Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 3:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನು ಪ್ರತ್ಯಕ್ಷನಾಗಿ ಮುಂಚಿನಂತೆಯೇ “ಸಮುವೇಲನೇ, ಸಮುವೇಲನೇ” ಅಂದನು. ಸಮುವೇಲನು, “ಅಪ್ಪಣೆಯಾಗಲಿ, ನಿನ್ನ ದಾಸನು ಕೇಳಿಸಿಕೊಳ್ಳುತ್ತಿದ್ದಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸರ್ವೇಶ್ವರ ಪ್ರತ್ಯಕ್ಷರಾಗಿ ಹಿಂದಿನಂತೆಯೇ, “ಸಮುವೇಲನೇ, ಸಮುವೇಲನೇ,” ಎಂದರು. ಸಮುವೇಲನು, “ಅಪ್ಪಣೆಯಾಗಲಿ, ತಮ್ಮ ದಾಸನಾದ ನಾನು ಕಾದಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನು ಪ್ರತ್ಯಕ್ಷನಾಗಿ ಮುಂಚಿನಂತೆ ಸಮುವೇಲನೇ, ಸಮುವೇಲನೇ ಅಂದನು. ಸಮುವೇಲನು - ಅಪ್ಪಣೆಯಾಗಲಿ, ನಿನ್ನ ದಾಸನು ಕಾದಿದ್ದಾನೆ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನು ಅಲ್ಲಿ ಪ್ರತ್ಯಕ್ಷನಾಗಿ ನಿಂತು ಮೊದಲು ಕರೆದಂತೆಯೇ “ಸಮುವೇಲನೇ, ಸಮುವೇಲನೇ” ಎಂದು ಕರೆದನು. ಸಮುವೇಲನು, “ಅಪ್ಪಣೆಯಾಗಲಿ, ನಾನು ನಿನ್ನ ಸೇವಕ, ಕೇಳಿಸಿಕೊಳ್ಳುತ್ತಿದ್ದೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಯೆಹೋವ ದೇವರು ಬಂದು ನಿಂತು ಮೊದಲಿನ ಹಾಗೆಯೇ, “ಸಮುಯೇಲನೇ, ಸಮುಯೇಲನೇ,” ಎಂದು ಕರೆದರು. ಅದಕ್ಕೆ ಸಮುಯೇಲನು, “ಯೆಹೋವ ದೇವರೇ ಮಾತನಾಡಿ; ನಿಮ್ಮ ದಾಸನು ಕೇಳುತ್ತಾನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 3:10
8 ತಿಳಿವುಗಳ ಹೋಲಿಕೆ  

ಯೆಹೋವನು ಸಮುವೇಲನನ್ನು ಮೂರನೆಯ ಸಾರಿ ಕರೆದನು. ಅವನು ತಟ್ಟನೆ ಏಲಿಯ ಹತ್ತಿರ ಹೋಗಿ, “ಇಗೋ, ಬಂದಿದ್ದೇನೆ, ನನ್ನನ್ನು ಕರೆದಿಯಲ್ಲಾ” ಅನ್ನಲು, ಹುಡುಗನನ್ನು ಕರೆದವನು ಯೆಹೋವನೇ ಎಂದು ಏಲಿಯು ತಿಳಿದು ಅವನಿಗೆ, “ಹೋಗಿ ಮಲಗಿಕೋ;


ಪುನಃ ಆತನು ನಿನ್ನನ್ನು ಕರೆದರೆ ಯೆಹೋವನೇ, ಅಪ್ಪಣೆಯಾಗಲಿ, ನಿನ್ನ ದಾಸನು ಕೇಳಿಸಿಕೊಳ್ಳುತ್ತಿದ್ದಾನೆ” ಎಂದು ಹೇಳು ಅಂದನು. ಸಮುವೇಲನು ತಿರುಗಿ ಹೋಗಿ ತನ್ನ ಸ್ಥಳದಲ್ಲಿ ಮಲಗಿಕೊಂಡನು.


ಯೆಹೋವನು ಸಮುವೇಲನಿಗೆ “ನಾನು ಇಸ್ರಾಯೇಲ್ಯರಲ್ಲಿ ಒಂದು ವಿಶೇಷಕಾರ್ಯವನ್ನು ನಡೆಸುವೆನು; ಅದರ ವಿಷಯ ಕೇಳುವವರ ಎರಡು ಕಿವಿಗಳೂ ನಿಮಿರುವುವು.


ಅನಂತರ ಸಮುವೇಲನು ಮಲಗಿ ಮುಂಜಾನೆಯಲ್ಲೇ ಎದ್ದು ಯೆಹೋವನ ಮಂದಿರದ ಬಾಗಿಲುಗಳನ್ನು ತೆರೆದನು. ಅವನು ತಾನು ಕಂಡದ್ದನ್ನು ಏಲಿಗೆ ತಿಳಿಸುವುದಕ್ಕೆ ಭಯಪಟ್ಟನು.


ಯೆಹೋವನು ಶೀಲೋವಿನಲ್ಲಿ ದರ್ಶನಕೊಡುವುದಕ್ಕೆ ಪ್ರಾರಂಭಿಸಿ ತನ್ನ ವಾಕ್ಯದಿಂದ ಸಮುವೇಲನಿಗೆ ತನ್ನನ್ನು ಪ್ರಕಟಿಸಿಕೊಳ್ಳುತ್ತಾ ಬಂದನು. ಸಮುವೇಲನು ಇಸ್ರಾಯೇಲರೆಲ್ಲರಿಗೆ ದೈವೋತ್ತರಗಳನ್ನು ತಿಳಿಸುತ್ತಿದ್ದನು.


ಇನ್ನು ಮುಂದೆ ಇವನೇ ನಿಮ್ಮ ಅರಸನಾಗಿರುವನು. ಚಿಕ್ಕಂದಿನಿಂದ ನಿಮ್ಮ ನಾಯಕನಾಗಿದ್ದ ನಾನು ಈಗ ತಲೆನರೆತ ಮುದುಕನಾಗಿದ್ದೇನೆ; ನನ್ನ ಮಕ್ಕಳು ನಿಮ್ಮೊಂದಿಗಿದ್ದಾರೆ.


ಆ ಮನುಷ್ಯನು “ನಾನು ಅಂಥವನಲ್ಲ; ಯೆಹೋವನ ಸೇನಾಧಿಪತಿ; ಈಗಲೇ ಬಂದಿದ್ದೇನೆ” ಎಂದು ಉತ್ತರಿಸಿದನು. ಆಗ ಯೆಹೋಶುವನು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿ “ಒಡೆಯಾ, ನಿಮ್ಮ ದಾಸನಾದ ನನಗೆ ಏನು ಆಜ್ಞಾಪಿಸಬೇಕೆಂದಿದ್ದೀರಿ?” ಅನ್ನಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು