Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 28:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆ ಸ್ತ್ರೀಯು ಸೌಲನ ಹತ್ತಿರ ಬಂದು ಅವನು ಬಹು ಭೀತನಾಗಿದ್ದಾನೆಂದು ಕಂಡು ಅವನಿಗೆ, “ನಿನ್ನ ದಾಸಿಯಾದ ನಾನು ನಿನ್ನ ಮಾತನ್ನು ಕೇಳಿದೆನು. ಕೈಯಲ್ಲಿ ಜೀವಹಿಡಿದವಳಾಗಿ ನಿನ್ನ ಅಪ್ಪಣೆಯನ್ನು ನೆರವೇರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆ ಸ್ತ್ರೀ ಸೌಲನ ಹತ್ತಿರಕ್ಕೆ ಬಂದು ಅವನು ಬಹುಭೀತನಾಗಿದ್ದಾನೆಂದು ಕಂಡು, “ನಿಮ್ಮ ದಾಸಿಯಾದ ನಾನು ನಿಮ್ಮ ಮಾತು ಕೇಳಿದೆನು; ಕೈಯಲ್ಲಿ ಜೀವ ಹಿಡಿದವಳಾಗಿ ನಿಮ್ಮ ಅಪ್ಪಣೆಯನ್ನು ನೆರವೇರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆ ಸ್ತ್ರೀಯು ಸೌಲನ ಹತ್ತಿರ ಬಂದು ಅವನು ಬಹು ಭೀತನಾಗಿದ್ದಾನೆಂದು ಕಂಡು ಅವನಿಗೆ - ನಿನ್ನ ದಾಸಿಯಾದ ನಾನು ನಿನ್ನ ಮಾತು ಕೇಳಿದೆನು; ಕೈಯಲ್ಲಿ ಜೀವಹಿಡಿದವಳಾಗಿ ನಿನ್ನ ಅಪ್ಪಣೆಯನ್ನು ನೆರವೇರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆ ಹೆಂಗಸು ಸೌಲನ ಬಳಿಗೆ ಬಂದಳು. ಸೌಲನು ನಿಜವಾಗಿಯೂ ಭಯಗೊಂಡಿರುವುದನ್ನು ಅವಳು ನೋಡಿ, “ಇಲ್ಲಿ ನೋಡು, ನಾನು ನಿನ್ನ ಸೇವಕಿ. ನಾನು ನಿನಗೆ ವಿಧೇಯಳಾಗಿದ್ದೇನೆ. ನಾನು ನನ್ನ ಜೀವವನ್ನೇ ಕಡೆಗಣಿಸಿ ನೀನು ಹೇಳಿದ್ದನ್ನು ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಆ ಸ್ತ್ರೀಯು ಸೌಲನ ಬಳಿಗೆ ಬಂದು, ಅವನು ಬಹಳ ತಲ್ಲಣಪಟ್ಟನೆಂದು ಕಂಡು ಅವನಿಗೆ, “ನಿನ್ನ ದಾಸಿಯಾದ ನಾನು ನಿನ್ನ ಮಾತನ್ನು ಕೇಳಿ, ನನ್ನ ಪ್ರಾಣವನ್ನು ನನ್ನ ಕೈಯಲ್ಲಿ ಇಟ್ಟುಕೊಂಡವಳಾಗಿ, ನೀನು ನನಗೆ ಹೇಳಿದ ಮಾತುಗಳನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 28:21
6 ತಿಳಿವುಗಳ ಹೋಲಿಕೆ  

ನೀವು ಸಹಾಯಮಾಡುವುದಿಲ್ಲವೆಂದು ತಿಳಿದು ಜೀವವನ್ನು ಕೈಯಲ್ಲಿ ಹಿಡಿದು ಅಮ್ಮೋನಿಯರೊಡನೆ ಯುದ್ಧಕ್ಕೆ ಹೋದೆನು. ಯೆಹೋವನು ಅವರನ್ನು ನನ್ನ ಕೈಗೆ ಒಪ್ಪಿಸಿದನು. ಹೀಗಿರಲು ನೀವು ಈಗ ಬಂದು ನನ್ನೊಡನೆ ಕಲಹಮಾಡುವುದೇಕೆ?” ಎಂದು ಉತ್ತರಿಸಿ,


ನನ್ನ ಪ್ರಾಣವನ್ನು ಬಾಯಿಂದ ಕಚ್ಚಿಕೊಂಡಿರುವೆನು, ನನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡಿರುವೆನು.


ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಫಿಲಿಷ್ಟಿಯನನ್ನು ಕೊಂದನು. ಯೆಹೋವನು ಇಸ್ರಾಯೇಲ್ಯರಿಗೆ ಮಹಾ ಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿ ಸಂತೋಷಪಟ್ಟಿಯಲ್ಲಾ. ದಾವೀದನನ್ನು ನಿಷ್ಕರುಣೆಯಾಗಿ ಕೊಂದು, ನಿರಪರಾಧಿಯ ರಕ್ತವನ್ನು ಸುರಿಸಿ, ಅಪರಾಧಕ್ಕೆ ನೀನೇಕೆ ಗುರಿಯಾಗುತ್ತೀ?” ಅಂದನು.


ಸೌಲನು ಸಮುವೇಲನ ಮಾತುಗಳನ್ನು ಕೇಳಿದ ಕೂಡಲೇ ಭಯಭ್ರಾಂತನಾಗಿ ನೆಲದ ಮೇಲೆ ಉದ್ದಕ್ಕೆ ಬಿದ್ದನು. ಅವನು ಇಡೀ ದಿನ ಊಟಮಾಡಲಿಲ್ಲವಾದ್ದರಿಂದ ಅವನಲ್ಲಿ ಬಲವೇ ಇರಲಿಲ್ಲ.


ಆದುದರಿಂದ ನೀನು ದಯವಿಟ್ಟು ನಿನ್ನ ದಾಸಿಯ ಮಾತನ್ನು ಕೇಳಬೇಕು. ಸ್ವಲ್ಪ ಆಹಾರ ತರುತ್ತೇನೆ, ಪ್ರಯಾಣಕ್ಕೆ ಬಲಬರುವ ಹಾಗೆ ಅದನ್ನು ಊಟಮಾಡು” ಎಂದು ಹೇಳಿದಳು.


ಇದರ ದೆಸೆಯಿಂದ ಅರಾಮ್ಯರ ಅರಸನು ಕಳವಳಗೊಂಡು ತನ್ನ ಸೇನಾಧಿಪತಿಗಳನ್ನು ಕರೆದು ಅವರನ್ನು, “ನಮ್ಮವರಲ್ಲಿ ಇಸ್ರಾಯೇಲರ ಅರಸನ ಪಕ್ಷದವರು ಯಾರು? ನನಗೆ ತಿಳಿಸುವುದಿಲ್ಲವೋ” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು