1 ಸಮುಯೇಲ 27:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಒಂದು ದಿನ ದಾವೀದನು ಆಕೀಷನಿಗೆ, “ನಿನ್ನ ಸೇವಕನಾದ ನಾನು ನಿನ್ನ ಸಂಗಡ ರಾಜಧಾನಿಯಲ್ಲೇಕೆ ವಾಸಿಸಬೇಕು? ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿರುವುದಾದರೆ ಯಾವುದಾದರು ಒಂದು ಪಟ್ಟಣದಲ್ಲಿ ನನಗೆ ಸ್ಥಳಕೊಡು. ನಾನು ಅಲ್ಲಿ ವಾಸಮಾಡುವೆನು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಒಂದು ದಿನ ದಾವೀದನು ಆಕೀಷನಿಗೆ, “ನಿಮ್ಮ ಸೇವಕನಾದ ನಾನು ನಿಮ್ಮ ಸಂಗಡ ರಾಜಧಾನಿಯಲ್ಲೇಕೆ ವಾಸಿಸಬೇಕು? ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಿರುವುದಾದರೆ ಯಾವುದಾದರೊಂದು ಹಳ್ಳಿಯಲ್ಲಿ ನನಗೆ ಸ್ಥಳಕೊಡಿಸಿ; ನಾನು ಅಲ್ಲೆ ವಾಸಿಸುವೆನು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಒಂದು ದಿನ ದಾವೀದನು ಆಕೀಷನಿಗೆ - ನಿನ್ನ ಸೇವಕನಾದ ನಾನು ನಿನ್ನ ಸಂಗಡ ರಾಜಧಾನಿಯಲ್ಲೇಕೆ ವಾಸಿಸಬೇಕು? ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಿರುವದಾದರೆ ಯಾವದಾದರೊಂದು ಹಳ್ಳಿಯಲ್ಲಿ ನನಗೆ ಸ್ಥಳಕೊಡಿಸು, ನಾನು ಅಲ್ಲಿ ವಾಸಿಸುವೆನು ಅನ್ನಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ದಾವೀದನು ಆಕೀಷನಿಗೆ, “ನೀನು ನನ್ನನ್ನು ಮೆಚ್ಚಿಕೊಂಡಿದ್ದರೆ ಯಾವುದಾದರೊಂದು ಊರಲ್ಲ್ಲಿ ನನಗೆ ಸ್ಥಳವನ್ನು ಕೊಡು. ನಾನು ನಿನ್ನ ಸೇವಕನಷ್ಟೆ. ನಾನು ನಿನ್ನೊಡನೆ ಈ ರಾಜಧಾನಿಯಲ್ಲಿ ಇರುವುದಕ್ಕಿಂತ ಅಲ್ಲಿ ವಾಸಮಾಡುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ದಾವೀದನು ಆಕೀಷನಿಗೆ, “ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದ್ದರೆ, ಗ್ರಾಮಾಂತರಗಳಲ್ಲಿ ನಾನು ಇರುವುದಕ್ಕೆ ಒಂದು ಸ್ಥಳ ನನಗೆ ಕೊಡು. ನಿನ್ನ ದಾಸನು ಏಕೆ ನಿನ್ನ ಸಂಗಡ ರಾಜ್ಯದ ಪಟ್ಟಣದಲ್ಲಿ ಇರಬೇಕು?” ಎಂದನು. ಅಧ್ಯಾಯವನ್ನು ನೋಡಿ |