪಟ್ಟಿತ್ತು. ಅಬ್ನೇರನೂ, ಸೈನಿಕರೂ ಅವನ ಸುತ್ತಲೂ ಮಲಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ದಾವೀದನು ಮತ್ತು ಅಬೀಷೈಯು, ರಾತ್ರಿಯಲ್ಲಿ ಆ ಪಾಳೆಯಕ್ಕೆ ಹೋದಾಗ ಸೌಲನು ಬಂಡಿಗಳ ಗುಂಪಿನ ಮಧ್ಯೆ ಮಲಗಿಕೊಂಡು ನಿದ್ರೆಮಾಡುತ್ತಿದ್ದನು. ಅವನ ಭರ್ಜಿಯನ್ನು ಅವನ ತಲೆಯ ಹತ್ತಿರ ನೆಲಕ್ಕೆ ತಿವಿದು ನಿಲ್ಲಿಸಲಾಗಿತ್ತು. ಅಬ್ನೇರನೂ ಸೈನಿಕರೂ ಅವನ ಸುತ್ತಲೂ ಮಲಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದಾವೀದನೂ ಅಬೀಷೈಯೂ ರಾತ್ರಿಯಲ್ಲಿ ಆ ಪಾಳೆಯಕ್ಕೆ ಹೋದಾಗ ಸೌಲನು ಬಂಡಿಗಳ ಗುಂಪಿನ ಮಧ್ಯದಲ್ಲಿ ಮಲಗಿಕೊಂಡು ನಿದ್ರೆಮಾಡುತ್ತಿದ್ದನು. ಅವನ ಬರ್ಜಿಯು ಅವನ ತಲೆಯ ಹತ್ತಿರ ನೆಲದಲ್ಲಿ ನೆಡಲ್ಪಟ್ಟಿತ್ತು. ಅಬ್ನೇರನೂ ಸೈನಿಕರೂ ಅವನ ಸುತ್ತಲೂ ಮಲಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ರಾತ್ರಿಯಾಯಿತು. ದಾವೀದ ಮತ್ತು ಅಬೀಷೈ ಸೌಲನ ಪಾಳೆಯಕ್ಕೆ ಹೋದರು. ಪಾಳೆಯದ ಮಧ್ಯದಲ್ಲಿ ಸೌಲನು ನಿದ್ರಿಸುತ್ತಿದ್ದನು. ಅವನ ಭರ್ಜಿಯು ಅವನ ತಲೆಯ ಹತ್ತಿರ ನೆಲದಲ್ಲಿ ನೆಡಲ್ಪಟ್ಟಿತ್ತು. ಸೌಲನ ಸುತ್ತಲೂ ಅಬ್ನೇರನು ಸೈನ್ಯದೊಡನೆ ನಿದ್ರಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದಾವೀದನೂ, ಅಬೀಷೈಯನೂ ರಾತ್ರಿಯಲ್ಲಿ ಆ ಜನರ ಬಳಿಗೆ ಬಂದರು. ಸೌಲನು ಕಂದಕದೊಳಗೆ ಮಲಗಿ ನಿದ್ರೆ ಮಾಡುತ್ತಿದ್ದನು. ಅವನ ಈಟಿಯು ಅವನ ತಲೆದಿಂಬಿನ ಬಳಿಯಲ್ಲಿ ನೆಟ್ಟಿತ್ತು. ಆದರೆ ಅವನ ಸುತ್ತಲು ಅಬ್ನೇರನೂ, ಜನರೂ ಮಲಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 26:7
5 ತಿಳಿವುಗಳ ಹೋಲಿಕೆ  

ಮತ್ತು ನಿಮ್ಮ ಹೆಂಡತಿ ಮಕ್ಕಳಿಗೋಸ್ಕರ ಐಗುಪ್ತ ದೇಶದಿಂದ ರಥಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರೆದುಕೊಂಡು ಬನ್ನಿರಿ.


ದಾವೀದನು ಮರುದಿನ ಬೆಳಿಗ್ಗೆ ಎದ್ದು ಕುರಿ ಕಾಯುವವನಿಗೆ ಕುರಿಗಳನ್ನು ಒಪ್ಪಿಸಿ, ತನ್ನ ತಂದೆಯಾದ ಇಷಯನು ಹೇಳಿದವುಗಳನ್ನು ತೆಗೆದುಕೊಂಡು ಸೈನ್ಯವು ಹೊರಟು ಯುದ್ಧಕ್ಕಾಗಿ ಅರ್ಭಟಿಸುವ ಹೊತ್ತಿನಲ್ಲಿ ಪಾಳೆಯದ ರಥಗಳು ನಿಂತಿದ್ದ ಸ್ಥಳಕ್ಕೆ ಬಂದನು.


ಆಗ ದಾವೀದನು ಹಿತ್ತಿಯನ ಮಗನಾದ ಅಹೀಮೆಲೆಕನಿಗೂ, ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ, “ನಿಮ್ಮಲ್ಲಿ ನನ್ನ ಸಂಗಡ ಸೌಲನ ಪಾಳೆಯಕ್ಕೆ ಯಾರು ಬರುವಿರಿ?” ಎಂದು ಕೇಳಿದ್ದಕ್ಕೆ ಅಬೀಷೈಯು, “ನಾನು ಬರುತ್ತೇನೆ” ಎಂದು ಉತ್ತರ ಕೊಟ್ಟನು.


ಅಬೀಷೈಯು ದಾವೀದನಿಗೆ, “ದೇವರು ಈ ಹೊತ್ತು ನಿನ್ನ ವೈರಿಯನ್ನು ನಿನ್ನ ಕೈಗೆ ಒಪ್ಪಿಸಿದ್ದಾನೆ, ಅಪ್ಪಣೆಯಾಗಲಿ ನಾನು ಬರ್ಜಿಯಿಂದ ಒಂದೇ ಪೆಟ್ಟಿನಲ್ಲಿ ಅವನನ್ನು ನೆಲಕ್ಕೆ ಹತ್ತಿಕೊಳ್ಳುವಂತೆ ತಿವಿಯುವೆನು. ಎರಡನೆಯ ಸಾರಿ ಹೊಡೆಯುವಂತ ಅವಕಾಶವಿರುವುದಿಲ್ಲ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು