Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 28:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಫಿಲಿಷ್ಟಿಯರು ಸೈನ್ಯಕೂಡಿಸಿಕೊಂಡು ಬಂದು ಶೂನೇಮಿನಲ್ಲಿ ಪಾಳೆಯಮಾಡಿಕೊಂಡರು. ಸೌಲನು ಎಲ್ಲಾ ಇಸ್ರಾಯೇಲರೊಡನೆ ಬಂದು, ಗಿಲ್ಬೋವದಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಫಿಲಿಷ್ಟಿಯರು ಸೈನ್ಯಕೂಡಿಸಿಕೊಂಡು ಬಂದು ಶೂನೇಮಿನಲ್ಲಿ ಪಾಳೆಯಮಾಡಿಕೊಂಡಿದ್ದರು. ಸೌಲನು ಸಮಸ್ತ ಇಸ್ರಯೇಲರೊಡನೆ ಬಂದು ಗಿಲ್ಬೋವದಲ್ಲಿ ಇಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಫಿಲಿಷ್ಟಿಯರು ಸೈನ್ಯಕೂಡಿಸಿಕೊಂಡು ಬಂದು ಶೂನೇವಿುನಲ್ಲಿ ಪಾಳೆಯಮಾಡಿಕೊಂಡಿದ್ದರು. ಸೌಲನು ಎಲ್ಲಾ ಇಸ್ರಾಯೇಲ್ಯರೊಡನೆ ಬಂದು ಗಿಲ್ಬೋವದಲ್ಲಿ ಇಳುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಫಿಲಿಷ್ಟಿಯರು ಯುದ್ಧಕ್ಕೆ ಸಿದ್ಧರಾದರು. ಅವರೆಲ್ಲ ಶೂನೇಮಿಗೆ ಬಂದು ಆ ಸ್ಥಳದಲ್ಲಿಯೇ ಪಾಳೆಯಮಾಡಿಕೊಂಡರು. ಸೌಲನು ಇಸ್ರೇಲರನ್ನೆಲ್ಲ ಒಟ್ಟುಗೂಡಿಸಿಕೊಂಡು ಬಂದು ಗಿಲ್ಬೋವದಲ್ಲಿ ಪಾಳೆಯ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಫಿಲಿಷ್ಟಿಯರ ಸೈನ್ಯ ಕೂಡಿಬಂದು ಶೂನೇಮಿನಲ್ಲಿ ದಂಡಿಳಿದರು. ಸೌಲನು ಸಮಸ್ತ ಇಸ್ರಾಯೇಲನ್ನು ಕೂಡಿಸಿಕೊಂಡು ಗಿಲ್ಬೋವದಲ್ಲಿ ದಂಡಿಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 28:4
9 ತಿಳಿವುಗಳ ಹೋಲಿಕೆ  

ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡಿದರು. ಇಸ್ರಾಯೇಲರು ಅವರಿಂದ ಅಪಜಯಹೊಂದಿ ಗಿಲ್ಬೋವ ಬೆಟ್ಟದಲ್ಲಿ ಹತರಾದರು.


ಇಜ್ರೇಲ್, ಕೆಸುಲ್ಲೋತ್, ಶೂನೇಮ್,


ಒಂದು ಸಾರಿ ಎಲೀಷನು ಶೂನೇಮಿಗೆ ಹೋದನು. ಅಲ್ಲಿ ಒಬ್ಬ ಕುಲೀನ ಸ್ತ್ರೀಯು ಅವನನ್ನು ತನ್ನ ಮನೆಯಲ್ಲಿ ಊಟಮಾಡಬೇಕೆಂದು ಒತ್ತಾಯಪಡಿಸಿದಳು. ಅಂದಿನಿಂದ ಅವನು ಆ ಮಾರ್ಗದಿಂದ ಹೋಗುವಾಗೆಲ್ಲಾ ಆ ಮನೆಯಲ್ಲೇ ಊಟಮಾಡುತ್ತಿದ್ದನು.


ಆಗ ಅವನು ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ತರುವುದಕ್ಕೋಸ್ಕರ ಯಾಬೇಷ್ ಗಿಲ್ಯಾದಿಗೆ ಹೋದನು. ಫಿಲಿಷ್ಟಿಯರು ಸೌಲನನ್ನು ಗಿಲ್ಬೋವದಲ್ಲಿ ಸೋಲಿಸಿದ ನಂತರ ಅವನ ಮತ್ತು ಯೋನಾತಾನನ ಶವಗಳನ್ನು ಬೇತ್ ಷೆಯಾನಿನ ಬೀದಿಗಳಲ್ಲಿ ನೇತುಹಾಕಿದ್ದರು. ಯಾಬೇಷ್ ಗಿಲ್ಯಾದಿನವರು ಅಲ್ಲಿಂದ ಅವುಗಳನ್ನು ಕದ್ದುಕೊಂಡು ಹೋಗಿದ್ದರು.


ಗಿಲ್ಬೋವ ಗುಡ್ಡಗಳೇ, ನಿಮ್ಮ ಮೇಲೆ ಮಂಜು, ಮಳೆಯು, ನೈವೇದ್ಯಕ್ಕಾಗಿ ಫಲಿಸುವ ಹೊಲಗಳೂ ಇಲ್ಲದೆ ಹೋಗಲಿ. ಅಲ್ಲಿ ಪರಾಕ್ರಮಶಾಲಿಗಳ ಗುರಾಣಿಗಳು ಬಿದ್ದಿರುತ್ತವೆ. ಸೌಲನ ಗುರಾಣಿಯೂ ಅಭಿಷಿಕ್ತನಲ್ಲದವನ ಗುರಾಣಿಯಂತೆ ಬಿದ್ದಿದೆ.


“ನಾನು ಆಕಸ್ಮಿಕವಾಗಿ ಗಿಲ್ಬೋವ ಪರ್ವತಪ್ರದೇಶಕ್ಕೆ ಬಂದಾಗ ಸೌಲನು ತನ್ನ ಬರ್ಜಿಯನ್ನೂರಿಕೊಂಡು ನಿಂತಿರುವುದನ್ನೂ ರಥಗಳು ಮತ್ತು ರಾಹುತರು ಅವನನ್ನು ಹಿಂದಟ್ಟಿ ಬರುತ್ತಿರುವುದನ್ನೂ ಕಂಡೆನು.


ಅವನು ಫಿಲಿಷ್ಟಿಯರ ಪಾಳೆಯವನ್ನು ಕಂಡು ಬಹಳ ಭಯದಿಂದ ಎದೆಯೊಡೆದವನಂತಾದನು.


ಆನಂತರ ಅವರು ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಲ್ಲಿ ಅತಿ ಸುಂದರಿಯಾದ ಹುಡುಗಿಯನ್ನು ಹುಡುಕುವುದಕ್ಕೆ ಹೋಗಿ ಶೂನೇಮ್ ಊರಿನ ಅಬೀಷಗ್ ಎಂಬಾಕೆಯನ್ನು ಕಂಡು ಆಕೆಯನ್ನು ಅರಸನ ಬಳಿಗೆ ಕರೆದುಕೊಂಡು ಬಂದರು.


ಮರುದಿನ ಬೆಳಿಗ್ಗೆ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲಿದುಕೊಳ್ಳುವುದಕ್ಕೆ ಬಂದಾಗ, ಸೌಲನೂ ಅವನ ಮೂರು ಮಂದಿ ಮಕ್ಕಳೂ ಗಿಲ್ಬೋವ ಬೆಟ್ಟದಲ್ಲಿ ಸತ್ತುಬಿದ್ದಿರುವುದನ್ನು ಕಂಡು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು