1 ಸಮುಯೇಲ 28:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅವನು, “ಒಲ್ಲೆನು, ಊಟಮಾಡುವುದಿಲ್ಲ” ಅಂದನು. ಆದರೆ ಅವನ ಸೇವಕರೂ ಆ ಸ್ತ್ರೀಯೂ ಬಹಳವಾಗಿ ಬೇಡಿಕೊಂಡದ್ದರಿಂದ ಅವನು ಅವರ ಮಾತಿಗೆ ಒಪ್ಪಿಕೊಂಡು ನೆಲದಿಂದೆದ್ದು ಮಂಚದ ಮೇಲೆ ಕುಳಿತುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅವನು, “ಒಲ್ಲೆ; ಊಟಮಾಡುವುದಿಲ್ಲ,” ಎಂದನು. ಆದರೆ, ಅವನ ಸೇವಕರೂ ಆ ಸ್ತ್ರೀಯೂ ಬಹಳವಾಗಿ ಬೇಡಿಕೊಂಡಿದ್ದರಿಂದ ಅವನು ಕಡೆಗೆ ಅವರ ಮಾತಿಗೆ ಒಪ್ಪಿ ನೆಲದಿಂದೆದ್ದು ಮಂಚದ ಮೇಲೆ ಕುಳಿತುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅವನು - ಒಲ್ಲೆನು; ಊಟಮಾಡುವದಿಲ್ಲ ಅಂದನು. ಆದರೆ ಅವನ ಸೇವಕರೂ ಆ ಸ್ತ್ರೀಯೂ ಬಹಳವಾಗಿ ಬೇಡಿಕೊಂಡದರಿಂದ ಅವನು ಕಡೆಗೆ ಅವರ ಮಾತಿಗೆ ಒಪ್ಪಿ ನೆಲದಿಂದೆದ್ದು ಮಂಚದ ಮೇಲೆ ಕೂತುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆದರೆ ಸೌಲನು ನಿರಾಕರಿಸಿ, “ನಾನು ತಿನ್ನುವುದಿಲ್ಲ” ಅಂದನು. ಊಟಮಾಡುವಂತೆ ಸೌಲನ ಅಧಿಕಾರಿಗಳೂ ಬೇಡಿಕೊಂಡರು. ಕೊನೆಗೆ ಸೌಲನು ಅವರ ಮಾತಿಗೆ ಕಿವಿಗೊಟ್ಟನು. ಅವನು ನೆಲದಿಂದ ಮೇಲಕ್ಕೆದ್ದು ಮಂಚದ ಮೇಲೆ ಕುಳಿತನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅದಕ್ಕವನು, “ನಾನು ತಿನ್ನುವುದಿಲ್ಲ,” ಎಂದನು. ಆದರೆ ಅವನ ದಾಸರೂ, ಆ ಸ್ತ್ರೀಯೂ ಅವನನ್ನು ಬಲವಂತ ಮಾಡಿದ್ದರಿಂದ, ಅವನು ಅವರ ಮಾತನ್ನು ಕೇಳಿ, ನೆಲವನ್ನು ಬಿಟ್ಟು ಎದ್ದು, ಮಂಚದ ಮೇಲೆ ಕುಳಿತುಕೊಂಡನು. ಅಧ್ಯಾಯವನ್ನು ನೋಡಿ |
ಆ ತೋಟದ ಆವರಣವು ಬಿಳೀ ನೂಲಿನ ಬಟ್ಟೆಗಳೂ, ನೀಲಿಬಟ್ಟೆಗಳೂ, ಧೂಮ್ರವರ್ಣವುಳ್ಳ ನಾರಿನ ದಾರಗಳು ಮತ್ತು ಅಮೃತಶಿಲೆಯ ಕಲ್ಲುಕಂಬಗಳಿಗೆ ಕಟ್ಟಲಾದ ಬೆಳ್ಳಿಯ ಉಂಗುರ ಇವುಗಳಿಂದ ಅಲಂಕೃತವಾಗಿತ್ತು. ಜರತಾರಿ ಕಸೂತಿ ಹಾಕಿರುವ ಬೆಳ್ಳಿ ಬಂಗಾರದ ಸುಖಾಸನಗಳು, ಅವುಗಳನ್ನು ಕೆಂಪು, ಬಿಳಿ, ಹಳದಿ ಮತ್ತು ಕಪ್ಪು ಬಣ್ಣಗಳುಳ್ಳ ಅಮೃತಶಿಲೆಗಳ ಕಲ್ಲುಗಳಿಂದ ರಚಿತವಾದ ನೆಲಗಟ್ಟಿನ ಮೇಲೆ ಇಡಲಾಗಿತ್ತು.