Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 29:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದುದ್ದರಿಂದ ನೀನೂ, ನಿನ್ನ ಸಂಗಡ ಬಂದ ನಿನ್ನ ಒಡೆಯನ ಸೇವಕರೂ, ನಾಳೆ ಬೆಳಿಗ್ಗೆ ಎದ್ದು ಹೊತ್ತು ಮೂಡಿದ ಕೂಡಲೆ ಹಿಂದಿರುಗಿ ಹೋಗಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆದ್ದರಿಂದ ನೀನೂ ನಿನ್ನ ಸಂಗಡ ಬಂದ ನಿನ್ನ ಒಡೆಯನ ಸೇವಕರೂ ನಾಳೆ ಬೆಳಿಗ್ಗೆ ಎದ್ದು ಹೊತ್ತುಮೂಡಿದ ಕೂಡಲೆ ಹಿಂದಿರುಗಿಹೋಗಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದದರಿಂದ ನೀನೂ ನಿನ್ನ ಸಂಗಡ ಬಂದ ನಿನ್ನ ಒಡೆಯನ ಸೇವಕರೂ ನಾಳೆ ಬೆಳಿಗ್ಗೆ ಎದ್ದು ಹೊತ್ತುಮೂಡಿದ ಕೂಡಲೆ ಹಿಂದಿರುಗಿಹೋಗಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನೀನು ಮತ್ತು ನಿನ್ನ ಜನರು ಮುಂಜಾನೆಯಲ್ಲಿಯೇ ಹಿಂದಿರುಗಿ ಹೋಗಿ. ನಾನು ನಿನಗೆ ಕೊಟ್ಟಿರುವ ನಗರಕ್ಕೆ ಹಿಂದಿರುಗು. ಅಧಿಪತಿಗಳು ನಿನ್ನ ಬಗ್ಗೆ ಹೇಳುತ್ತಿರುವ ಕೆಟ್ಟ ಮಾತುಗಳಿಗೆ ಗಮನ ನೀಡಬೇಡ. ನೀನು ಒಬ್ಬ ಒಳ್ಳೆಯ ಮನುಷ್ಯ. ಆದ್ದರಿಂದ ಸೂರ್ಯನು ಮೇಲೇರುವಷ್ಟರಲ್ಲಿ ನೀನು ನಮ್ಮನ್ನು ಬಿಟ್ಟುಹೋಗು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದ್ದರಿಂದ ನಾಳೆ ಉದಯಕ್ಕೆ ಎದ್ದು ನಿನ್ನ ಸಂಗಡ ಬಂದ ನಿನ್ನ ಯಜಮಾನನ ಸೇವಕರನ್ನು ಕರಕೊಂಡು, ಅವರ ಸಂಗಡ ಉದಯದಲ್ಲಿ ಬೆಳಕು ಆಗುವಾಗ ಹೊರಟು ಹೋಗು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 29:10
8 ತಿಳಿವುಗಳ ಹೋಲಿಕೆ  

ಸೌಲನಿಗೆ ವಿರುದ್ಧವಾಗಿ ಯುದ್ಧಕ್ಕೆ ಹೋಗುವ ಫಿಲಿಷ್ಟಿಯರ ಜೊತೆಯಲ್ಲಿ ದಾವೀದನೂ ಹೋಗುತ್ತಿರುವಾಗ ಕೆಲವು ಜನ ಮನಸ್ಸೆಯವರು ಬಂದು ಅವನೊಡನೆ ಸೇರಿಕೊಂಡರು. ದಾವೀದನು ನಿಜವಾಗಿ ಫಿಲಿಷ್ಟಿಯರಿಗೆ ಸಹಾಯಕನು ಆಗಿರಲಾರನೆಂದು, ಅವರ ಪ್ರಭುಗಳು, “ಇವನು ನಮ್ಮ ತಲೆಗಳನ್ನು ಕಡಿದು ತಿರುಗಿ ತನ್ನ ಯಜಮಾನನಾದ ಸೌಲನೊಂದಿಗೆ ಸೇರಿಕೊಂಡಾನು” ಎಂಬುದಾಗಿ ಆಲೋಚಿಸಿ ಅವನನ್ನು ಹಿಂದಕ್ಕೆ ಕಳುಹಿಸಿದರು.


ಕರ್ತನು ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ.


ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.


ದಾವೀದನ ಸಹಾಯಕ್ಕೆ ಪ್ರತಿದಿನವೂ ಹೊಸ ಗುಂಪುಗಳು ಬರುತ್ತಿದ್ದವು. ಅವನ ಸೈನ್ಯವು ದೇವರ ಸೈನ್ಯದಷ್ಟು ದೊಡ್ಡದಾಯಿತು.


ಆ ಸ್ಥಳಕ್ಕೆ ಅಬ್ರಹಾಮನು “ಯೆಹೋವ ಯೀರೆ” ಎಂದು ಹೆಸರಿಟ್ಟನು. ಯೆಹೋವನು ಬೆಟ್ಟದಲ್ಲಿ ಒದಗಿಸುವನು ಎಂಬುದಾಗಿ ಇಂದಿನವರೆಗೂ ಹಾಗೆ ಹೇಳುವ ಪದ್ಧತಿ ಇದೆ.


ದಾವೀದನು ತನ್ನ ಜನರೊಡನೆ ಬೆಳಿಗ್ಗೆ ಎದ್ದು ಹಿಂದಿರುಗಿ ಫಿಲಿಷ್ಟಿಯರ ದೇಶಕ್ಕೆ ಹೊರಟನು. ಫಿಲಿಷ್ಟಿಯರು ಇಜ್ರೇಲಿಗೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು