1 ಸಮುಯೇಲ 3:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅವನ ಮಕ್ಕಳು ಶಾಪಗ್ರಸ್ತರಾದರೆಂದು ಅವನಿಗೆ ತಿಳಿದು ಬಂದರೂ ಅವನು ಅವರನ್ನು ಗದರಿಸಲಿಲ್ಲ. ಈ ಪಾಪದ ನಿಮಿತ್ತವಾಗಿ ಅವನ ಮನೆಯನ್ನು ನಿತ್ಯದಂಡನೆಗೆ ಗುರಿಮಾಡಿದ್ದೇನೆಂದು ಅವನಿಗೆ ಮೊದಲೇ ತಿಳಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ತನ್ನ ಮಕ್ಕಳು ದೇವದೂಷಕರು ಎಂದು ಅವನಿಗೆ ತಿಳಿದುಬಂದರೂ ಅವನು ಅವರನ್ನು ತಿದ್ದಲಿಲ್ಲ. ಈ ಪಾಪದ ನಿಮಿತ್ತ ಅವನ ಕುಟುಂಬವನ್ನು ನಿತ್ಯದಂಡನೆಗೆ ಗುರಿಮಾಡಿದ್ದೇನೆಂದು ಅವನಿಗೆ ಮೊದಲೇ ತಿಳಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ತನ್ನ ಮಕ್ಕಳು ದೇವದೂಷಕರೆಂದು ಅವನಿಗೆ ತಿಳಿದುಬಂದರೂ ಅವನು ಅವರನ್ನು ಗದರಿಸಲಿಲ್ಲ. ಈ ಪಾಪದ ನಿವಿುತ್ತವಾಗಿ ಅವನ ಮನೆಯನ್ನು ನಿತ್ಯದಂಡನೆಗೆ ಗುರಿಮಾಡಿದ್ದೇನೆಂದು ಅವನಿಗೆ ಮೊದಲೇ ತಿಳಿಸಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಏಲಿಯ ಕುಟುಂಬವನ್ನು ನಿತ್ಯದಂಡನೆಗೆ ಗುರಿಪಡಿಸುತ್ತೇನೆಂದು ನಾನು ಏಲಿಗೆ ಹೇಳಿರುವೆನು. ಏಲಿಯ ಮಕ್ಕಳು ನನಗೆ ವಿರೋಧವಾಗಿ ಮಾತಾಡಿದ್ದರಿಂದ ಮತ್ತು ಕೆಟ್ಟಕಾರ್ಯಗಳನ್ನು ಮಾಡಿದ್ದರಿಂದ ನಾನು ಇದನ್ನು ಮಾಡುತ್ತೇನೆ. ಅಲ್ಲದೆ ಅವರನ್ನು ಹತೋಟಿಯಲ್ಲಿಡಲು ಏಲಿಗೆ ಸಾಧ್ಯವಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಾನು ಅವನಿಗೆ, ಅವನು ತಿಳಿದ ದುಷ್ಟತನದ ನಿಮಿತ್ತ ನಾನು ಎಂದೆಂದಿಗೂ ಅವನ ಮನೆಗೆ ನ್ಯಾಯತೀರಿಸುವೆನು, ಎಂದು ಹೇಳಿದ್ದೆನು. ಏಕೆಂದರೆ ತನ್ನ ಪುತ್ರರು ದೇವರ ನಿಂದನೆ ಮಾಡಿದಾಗ, ಅವರನ್ನು ಹತೋಟಿಗೆ ತರಲಿಲ್ಲ. ಅಧ್ಯಾಯವನ್ನು ನೋಡಿ |