1 ಸಮುಯೇಲ 28:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆಗ ಸೌಲನು ವಸ್ತ್ರಗಳಿಂದ ತನ್ನನ್ನು ಮಾರ್ಪಡಿಸಿಕೊಂಡು, ಇಬ್ಬರು ಸೇವಕರೊಡನೆ ಹೊರಟು, ರಾತ್ರಿಯಲ್ಲಿ ಆಕೆಯ ಮನೆ ಸೇರಿ, “ದಯವಿಟ್ಟು ನನಗೋಸ್ಕರ ಸತ್ತವರಲ್ಲಿ ವಿಚಾರಿಸಿ ಕಣಿಹೇಳು. ನಾನು ಯಾವನ ಹೆಸರು ಹೇಳುತ್ತೇನೋ ಅವನನ್ನು ಇಲ್ಲಿಗೆ ಬರಮಾಡು” ಎಂದು ಆಕೆಯನ್ನು ಬೇಡಿಕೊಂಡನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆಗ ಸೌಲನು ಉಡಿಗೆತೊಡಿಗೆಗಳಿಂದ ತನ್ನನ್ನು ಮಾರ್ಪಡಿಸಿಕೊಂಡು ಇಬ್ಬರು ಸೇವಕರೊಡನೆ ಹೊರಟು ರಾತ್ರಿಯಲ್ಲಿ ಆಕೆಯ ಮನೆಗೆ ಬಂದನು. “ದಯವಿಟ್ಟು ನನಗಾಗಿ ಭೂತಪ್ರೇತಗಳಲ್ಲಿ ವಿಚಾರಿಸಿ ಶಾಸ್ತ್ರ ಹೇಳು; ನಾನು ಯಾವನ ಹೆಸರು ಹೇಳುತ್ತೇನೋ ಅವನನ್ನು ಇಲ್ಲಿಗೆ ಬರಮಾಡು,” ಎಂದು ಆಕೆಯನ್ನು ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆಗ ಸೌಲನು ವಸ್ತ್ರಾದಿಗಳಿಂದ ತನ್ನನ್ನು ಮಾರ್ಪಡಿಸಿಕೊಂಡು ಇಬ್ಬರು ಸೇವಕರೊಡನೆ ಹೊರಟು ರಾತ್ರಿಯಲ್ಲಿ ಆಕೆಯ ಮನೆ ಸೇರಿ - ದಯವಿಟ್ಟು ನನಗೋಸ್ಕರ ಸತ್ತವರಲ್ಲಿ ವಿಚಾರಿಸಿ ಕಣಿಹೇಳು; ನಾನು ಯಾವನ ಹೆಸರನ್ನು ಹೇಳುತ್ತೇನೋ ಅವನನ್ನು ಇಲ್ಲಿಗೆ ಬರಮಾಡು ಎಂದು ಆಕೆಯನ್ನು ಬೇಡಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯಾರಿಗೂ ತನ್ನ ಗುರುತು ಸಿಕ್ಕದಂತೆ ಸೌಲನು ವೇಷವನ್ನು ಬದಲಾಯಿಸಿಕೊಂಡನು. ಸೌಲನು ತನ್ನ ಜನರಿಬ್ಬರೊಡನೆ ಅದೇ ರಾತ್ರಿಯಲ್ಲೇ ಆ ಬೇತಾಳಿಕಳನ್ನು ನೋಡಲು ಹೋದನು. ಸೌಲನು ಅವಳಿಗೆ, “ಬೇತಾಳದ ಮೂಲಕ ನನ್ನ ಭವಿಷ್ಯವನ್ನು ನನಗೆ ತೋರಿಸು, ನಾನು ಹೆಸರಿಸುವ ವ್ಯಕ್ತಿಯನ್ನು ಕರೆ” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಗ ಸೌಲನು ತನ್ನನ್ನು ಮರೆಮಾಡಿಕೊಳ್ಳುವಂತೆ ಬದಲು ವಸ್ತ್ರಗಳನ್ನು ಧರಿಸಿ, ತನ್ನ ಸಂಗಡ ಇಬ್ಬರನ್ನು ಕರೆದುಕೊಂಡು, ರಾತ್ರಿಯಲ್ಲಿ ಆ ಸ್ತ್ರೀಯ ಬಳಿಗೆ ಬಂದು ಅವಳಿಗೆ, “ನೀನು ದಯಮಾಡಿ ಸತ್ತವರ ಆತ್ಮವನ್ನು ವಿಚಾರಿಸಿ ನನಗೆ ಕಣಿ ಹೇಳು. ನಾನು ನಿನಗೆ ಹೇಳುವವನನ್ನು ನನಗೆ ಕಾಣುವಂತೆ ಮಾಡು,” ಎಂದನು. ಅಧ್ಯಾಯವನ್ನು ನೋಡಿ |