Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 30:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ದಾವೀದನು ಅವನನ್ನು, “ನೀನು ಯಾರ ಕಡೆಯವನು, ಎಲ್ಲಿಯವನು?” ಎಂದು ಕೇಳಿದನು. ಅವನು “ನಾನು ಐಗುಪ್ತನು, ಒಬ್ಬ ಅಮಾಲೇಕ್ಯನ ದಾಸನು. ನಾನು ಮೂರು ದಿನಗಳ ಹಿಂದೆ ಅಸ್ವಸ್ಥನಾಗಿ ಮಲಗಿಕೊಂಡಿದ್ದರಿಂದ ನನ್ನ ಯಜಮಾನನು ನನ್ನನ್ನು ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ದಾವೀದನು ಅವನನ್ನು, “ನೀನು ಯಾರ ಕಡೆಯವನು? ಎಲ್ಲಿಯವನು?” ಎಂದು ಕೇಳಿದನು. ಆಗ ಅವನು, “ನಾನು ಈಜಿಪ್ಟಿನವನು; ಒಬ್ಬ ಅಮಾಲೇಕ್ಯನ ಗುಲಾಮನು. ನಾನು ಮೂರು ದಿನಗಳ ಹಿಂದೆ ಅಸ್ವಸ್ಥನಾಗಿ ಮಲಗಿಕೊಂಡದ್ದರಿಂದ ನನ್ನ ಯಜಮಾನ ನನ್ನನ್ನು ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ದಾವೀದನು ಅವನನ್ನು - ನೀನು ಯಾರ ಕಡೆಯವನು? ಎಲ್ಲಿಯವನು ಎಂದು ಕೇಳಲು ಅವನು - ನಾನು ಐಗುಪ್ತ್ಯನು; ಒಬ್ಬ ಅಮಾಲೇಕ್ಯನ ದಾಸನು. ನಾನು ಮೂರು ದಿನಗಳ ಹಿಂದೆ ಅಸ್ವಸ್ಥನಾಗಿ ಮಲಗಿಕೊಂಡದರಿಂದ ನನ್ನ ಯಜಮಾನನು ನನ್ನನ್ನು ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ದಾವೀದನು ಈಜಿಪ್ಟಿನವನನ್ನು, “ನಿಮ್ಮ ಒಡೆಯನು ಯಾರು? ನೀನು ಬಂದಿರುವುದು ಎಲ್ಲಿಂದ?” ಎಂದು ಕೇಳಿದನು. ಈಜಿಪ್ಟಿನವನು, “ನಾನು ಒಬ್ಬ ಈಜಿಪ್ಟಿನವನು ನಾನು ಒಬ್ಬ ಅಮಾಲೇಕ್ಯನ ಗುಲಾಮನು. ಮೂರು ದಿನಗಳ ಹಿಂದೆ ನಾನು ಅಸ್ವಸ್ಥನಾಗಿದ್ದರಿಂದ ನಮ್ಮ ಒಡೆಯನು ನನ್ನನ್ನು ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದಾವೀದನು ಅವನನ್ನು, “ನೀನು ಯಾರ ಕಡೆಯವನು? ನೀನು ಎಲ್ಲಿಯವನು?” ಎಂದು ಕೇಳಿದನು. ಅವನು, “ನಾನು ಈಜಿಪ್ಟಿನವನು, ಒಬ್ಬ ಅಮಾಲೇಕ್ಯನ ಸೇವಕನು. ಮೂರು ದಿನಗಳಿಂದ ನಾನು ರೋಗದಲ್ಲಿ ಬಿದ್ದುದರಿಂದ ನನ್ನ ಯಜಮಾನನು ನನ್ನನ್ನು ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 30:13
9 ತಿಳಿವುಗಳ ಹೋಲಿಕೆ  

ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.


ಶಿಷ್ಟನು ತನ್ನ ಪಶುಗಳ ಕ್ಷೇಮವನ್ನು ಲಕ್ಷಿಸುತ್ತಾನೆ, ದುಷ್ಟನ ವಾತ್ಸಲ್ಯವೋ ಕ್ರೂರತನವೇ.


ಅಂಜೂರ ಹಣ್ಣಿನ ಉಂಡೆಯನ್ನೂ ಎರಡು ದ್ರಾಕ್ಷಿ ಗೊಂಚಲುಗಳನ್ನು ಕೊಟ್ಟರು. ಮೂರು ದಿನ ಹಗಲಿರುಳು ಅನ್ನಪಾನವಿಲ್ಲದೆ ಬಹಳವಾಗಿ ಬಳಲಿಹೋಗಿದ್ದ ಇವನು ಅವುಗಳನ್ನು ತಿನ್ನುತ್ತಲೇ ಚೇತರಿಸಿಕೊಂಡನು.


ನಾವು ಕೆರೇತ್ಯರೂ ಯೆಹೂದ್ಯರೂ ಕಾಲೇಬ್ಯರೂ ಇರುವ ದಕ್ಷಿಣ ಪ್ರಾಂತ್ಯವನ್ನು ಸೂರೆಮಾಡಿ ಚಿಕ್ಲಗ್ ಊರನ್ನು ಸುಟ್ಟುಬಿಟ್ಟು ಬಂದೆವು” ಎಂದು ಉತ್ತರ ಕೊಟ್ಟನು.


ನಾನು, ‘ಇಗೋ ಬಂದೆನು’ ಎಂದು ಹೇಳಿ ಹೋದಾಗ ಅವನು ‘ನೀನಾರು?’ ಎಂದು ಕೇಳಿದ್ದಕ್ಕೆ, ‘ನಾನು ಅಮಾಲೇಕ್ಯನು’ ಎಂದು ಉತ್ತರಕೊಟ್ಟೆನು.


ಆಗ ಅವರು ಯೋನನಿಗೆ ಅಯ್ಯಾ, “ಈ ಕೇಡು ನಮಗೆ ಸಂಭವಿಸಲು ಕಾರಣವೇನು ಎಂಬುದನ್ನು ನೀನೇ ನಮಗೆ ತಿಳಿಸು; ನಿನ್ನ ವೃತ್ತಿ ಏನು? ನೀನು ಎಲ್ಲಿಂದ ಬಂದವನು? ನೀನು ಯಾವ ದೇಶದವನು?, ಯಾವ ಜನಾಂಗದವನು?” ಎಂದು ಅವನನ್ನು ಕೇಳಲು


ದಾವೀದನು ಅವನನ್ನು, “ನೀನು ಎಲ್ಲಿಂದ ಬಂದಿ” ಎಂದು ಕೇಳಲು ಅವನು, “ನಾನು ಇಸ್ರಾಯೇಲರ ಠಾಣ್ಯದಿಂದ ತಪ್ಪಿಸಿಕೊಂಡು ಬಂದೆನು” ಎಂದು ಉತ್ತರಕೊಟ್ಟನು.


ದಾವೀದನು ವರ್ತಮಾನ ತಂದ ಯುವಕನನ್ನು, “ನೀನು ಎಲ್ಲಿಯವನು?” ಎಂದು ಕೇಳಿದನು. ಅವನು, “ನಾನು ಇಸ್ರಾಯೇಲರಲ್ಲಿ ಪ್ರವಾಸಿಯಾಗಿರುವ ಅಮಾಲೇಕ್ಯನು” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು