Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 3:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಪುನಃ ಆತನು ನಿನ್ನನ್ನು ಕರೆದರೆ ಯೆಹೋವನೇ, ಅಪ್ಪಣೆಯಾಗಲಿ, ನಿನ್ನ ದಾಸನು ಕೇಳಿಸಿಕೊಳ್ಳುತ್ತಿದ್ದಾನೆ” ಎಂದು ಹೇಳು ಅಂದನು. ಸಮುವೇಲನು ತಿರುಗಿ ಹೋಗಿ ತನ್ನ ಸ್ಥಳದಲ್ಲಿ ಮಲಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವನು ಸಮುವೇಲನಿಗೆ, “ಹೋಗಿ ಮಲಗಿಕೋ; ಮತ್ತೆ ಅವರು ನಿನ್ನನ್ನು ಕರೆದರೆ, ‘ಸರ್ವೇಶ್ವರಾ, ಅಪ್ಪಣೆಯಾಗಲಿ; ತಮ್ಮ ದಾಸ ಕಾದಿದ್ದಾನೆ,’ ಎಂದು ಹೇಳು,” ಎಂದನು. ಸಮುವೇಲನು ಹಿಂದಿರುಗಿ ಹೋಗಿ ತನ್ನ ಸ್ಥಳದಲ್ಲೇ ಮಲಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ತಿರಿಗಿ ಶಬ್ದವಾದರೆ ಯೆಹೋವನೇ, ಅಪ್ಪಣೆಯಾಗಲಿ, ನಿನ್ನ ದಾಸನು ಕಾದಿದ್ದಾನೆ ಎಂದು ಹೇಳು ಅಂದನು. ಸಮುವೇಲನು ತಿರಿಗಿ ಹೋಗಿ ತನ್ನ ಸ್ಥಳದಲ್ಲಿ ಮಲಗಿಕೊಳ್ಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಏಲಿಯು ಸಮುವೇಲನಿಗೆ, “ಹೋಗಿ ಮಲಗಿಕೋ. ನಿನ್ನನ್ನು ಮತ್ತೆ ಕರೆದರೆ, ‘ಅಪ್ಪಣೆಯಾಗಲಿ, ಯೆಹೋವನೇ ನಾನು ನಿನ್ನ ಸೇವಕ, ಕೇಳಿಸಿಕೊಳ್ಳುತ್ತಿದ್ದೇನೆ’ ಎಂದು ಉತ್ತರಿಸು” ಎಂಬುದಾಗಿ ಹೇಳಿದನು. ಸಮುವೇಲನು ತನ್ನ ಸ್ಥಳದಲ್ಲಿ ಮಲಗಲು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಏಲಿಯು ಸಮುಯೇಲನಿಗೆ, “ನೀನು ಹೋಗಿ ಮಲಗು; ಅವರು ನಿನ್ನನ್ನು ಕರೆದರೆ, ಆಗ ನೀನು, ‘ಯೆಹೋವ ದೇವರೇ, ಮಾತನಾಡಿ, ನಿಮ್ಮ ದಾಸನು ಕೇಳುತ್ತಾನೆ,’ ಎಂದು ಹೇಳು,” ಎಂದನು. ಹಾಗೆಯೇ ಸಮುಯೇಲನು ಹೋಗಿ ತನ್ನ ಸ್ಥಳದಲ್ಲಿ ಮಲಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 3:9
9 ತಿಳಿವುಗಳ ಹೋಲಿಕೆ  

ಅವರು ಮೋಶೆಗೆ, “ನೀನೇ ನಮ್ಮ ಸಂಗಡ ಮಾತನಾಡು, ನಾವು ಕೇಳುತ್ತೇವೆ. ದೇವರು ನಮ್ಮ ಸಂಗಡ ಮಾತನಾಡಿದರೆ ನಾವು ಸತ್ತು ಹೋಗುತ್ತೇವೆ” ಎಂದು ಹೇಳಿದರು.


