1 ಸಮುಯೇಲ 28:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆಗ ಆಕೆಯು ಅವನಿಗೆ, “ಸೌಲನು ಮಾಡಿದ್ದು ನಿನಗೆ ಗೊತ್ತುಂಟು. ಅವನು ಸತ್ತವರಲ್ಲಿ ವಿಚಾರಿಸುವವರನ್ನು ಬೇತಾಳಿಕರನ್ನೂ ದೇಶದಿಂದ ಹೊರಡಿಸಿಬಿಟ್ಟನಲ್ಲಾ, ಹೀಗಿದ್ದರೂ ನಾನೂ ಸಾಯುವಂತೆ ನೀನು ನನ್ನ ಪ್ರಾಣಕ್ಕೆ ಉರುಲೊಡ್ಡುವುದೇಕೆ?” ಅಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆಗ ಆಕೆ ಅವನಿಗೆ, “ಸೌಲನು ಮಾಡಿದ್ದು ನಿನಗೆ ಗೊತ್ತುಂಟು; ಅವನು ಭೂತಪ್ರೇತಗಳನ್ನು ವಿಚಾರಿಸುವವರನ್ನು ಹಾಗು ಬೇತಾಳಿಕರನ್ನು ನಾಡಿನಿಂದ ಹೊರಡಿಸಿಬಿಟ್ಟನಲ್ಲವೇ? ಹೀಗಿದ್ದರೂ ನಾನು ಸಾಯುವಂತೆ ನೀನು ನನ್ನ ಪ್ರಾಣಕ್ಕೆ ಉರಲೊಡ್ಡುವುದೇಕೆ?” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆಗ ಆಕೆಯು ಅವನಿಗೆ - ಸೌಲನು ಮಾಡಿದ್ದು ನಿನಗೆ ಗೊತ್ತುಂಟು; ಅವನು ಸತ್ತವರಲ್ಲಿ ವಿಚಾರಿಸುವವರನ್ನೂ ಬೇತಾಳಿಕರನ್ನೂ ದೇಶದಿಂದ ಹೊರಡಿಸಿಬಿಟ್ಟನಲ್ಲಾ; ಹೀಗಿದ್ದರೂ ನಾನು ಸಾಯುವಂತೆ ನೀನು ನನ್ನ ಪ್ರಾಣಕ್ಕೆ ಉರಲೊಡ್ಡುವದೇಕೆ ಅಂದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆದರೆ ಆ ಬೇತಾಳಿಕಳು ಸೌಲನಿಗೆ, “ಸೌಲನು ಏನು ಮಾಡಿದನೆಂಬುದು ನಿನಗೆ ನಿಜವಾಗಿಯೂ ತಿಳಿದಿದೆ. ಅವನು ಮಾಂತ್ರಿಕರನ್ನೂ ಜ್ಯೋತಿಷಿಗಳನ್ನೂ ಬಲಾತ್ಕಾರವಾಗಿ ದೇಶದಿಂದ ಹೊರಗಟ್ಟಿದನು. ನೀನು ನನ್ನನ್ನು ಬಲೆಗೆ ಬೀಳಿಸಿ ಕೊಲ್ಲಲು ಪ್ರಯತ್ನಿಸುತ್ತಿರುವೆ” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆ ಸ್ತ್ರೀಯು ಅವನಿಗೆ, “ಸೌಲನು ಮಾಂತ್ರಿಕಳನ್ನೂ, ಭೂತಪ್ರೇತಗಳನ್ನು ಆರಾಧಿಸುವವರನ್ನೂ ದೇಶದಿಂದ ತೆಗೆದುಬಿಟ್ಟನೆಂದು ನೀನು ಬಲ್ಲೆ. ಈಗ ನಾನು ಸಾಯುವುದಕ್ಕೆ ಕಾರಣವಾಗುವ ಹಾಗೆ ಏಕೆ ನನ್ನ ಪ್ರಾಣಕ್ಕೆ ಉರುಳಿಡುತ್ತಿ?” ಎಂದಳು. ಅಧ್ಯಾಯವನ್ನು ನೋಡಿ |
ಇಸ್ರಾಯೇಲರ ಅರಸನು ಪತ್ರವನ್ನು ಓದಿದ ಕೂಡಲೆ ಬಟ್ಟೆಗಳನ್ನು ಹರಿದುಕೊಂಡು, ತನ್ನ ಪರಿವಾರದವರಿಗೆ, “ಅವನು ಕಳುಹಿಸಿದ ಮನುಷ್ಯನನ್ನು ಕುಷ್ಠರೋಗದಿಂದ ವಾಸಿಮಾಡಬೇಕಂತೆ. ಇದು ಎಂಥ ಅಪ್ಪಣೆ! ನಾನೇನು ದೇವರೋ? ಜೀವದಾನಮಾಡುವುದಕ್ಕಾಗಲಿ, ಸಾಯಿಸುವುದಕ್ಕಾಗಲಿ ನನಗೆ ಸಾಮರ್ಥ್ಯ ಉಂಟೋ? ಇವನು ನನ್ನೊಡನೆ ಜಗಳವಾಡುವುದಕ್ಕೆ ಕಾರಣ ಹುಡುಕುತ್ತಿದ್ದಾನಲ್ಲವೇ ನೀವೇ ಆಲೋಚಿಸಿ ನೋಡಿರಿ” ಎಂದು ಹೇಳಿದನು.