1 ಸಮುಯೇಲ 3:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಸಮುವೇಲನು ಯೆಹೋವನ ಮಂದಿರದಲ್ಲಿ ದೇವರ ಮಂಜೂಷವಿದ್ದ ಸ್ಥಳದಲ್ಲಿ ಮಲಗಿದ್ದನು. ಆಗ ದೇವದೀಪವು ಇನ್ನೂ ಉರಿಯುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸಮುವೇಲನು ಸರ್ವೇಶ್ವರನ ಮಂದಿರದಲ್ಲಿ, ದೇವರ ಮಂಜೂಷವಿದ್ದ ಸ್ಥಳದಲ್ಲಿ ಮಲಗಿದ್ದನು. ದೇವರ ದೀಪ ಇನ್ನೂ ಉರಿಯುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಸಮುವೇಲನು ಯೆಹೋವನ ಮಂದಿರದಲ್ಲಿ ದೇವರ ಮಂಜೂಷವಿದ್ದ ಸ್ಥಳದಲ್ಲಿ ಮಲಗಿದ್ದನು. ಆಗ ದೇವದೀಪವು ಇನ್ನೂ ಉರಿಯುತ್ತಿರುವಾಗಲೇ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಸಮುವೇಲನು ಯೆಹೋವನ ಪವಿತ್ರ ಆಲಯದಲ್ಲಿ ಹಾಸಿಗೆಯ ಮೇಲೆ ಮಲಗಿದ್ದನು. ಯೆಹೋವನ ಪವಿತ್ರ ಪೆಟ್ಟಿಗೆಯು ಅಲ್ಲಿಯೇ ಇತ್ತು. ಯೆಹೋವನ ದೀಪವು ಇನ್ನೂ ಬೆಳಗುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ದೇವರ ಮಂಜೂಷವಿರುವ ಯೆಹೋವ ದೇವರ ಮಂದಿರದಲ್ಲಿ ದೇವರ ದೀಪವು ಆರಿಹೋಗುವುದಕ್ಕಿಂತ ಮುಂಚೆ ಸಮುಯೇಲನು ಮಲಗಿದ್ದನು. ಅಧ್ಯಾಯವನ್ನು ನೋಡಿ |
ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗು ಸಾಯಂಕಾಲ ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ ಸುಗಂಧದ್ರವ್ಯ ಧೂಪವನ್ನು ಹಾಕುತ್ತಾ ಶುದ್ಧ ಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಯೆಹೋವನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಆತನನ್ನು ಬಿಟ್ಟವರು.