Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 28:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನೀನು ಯೆಹೋವನ ಮಾತನ್ನು ಕೇಳಲಿಲ್ಲ. ಆತನು ಅಮಾಲೇಕ್ಯರ ಮೇಲೆ ಉಗ್ರಕೊಪಗೊಂಡು ಮಾಡಿದ ಕೋಪಾಜ್ಞೆಯನ್ನು ನೀನು ನೆರವೇರಿಸಲಿಲ್ಲ. ಆದ್ದರಿಂದ ಯೆಹೋವನು ಈಗ ನಿನಗೆ ಹೀಗೆ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನೀನು ಸರ್ವೇಶ್ವರನ ಮಾತನ್ನು ಕೇಳಲಿಲ್ಲ; ಅವರು ಅಮಾಲೇಕ್ಯರ ಮೇಲೆ ಉಗ್ರಕೋಪಗೊಂಡು ಮಾಡಿದ ಕೋಪಾಜ್ಞೆಯನ್ನು ನೀನು ನೆರವೇರಿಸಲಿಲ್ಲ. ಆದುದರಿಂದಲೇ ಸರ್ವೇಶ್ವರ ಈಗ ನಿನಗೆ ಹೀಗೆ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನೀನು ಯೆಹೋವನ ಮಾತನ್ನು ಕೇಳಲಿಲ್ಲ; ಆತನು ಅಮಾಲೇಕ್ಯರ ಮೇಲೆ ಉಗ್ರಕೋಪಗೊಂಡು ಮಾಡಿದ ಕೋಪಾಜ್ಞೆಯನ್ನು ನೀನು ನೆರವೇರಿಸಲಿಲ್ಲ. ಆದದರಿಂದಲೇ ಯೆಹೋವನು ಈಗ ನಿನಗೆ ಹೀಗೆ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೀನು ಯೆಹೋವನಿಗೆ ವಿಧೇಯನಾಗಲಿಲ್ಲ. ನೀನು ಅಮಾಲೇಕ್ಯರನ್ನು ನಾಶಗೊಳಿಸಲಿಲ್ಲ; ಯೆಹೋವನು ಅವರ ಬಗ್ಗೆ ಎಷ್ಟು ಕೋಪಗೊಂಡಿದ್ದನೆಂಬುದನ್ನು ಅವರಿಗೆ ತಿಳಿಯಪಡಿಸಿಲ್ಲ. ಆದ್ದರಿಂದಲೇ ಯೆಹೋವನು ಇಂದು ನಿನಗೆ ಹೀಗೆ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನೀನು ಯೆಹೋವ ದೇವರ ಮಾತನ್ನು ಕೇಳದೆ, ಅಮಾಲೇಕ್ಯರ ಮೇಲೆ ಇದ್ದ ಅವರ ಉಗ್ರಕೋಪವನ್ನು ತೀರಿಸದೆ ಹೋದದ್ದರಿಂದ, ಯೆಹೋವ ದೇವರು ಈ ದಿವಸದಲ್ಲಿ ನಿನಗೆ ಹೀಗೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 28:18
9 ತಿಳಿವುಗಳ ಹೋಲಿಕೆ  

ಆಗ ಪ್ರವಾದಿಯು ಅರಸನಿಗೆ, “ಸಂಹರಿಸಬೇಕೆಂದು ನಾನು ನಿನ್ನ ಕೈಗೆ ಒಪ್ಪಿಸಿದ ಮನುಷ್ಯನನ್ನು ನೀನು ಹೋಗಗೊಟ್ಟಿದ್ದರಿಂದ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ಹೋಗುವುದು. ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳಿದನು.


ಸೌಲನೂ ಮತ್ತು ಇಸ್ರಾಯೇಲರೂ ಅಗಾಗನನ್ನೂ, ಉತ್ತಮವಾದ ಕುರಿದನಗಳನ್ನೂ, ಕುರಿಮರಿಗಳನ್ನೂ, ಕೊಬ್ಬಿದ ಪಶುಗಳನ್ನೂ, ಶ್ರೇಷ್ಠವಾದ ಎಲ್ಲಾ ಪದಾರ್ಥಗಳನ್ನೂ ನಾಶಮಾಡಲು ಮನಸ್ಸಿಲ್ಲದೆ ಉಳಿಸಿ ಪ್ರಯೋಜನವಿಲ್ಲದಂಥ ಹೀನವಾದವುಗಳನ್ನೆಲ್ಲಾ ನಾಶಮಾಡಿಬಿಟ್ಟರು.


ಯೆಹೋವನು ನೇಮಿಸಿದ ಕೆಲಸದಲ್ಲಿ ಆಲಸ್ಯಗಾರನು ಶಾಪಗ್ರಸ್ತನಾಗಲಿ; ತನ್ನ ಕತ್ತಿಯನ್ನು ರಕ್ತಸುರಿಸದಂತೆ ತಡೆಯುವವನಿಗೆ ಶಾಪ ತಗಲಲಿ.


ಸೌಲನು ಯೆಹೋವನ ಮಾತು ಕೇಳದೆ ಆತನಿಗೆ ವಿರೋಧವಾಗಿ ದ್ರೋಹ ಮಾಡಿದ್ದರಿಂದಲೂ, ಯೆಹೋವನ ಸನ್ನಿಧಿಯಲ್ಲಿ ವಿಚಾರಿಸದೇ, ಭೂತ, ಪ್ರೇತಗಳನ್ನು ನಂಬಿ ದೇವ ದ್ರೋಹಿಯಾದುದರಿಂದ ಅವನಿಗೆ ಇಂಥ ಮರಣವಾಯಿತು.


ಆಗ ಸೌಲನು ಸಮುವೇಲನಿಗೆ, “ಏನು? ನಾನು ಯೆಹೋವನ ಮಾತನ್ನು ಕೇಳಲಿಲ್ಲವೋ? ಆತನು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರನ್ನೆಲ್ಲಾ ಸಂಹರಿಸಿ ಅವರ ಅರಸನಾದ ಅಗಾಗನನ್ನು ಹಿಡಿದು ತಂದೆನು.


ಆಗ ಸೌಲನು ಜನರಿಂದ ಸರ್ವಾಂಗಹೋಮಕ್ಕೂ, ಸಮಾಧಾನ ಯಜ್ಞಕ್ಕೂ ಬೇಕಾದದ್ದನ್ನು ತರಿಸಿ ಸರ್ವಾಂಗಹೋಮವನ್ನು ಅರ್ಪಿಸಿದನು.


ಆಗ ಸಮುವೇಲನು ಅವನಿಗೆ, “ಯೆಹೋವನು ಈ ಹೊತ್ತು ಇಸ್ರಾಯೇಲಿನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನಗಿಂತ ಉತ್ತಮನಾದ ಇನ್ನೊಬ್ಬನಿಗೆ ಕೊಟ್ಟಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು