Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 27:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದಾವೀದನು ಸ್ತ್ರೀಪುರುಷರಲ್ಲಿ ಒಬ್ಬರನ್ನೂ ಉಳಿಸದೆ ದೇಶದ ಎಲ್ಲಾ ನಿವಾಸಿಗಳನ್ನು ಕೊಂದು, ಕುರಿ, ದನ, ಕತ್ತೆ, ಒಂಟೆ, ಉಡುಗೊರೆ ಇವುಗಳನ್ನು ತೆಗೆದುಕೊಂಡು ಆಕೀಷನ ಬಳಿಗೆ ಹೋಗುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸ್ತ್ರೀಪುರುಷರಲ್ಲಿ ಒಬ್ಬರನ್ನೂ ಉಳಿಸದೆ ದೇಶದ ನಿವಾಸಿಗಳನ್ನೆಲ್ಲ ಕೊಂದು, ದನ, ಕುರಿ, ಕತ್ತೆ, ಒಂಟೆ, ಉಡುಗೊರೆ ಇವುಗಳನ್ನು ತೆಗೆದುಕೊಂಡು ದಾವೀದನು ಆಕೀಷನ ಬಳಿಗೆ ಹೋಗುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದಾವೀದನು ಸ್ತ್ರೀಪುರುಷರಲ್ಲಿ ಒಬ್ಬರನ್ನೂ ಉಳಿಸದೆ ದೇಶದ ಎಲ್ಲಾ ನಿವಾಸಿಗಳನ್ನು ಕೊಂದು ಕುರಿ, ದನ, ಕತ್ತೆ, ಒಂಟೆ, ಉಡುಗೊರೆ ಇವುಗಳನ್ನು ತೆಗೆದುಕೊಂಡು ಆಕೀಷನ ಬಳಿಗೆ ಹೋಗುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದಾವೀದನು ಆ ಪ್ರದೇಶದ ಜನರೊಂದಿಗೆ ಯುದ್ಧಮಾಡಿ ಯಾರನ್ನೂ ಜೀವಸಹಿತ ಬಿಡಲಿಲ್ಲ. ಅವರಿಗೆ ಸೇರಿದ ಕುರಿಗಳನ್ನು ದನಗಳನ್ನು, ಹೇಸರಕತ್ತೆಗಳನ್ನು, ಒಂಟೆಗಳನ್ನು ಮತ್ತು ಬಟ್ಟೆಗಳನ್ನು ದಾವೀದನು ವಶಪಡಿಸಿಕೊಂಡನು. ನಂತರ ಅವುಗಳನ್ನು ಆಕೀಷನ ಬಳಿಗೆ ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ದಾವೀದನು ಪುರುಷರನ್ನಾದರೂ, ಸ್ತ್ರೀಯರನ್ನಾದರೂ ಉಳಿಸದೆ, ಆ ಸೀಮೆಯನ್ನು ಹೊಡೆದು, ಕುರಿಪಶುಗಳನ್ನೂ, ಕತ್ತೆಗಳನ್ನೂ, ಒಂಟೆಗಳನ್ನೂ, ವಸ್ತ್ರಗಳನ್ನೂ ತೆಗೆದುಕೊಂಡು ಆಕೀಷನ ಬಳಿಗೆ ತಿರುಗಿಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 27:9
9 ತಿಳಿವುಗಳ ಹೋಲಿಕೆ  

ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವುದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ, ಶಿಶುಗಳನ್ನೂ, ಎತ್ತು, ಕುರಿ, ಕತ್ತೆ, ಒಂಟೆ, ಇವುಗಳನ್ನೂ ಕನಿಕರವಿಲ್ಲದೆ ಕೊಂದುಹಾಕು ಎಂದು ಹೇಳುತ್ತಾನೆ’” ಅಂದನು.


ಆಗ ಸೌಲನು ಅಮಾಲೇಕ್ಯರನ್ನು ಹವೀಲಾ ಪ್ರಾಂತ್ಯದಿಂದ ಐಗುಪ್ತದ ಪೂರ್ವದಿಕ್ಕಿನಲ್ಲಿರುವ ಶೂರಿನವರೆಗೆ ಅವರನ್ನು ಸಂಹರಿಸುತ್ತಾ ಹೋದನು.


ಪಟ್ಟಣದಲ್ಲಿದ್ದ ಗಂಡಸರನ್ನೂ, ಹೆಂಗಸರನ್ನೂ, ಹುಡುಗರನ್ನೂ, ಮುದುಕರನ್ನೂ, ದನ, ಕುರಿ ಕತ್ತೆಗಳನ್ನೂ ಸಂಪೂರ್ಣವಾಗಿ ಕತ್ತಿಯಿಂದ ಸಂಹರಿಸಿಬಿಟ್ಟರು.


ಆನಂತರ ಮೋಶೆಯು ಇಸ್ರಾಯೇಲರನ್ನು ಕೆಂಪುಸಮುದ್ರದ ಮೂಲಕವಾಗಿ ನಡೆಸಿದನು. ಅವರು ಶೂರ್ ಮರುಭೂಮಿಯಲ್ಲಿ ಮೂರು ದಿನಗಳು ನೀರಿಲ್ಲದೆ ಪ್ರಯಾಣ ಮಾಡಿದರು.


ಇಷ್ಮಾಯೇಲ್ಯರು ಹವೀಲದಿಂದ ಐಗುಪ್ತ ದೇಶದ ಮೂಡಲಲ್ಲಿರುವ ಅಶ್ಶೂರಿನ ದಾರಿಯಲ್ಲಿರುವ ಶೂರಿನ ತನಕ ವಾಸಮಾಡಿದರು. ಹೀಗೆ ಅವರು ತಮ್ಮ ಸಂಬಂಧಿಕರ ಎದುರಾಗಿ ವಾಸಿಸಿದರು.


ಅವಳು ಮರಳುಗಾಡಿನಲ್ಲಿ ಶೂರಿನ ಮಾರ್ಗದ ನೀರಿನ ಬುಗ್ಗೆಯ ಹತ್ತಿರ ಇರುವಾಗ ಯೆಹೋವನ ದೂತನು ಅವಳನ್ನು ಕಂಡು,


ಅವರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದು, ಎಲ್ಲಾ ಜನರನ್ನು ಕತ್ತಿಯಿಂದ ಸಂಹರಿಸಿದನು.


ಅವನಿಗೆ ಏಳು ಸಾವಿರ ಕುರಿಗಳೂ, ಮೂರು ಸಾವಿರ ಒಂಟೆಗಳೂ, ಐನೂರು ಜೋಡಿ ಎತ್ತುಗಳೂ, ಐನೂರು ಹೆಣ್ಣು ಕತ್ತೆಗಳೂ, ಬಹುಮಂದಿ ಸೇವಕರೂ ಇದ್ದುದರಿಂದ ಅವನು ಮೂಡಣ ದೇಶದವರಲ್ಲೆಲ್ಲಾ ಹೆಚ್ಚು ಸ್ವತ್ತುಳ್ಳವನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು