1 ಸಮುಯೇಲ 28:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕಾಗಿ ಸೈನ್ಯವನ್ನು ಕೂಡಿಸತೊಡಗಿದರು. ಆಗ ಆಕೀಷನು ದಾವೀದನಿಗೆ, “ನೀನೂ ನಿನ್ನ ಜನರೂ ಯುದ್ಧಕ್ಕೆ ನನ್ನ ಜೊತೆಯಲ್ಲಿ ಬರಬೇಕೆಂಬುದು ನಿನಗೆ ಗೊತ್ತಿಲ್ಲವೋ” ಎನ್ನಲು ದಾವೀದನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಯೇಲರೊಡನೆ ಯುದ್ಧಮಾಡುವುದಕ್ಕಾಗಿ ಸೈನ್ಯವನ್ನು ಕೂಡಿಸತೊಡಗಿದರು. ಆಗ ಆಕೀಷನು ದಾವೀದನಿಗೆ, “ನೀನೂ ನಿನ್ನ ಜನರೂ ಯುದ್ಧಕ್ಕೆ ನನ್ನ ಜೊತೆಯಲ್ಲೇ ಬರಬೇಕೆಂಬುದು ನಿನಗೆ ಗೊತ್ತಿದೆಯಲ್ಲವೇ?’ ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲ್ಯರೊಡನೆ ಯುದ್ಧಮಾಡುವದಕ್ಕಾಗಿ ಸೈನ್ಯವನ್ನು ಕೂಡಿಸತೊಡಗಿದರು. ಆಗ ಆಕೀಷನು ದಾವೀದನಿಗೆ - ನೀನೂ ನಿನ್ನ ಜನರೂ ಯುದ್ಧಕ್ಕೆ ನನ್ನ ಜೊತೆಯಲ್ಲೇ ಬರಬೇಕೆಂದು ನಿನಗೆ ಗೊತ್ತಿರುತ್ತದಲ್ಲವೋ ಎನ್ನಲು ದಾವೀದನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ತರುವಾಯ, ಫಿಲಿಷ್ಟಿಯರು ಇಸ್ರೇಲರ ವಿರುದ್ಧ ಹೋರಾಡಲು ತಮ್ಮ ಸೈನ್ಯವನ್ನೆಲ್ಲ ಒಟ್ಟುಗೂಡಿಸಿದರು. ಆಕೀಷನು, “ನೀನು ಮತ್ತು ನಿನ್ನ ಜನರು ಇಸ್ರೇಲರ ವಿರುದ್ಧ ಹೋರಾಡುವುದಕ್ಕಾಗಿ ನನ್ನ ಜೊತೆಗೂಡಬೇಕೆಂಬುದನ್ನು ನೀನು ಅರ್ಥಮಾಡಿಕೊಂಡಿರುವೆಯಾ?” ಎಂದು ದಾವೀದನನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆ ದಿವಸಗಳಲ್ಲಿ ಫಿಲಿಷ್ಟಿಯರು ಇಸ್ರಾಯೇಲರ ಮೇಲೆ ಯುದ್ಧಮಾಡಲು ತಮ್ಮ ಸೈನ್ಯಗಳನ್ನು ಕೂಡಿಸಿಕೊಂಡರು. ಆಗ ಆಕೀಷನು ದಾವೀದನಿಗೆ, “ನೀನೂ, ನಿನ್ನ ಜನರೂ ಯುದ್ಧವನ್ನು ಮಾಡಲು ನಮ್ಮ ಸಂಗಡ ನಿಶ್ಚಯವಾಗಿ ಬರಬೇಕೆಂದು ತಿಳಿಯಲಿಲ್ಲವೋ?” ಎಂದನು. ಅಧ್ಯಾಯವನ್ನು ನೋಡಿ |