Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 28:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದರೂ, ಆತನು ಅವನಿಗೆ ಕನಸುಗಳಿಂದಾಗಲಿ ಊರೀಮಿನಿಂದಾಗಲಿ, ಪ್ರವಾದಿಗಳಿಂದಾಗಲಿ ಉತ್ತರ ಕೊಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸುವುದರಿಂದಾಗಲಿ, ಕನಸುಗಳಿಂದಾಗಲಿ, ಊರಿಮಿನಿಂದಾಗಲಿ ಪ್ರವಾದಿಗಳಿಂದಾಗಲಿ ಅವನಿಗೆ ಉತ್ತರ ಸಿಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದರೂ ಆತನು ಅವನಿಗೆ ಕನಸುಗಳಿಂದಾಗಲಿ ಊರೀವಿುನಿಂದಾಗಲಿ ಪ್ರವಾದಿಗಳಿಂದಾಗಲಿ ಉತ್ತರಕೊಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸೌಲನು ಯೆಹೋವನಿಗೆ ಪ್ರಾರ್ಥನೆ ಮಾಡಿದನು. ಆದರೆ ಯೆಹೋವನು ಅವನಿಗೆ ಉತ್ತರ ನೀಡಲಿಲ್ಲ. ದೇವರು ಕನಸುಗಳಲ್ಲಿಯೂ ಸೌಲನೊಡನೆ ಮಾತನಾಡಲಿಲ್ಲ. ದೇವರು ಅವನಿಗೆ ಊರೀಮಿನಿಂದಾಗಲಿ ಪ್ರವಾದಿಗಳಿಂದಾಗಲಿ ಉತ್ತರಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಸೌಲನು ಯೆಹೋವ ದೇವರನ್ನು ಕೇಳಿಕೊಂಡಾಗ, ಯೆಹೋವ ದೇವರು ಅವನಿಗೆ ಸ್ವಪ್ನಗಳಿಂದಲಾದರೂ, ಊರೀಮಿನಿಂದಲಾದರೂ, ಪ್ರವಾದಿಗಳಿಂದಲಾದರೂ ಉತ್ತರ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 28:6
25 ತಿಳಿವುಗಳ ಹೋಲಿಕೆ  

ಆಗ ಸೌಲನು, “ದೇವಾ, ನಾವು ಫಿಲಿಷ್ಟಿಯರನ್ನು ಬೆನ್ನಟ್ಟಬಹುದೋ? ನೀನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಡುವಿಯೋ?” ಎಂದು ಕೇಳಿಕೊಂಡರೂ ದೇವರು ಅವನಿಗೆ ಆ ದಿನ ಉತ್ತರಕೊಡಲೇ ಇಲ್ಲ.


ಯೆಹೋವನು ಅವರಿಗೆ, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಪ್ರಕಟಿಸುವೆನು, ಮತ್ತು ಕನಸಿನಲ್ಲಿ ಅವನ ಸಂಗಡ ಮಾತನಾಡುವೆನು.


ಚೀಯೋನಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಕೊಂಡಿವೆ; ಅದರ ಅಗುಳಿಗಳನ್ನು ಮುರಿದು ಚೂರು ಚೂರು ಮಾಡಿದ್ದಾನೆ; ಅದರ ಅರಸನೂ ಮತ್ತು ಸರದಾರರೂ ಮೋಶೆಯ ಧರ್ಮೋಪದೇಶವನ್ನು ಬೋಧಿಸದ ಅನ್ಯಜನಾಂಗಗಳೊಳಗೆ ಸೇರಿಕೊಂಡಿದ್ದಾರೆ; ಅದರ ಪ್ರವಾದಿಗಳಿಗೆ ಯೆಹೋವನಿಂದ ಯಾವ ದರ್ಶನವೂ ಇಲ್ಲ.