ಆಗ, “ಯಾರನ್ನು ಕಳುಹಿಸಲಿ? ಯಾರು ನಮಗೋಸ್ಕರ ಹೋಗುವನು?” ಎಂಬ ಕರ್ತನ ನುಡಿಯನ್ನು ಕೇಳಿ, “ಇಗೋ, ನಾನಿದ್ದೇನೆ, ನನ್ನನ್ನು ಕಳುಹಿಸು” ಎಂದೆನು.


ಯೆಹೋವ ದೇವರು ಏನು ಹೇಳುತ್ತಾನೋ ಕೇಳುತ್ತೇನೆ. ಆತನು ತನ್ನ ಭಕ್ತಜನರಿಗೆ ಸಮಾಧಾನದ ವಾಕ್ಯವನ್ನು ಹೇಳುತ್ತಾನಲ್ಲಾ. ಅವರಾದರೋ ತಿರುಗಿ ಮೂರ್ಖತನದಲ್ಲಿ ಬೀಳದಿರಲಿ.


ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ಅಲ್ಲಿ ನಿನಗೆ ತಿಳಿಸಲ್ಪಡುವುದು” ಎಂದು ಹೇಳಿದನು.


ಆ ಮೇಲೆ ಆ ಪುರುಷನು ನನಗೆ, “ಅತಿಪ್ರಿಯನೇ, ಭಯಪಡಬೇಡ; ನಿನಗೆ ಸಮಾಧಾನವಿರಲಿ, ಬಲಗೊಳ್ಳು, ಬಲಗೊಳ್ಳು” ಎಂದು ಹೇಳಿದನು. ಅವನು ಈ ಮಾತನ್ನು ಹೇಳಿದ ಕೂಡಲೆ ನಾನು ಬಲಗೊಂಡು, “ಎನ್ನೊಡೆಯನೇ, ಮಾತನಾಡು; ನನ್ನನ್ನು ಬಲಗೊಳಿಸಿದ್ದೀ”


ಯೆಹೋವನು ಸಮುವೇಲನನ್ನು ಮೂರನೆಯ ಸಾರಿ ಕರೆದನು. ಅವನು ತಟ್ಟನೆ ಏಲಿಯ ಹತ್ತಿರ ಹೋಗಿ, “ಇಗೋ, ಬಂದಿದ್ದೇನೆ, ನನ್ನನ್ನು ಕರೆದಿಯಲ್ಲಾ” ಅನ್ನಲು, ಹುಡುಗನನ್ನು ಕರೆದವನು ಯೆಹೋವನೇ ಎಂದು ಏಲಿಯು ತಿಳಿದು ಅವನಿಗೆ, “ಹೋಗಿ ಮಲಗಿಕೋ;


ಯೆಹೋವನು ಪ್ರತ್ಯಕ್ಷನಾಗಿ ಮುಂಚಿನಂತೆಯೇ “ಸಮುವೇಲನೇ, ಸಮುವೇಲನೇ” ಅಂದನು. ಸಮುವೇಲನು, “ಅಪ್ಪಣೆಯಾಗಲಿ, ನಿನ್ನ ದಾಸನು ಕೇಳಿಸಿಕೊಳ್ಳುತ್ತಿದ್ದಾನೆ” ಎಂದನು.


ಆ ಮನುಷ್ಯನು “ನಾನು ಅಂಥವನಲ್ಲ; ಯೆಹೋವನ ಸೇನಾಧಿಪತಿ; ಈಗಲೇ ಬಂದಿದ್ದೇನೆ” ಎಂದು ಉತ್ತರಿಸಿದನು. ಆಗ ಯೆಹೋಶುವನು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿ “ಒಡೆಯಾ, ನಿಮ್ಮ ದಾಸನಾದ ನನಗೆ ಏನು ಆಜ್ಞಾಪಿಸಬೇಕೆಂದಿದ್ದೀರಿ?” ಅನ್ನಲು


ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವುದು ಸತ್ಯ. ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು