1 ಸಮುಯೇಲ 28:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಸೌಲನು ಸಮುವೇಲನ ಮಾತುಗಳನ್ನು ಕೇಳಿದ ಕೂಡಲೇ ಭಯಭ್ರಾಂತನಾಗಿ ನೆಲದ ಮೇಲೆ ಉದ್ದಕ್ಕೆ ಬಿದ್ದನು. ಅವನು ಇಡೀ ದಿನ ಊಟಮಾಡಲಿಲ್ಲವಾದ್ದರಿಂದ ಅವನಲ್ಲಿ ಬಲವೇ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಸೌಲನು ಸಮುವೇಲನ ಮಾತುಗಳನ್ನು ಕೇಳಿದ ಕೂಡಲೆ ದಿಗ್ಭ್ರಾಂತನಾಗಿ ನೆಲದ ಮೇಲೆ ಕೈಕಾಲು ಚಾಚಿಬಿದ್ದನು. ಅವನು ಇಡೀ ದಿವಸ ಊಟಮಾಡಿರಲಿಲ್ಲ. ಆದುದರಿಂದ ಅವನಲ್ಲಿ ಬಲವೇ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಸೌಲನು ಸಮುವೇಲನ ಮಾತುಗಳನ್ನು ಕೇಳಿದ ಕೂಡಲೆ ಭಯಭ್ರಾಂತನಾಗಿ ನೆಲದ ಮೇಲೆ ಉದ್ದಕ್ಕೆ ಬಿದ್ದನು. ಅವನು ಇಡೀ ದಿವಸ ಊಟ ಮಾಡಿರಲಿಲ್ಲವಾದದರಿಂದ ಅವನಲ್ಲಿ ಬಲವೇ ಇರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆ ಕೂಡಲೇ ಸೌಲನು ನೆಲದ ಮೇಲೆ ಕುಸಿದು ಬಿದ್ದನು. ಸಮುವೇಲನು ಹೇಳಿದ ಮಾತುಗಳನ್ನು ಕೇಳಿ ಸೌಲನು ಭಯಗೊಂಡನು. ಸೌಲನು ಅಂದು ಹಗಲು ಮತ್ತು ರಾತ್ರಿ ಏನನ್ನೂ ತಿಂದಿರಲಿಲ್ಲ; ಆದ್ದರಿಂದ ಅವನು ಬಹಳ ಬಲಹೀನನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಗ ಸೌಲನು ನೆಲದ ಮೇಲೆ ಬೋರಲು ಬಿದ್ದು, ಸಮುಯೇಲನ ಮಾತುಗಳಿಗೋಸ್ಕರ ಬಹಳವಾಗಿ ಭಯಪಟ್ಟನು. ಆ ದಿನವೆಲ್ಲಾ ಏನೂ ಊಟಮಾಡದೆ ಇದ್ದುದರಿಂದ ಅವನೊಳಗೆ ಶಕ್ತಿ ಇಲ್ಲದೆ ಹೋಯಿತು. ಅಧ್ಯಾಯವನ್ನು ನೋಡಿ |