ಯೆಹೋವನ ಚಿತ್ತವನ್ನು ತಿಳಿದುಕೊಳ್ಳುವುದಕ್ಕೆ ಅವನು ಮಹಾಯಾಜಕನಾದ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಯೆಹೋವನ ಸನ್ನಿಧಿಯಲ್ಲಿ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ವಿಚಾರಣೆಯನ್ನು ಮಾಡಬೇಕು. ಯೆಹೋಶುವನೂ ಮತ್ತು ಇಸ್ರಾಯೇಲರ ಸರ್ವಸಮೂಹದವರೂ ಅವನ ಮಾತಿನಂತೆ ಹೊರಡಬೇಕು, ಹಿಂತಿರುಗಬೇಕು, ಅವನ ಮಾತಿನಂತೆ ನಡೆಯಬೇಕು.” ಎಂದು ಆಜ್ಞಾಪಿಸಿದನು.


ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಾಭಿಲಾಷೆಗಳಿಗಾಗಿ ದುರುಪಯೋಗಪಡಿಸಿಕೊಳ್ಳಬೇಕೆಂಬ ದುರುದ್ದೇಶದಿಂದ ಬೇಡಿಕೊಳ್ಳುವುದರಿಂದ ನಿಮಗೆ ದೊರೆಯುತ್ತಿಲ್ಲ.


ಪಾಪಿಷ್ಠರ ಪ್ರಾರ್ಥನೆಯನ್ನು ದೇವರು ಕೇಳುವುದಿಲ್ಲ, ಆದರೆ ಯಾರು ಭಕ್ತರಾಗಿದ್ದು ಆತನ ಚಿತ್ತದಂತೆ ನಡೆಯುತ್ತಾರೋ ಅವರ ಪ್ರಾರ್ಥನೆಯನ್ನು ಕೇಳುತ್ತಾನೆಂದು ಬಲ್ಲೆವು.


ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ.


ಕನಸು ಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ. ನನ್ನ ಮಾತನ್ನು ಕೇಳಿದವನೋ ನನ್ನ ಮಾತನ್ನು ಯಥಾರ್ಥವಾಗಿ ನುಡಿಯಲಿ.


ಲೇವಿ ಕುಲದ ವಿಷಯದಲ್ಲಿ, “ಯೆಹೋವನೇ ನಿನ್ನ ನಿರ್ಣಯವನ್ನು ತಿಳಿಸುವ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳು ನಿನ್ನ ಭಕ್ತರಾದ ಇವರ ವಶದಲ್ಲಿ ಉಂಟಷ್ಟೆ. ನೀನು ಮಸ್ಸದಲ್ಲಿ ಅವರನ್ನು ಪರೀಕ್ಷಿಸಿದಿಯಲ್ಲಾ; ಮೆರೀಬದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದಮಾಡಿದಿ.


ದೈವನಿರ್ಣಯವನ್ನು ತಿಳಿಸುವ ಊರೀಮ್ ತುಮ್ಮೀಮ್‌ ಆ ಎದೆಯ ಪದಕದಲ್ಲಿ ಇಡಬೇಕು. ಆರೋನನು ಯೆಹೋವನ ಸನ್ನಿಧಿಗೆ ಹೋಗುವಾಗ ಅವು ಅವನ ಎದೆಯ ಮೇಲೆ ಇರುವವು. ಇಸ್ರಾಯೇಲರು ಕೈಕೊಳ್ಳಬೇಕಾದ ದೈವನಿರ್ಣಯವನ್ನು ಆರೋನನು ಹೀಗೆ ತನ್ನ ಹೃದಯದ ಮೇಲೆ ಯೆಹೋವನ ಸನ್ನಿಧಿಯಲ್ಲಿ ಯಾವಾಗಲೂ ಧರಿಸಿಕೊಂಡಿರಬೇಕು.


ನಾಳೆ ಎಂದು ಕೊಚ್ಚಿಕೊಳ್ಳಬೇಡ, ಒಂದು ದಿನದೊಳಗೆ ಏನಾಗುವುದೋ ನಿನಗೆ ತಿಳಿಯದು.


ನಮ್ಮ ಆರಾಧನಾ ಚಿಹ್ನೆಗಳು ಈಗ ಕಾಣುವುದಿಲ್ಲ. ಮುಂಚೆ ಇದ್ದಂತೆ ನಮಗೆ ಪ್ರವಾದಿಗಳು ಯಾರೂ ಇಲ್ಲ; ಇದು ಎಷ್ಟರವರೆಗೆ ಇರುವುದೆಂದು ಬಲ್ಲವರು ನಮ್ಮಲ್ಲಿ ಯಾರೂ ಇಲ್ಲ.


ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಬೆರುಲ್ಲ, ವೈಡೂರ್ಯಗಳನ್ನೂ ಚಿನ್ನದ ಮಣಿಗಳಲ್ಲಿ ಸೇರಿಸಬೇಕು.


ಅವನು ಎದೆಯ ಮೇಲೆ ಪದಕವನ್ನು ಬಿಗಿದು ಆರೋನನಿಗೆ ಹಾಕಿ ಅದರೊಳಗೆ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳನ್ನು ಇಟ್ಟನು.


ಅವನು ಫಿಲಿಷ್ಟಿಯರ ಪಾಳೆಯವನ್ನು ಕಂಡು ಬಹಳ ಭಯದಿಂದ ಎದೆಯೊಡೆದವನಂತಾದನು.


ಆಗ ಸಮುವೇಲನು ಸೌಲನನ್ನು, “ನೀನು ನನ್ನ ವಿಶ್ರಾಂತಿಯನ್ನು ಕೇಡಿಸಿದ್ದೇಕೆ? ನನ್ನನ್ನು ಇಲ್ಲಿಗೆ ಯಾಕೆ ಬರಮಾಡಿದೆ?” ಎಂದು ಕೇಳಿದನು. ಅದಕ್ಕೆ ಸೌಲನು, “ನಾನು ಬಲು ಇಕ್ಕಟ್ಟಿನಲ್ಲಿದ್ದೇನೆ. ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಕ್ಕೆ ಬಂದಿದ್ದಾರೆ. ದೇವರು ನನ್ನನ್ನು ಬಿಟ್ಟು ದೂರ ಹೋಗಿದ್ದಾನೆ. ಆತನು ನನಗೆ ಪ್ರವಾದಿಗಳಿಂದಾಗಲಿ, ಕನಸುಗಳಿಂದಾಗಲಿ ಉತ್ತರಕೊಡಲೊಲ್ಲನು. ಆದುದರಿಂದ ನಾನು ಮಾಡಬೇಕಾದದ್ದನ್ನು ನೀನು ತಿಳಿಸುವಿಯೆಂದು ನಿನ್ನನ್ನು ಇಲ್ಲಿಗೆ ಬರಮಾಡಿದೆನು” ಅಂದನು.


ಅವರು ಸಹಾಯಕ್ಕಾಗಿ ಕೂಗಿಕೊಂಡರೂ ರಕ್ಷಿಸುವವನಿಲ್ಲ. ಯೆಹೋವನಿಗೆ ಮೊರೆಯಿಟ್ಟರೂ ಆತನು ಉತ್ತರವನ್ನು ಕೊಡಲೇ ಇಲ್ಲ.


ತರುವಾಯ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು. ನಿಮ್ಮ ಪುತ್ರಪುತ್ರಿಯರು ಪ್ರವಾದಿಸುವರು. ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು. ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು.


ದಿವ್ಯದರ್ಶಿಗಳು ಆಶಾಭಂಗಪಡುವರು, ಕಣಿಯವರು ನಾಚಿಕೊಳ್ಳುವರು. ಎಲ್ಲರೂ ಬಟ್ಟೆಯಿಂದ ಬಾಯಿಮುಚ್ಚಿಕೊಳ್ಳುವರು. ಅವರಿಗೆ ದೈವೋತ್ತರವೇ ದೊರೆಯುವುದಿಲ್ಲ” ಎಂದು ನುಡಿಯುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು