1 ಸಮುಯೇಲ 30:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅನಂತರ ದಾವೀದನು, “ನೀನು ನನ್ನನ್ನು ಆ ಗುಂಪು ಇರುವ ಸ್ಥಳಕ್ಕೆ ಕರೆದುಕೊಂಡು ಹೋಗುವಿಯೋ?” ಎಂದು ಕೇಳಿದ್ದಕ್ಕೆ ಅವನು, “ನೀನು ನನ್ನನ್ನು ಕೊಲ್ಲುವುದಿಲ್ಲವೆಂದೂ ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದರೆ ನಿನ್ನನ್ನು ಆ ಗುಂಪಿನವರ ಬಳಿಗೆ ಕರಕೊಂಡು ಹೋಗುವೆನು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅನಂತರ ದಾವೀದನು, “ನೀನು ನನ್ನನ್ನು ಆ ಗುಂಪು ಇರುವ ಸ್ಥಳಕ್ಕೆ ಕರೆದುಕೊಂಡು ಹೋಗುವಿಯಾ?” ಎಂದು ಕೇಳಿದ್ದಕ್ಕೆ ಅವನು, “ನೀನು ನನ್ನನ್ನು ಕೊಲ್ಲುವುದಿಲ್ಲವೆಂದೂ ನನ್ನ ಯಜಮಾನನ ಕೈಗೆ ಒಪ್ಪಿಸುವುದಿಲ್ಲವೆಂದೂ ದೇವರ ಹೆಸರಿನಲ್ಲಿ ಪ್ರಮಾಣಮಾಡಿದರೆ ನಿನ್ನನ್ನು, ಆ ಗುಂಪಿನವರ ಬಳಿಗೆ ಕರೆದುಕೊಂಡು ಹೋಗುವೆನು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅನಂತರ ದಾವೀದನು - ನೀನು ನನ್ನನ್ನು ಆ ಗುಂಪು ಇರುವ ಸ್ಥಳಕ್ಕೆ ಕರಕೊಂಡು ಹೋಗುವಿಯೋ ಎಂದು ಕೇಳಿದ್ದಕ್ಕೆ ಅವನು - ನೀನು ನನ್ನನ್ನು ಕೊಲ್ಲುವದಿಲ್ಲವೆಂದೂ ನನ್ನ ಯಜಮಾನನ ಕೈಗೆ ಒಪ್ಪಿಸುವದಿಲ್ಲವೆಂದೂ ದೇವರ ಹೆಸರಿನಲ್ಲಿ ಪ್ರಮಾಣಮಾಡಿದರೆ ನಿನ್ನನ್ನು ಆ ಗುಂಪಿನವರ ಬಳಿಗೆ ಕರಕೊಂಡು ಹೋಗುವೆನು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ದಾವೀದನು ಈಜಿಪ್ಟಿನವನನ್ನು, “ನಮ್ಮ ಕುಟುಂಬಗಳನ್ನು ಅಪಹರಿಸಿರುವ ಜನರ ಹತ್ತಿರಕ್ಕೆ ನಮ್ಮನ್ನು ಕರೆದುಕೊಂಡು ಹೋಗುವೆಯಾ?” ಎಂದು ಕೇಳಿದನು. ಈಜಿಪ್ಟಿನವನು, “ನೀವು ನನ್ನನ್ನು ಕೊಲ್ಲುವುದಿಲ್ಲವೆಂದು ಇಲ್ಲವೆ ನನ್ನ ಒಡೆಯನಿಗೆ ಮರಳಿ ಒಪ್ಪಿಸುವುದಿಲ್ಲವೆಂದು ದೇವರ ಮುಂದೆ ಪ್ರಮಾಣ ಮಾಡಿರಿ. ಆಗ ನಾನು ನಿಮ್ಮವರನ್ನು ಕಂಡು ಹಿಡಿಯಲು ಸಹಾಯ ಮಾಡುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ದಾವೀದನು ಅವನಿಗೆ, “ನೀನು ನನ್ನನ್ನು ಆ ಗುಂಪಿನ ಬಳಿಗೆ ಕರೆದುಕೊಂಡು ಹೋಗುತ್ತೀಯಾ?” ಎಂದು ಕೇಳಿದನು. ಅದಕ್ಕವನು, “ನೀನು ನನ್ನನ್ನು ಕೊಂದುಹಾಕುವುದಿಲ್ಲ ಇಲ್ಲವೆ ನನ್ನನ್ನು ನನ್ನ ಯಜಮಾನನ ಕೈಯಲ್ಲಿ ಒಪ್ಪಿಸಿಕೊಡುವುದಿಲ್ಲ ಎಂದು ನನಗೆ ದೇವರ ಹೆಸರಿನಿಂದ ಪ್ರಮಾಣಮಾಡಿದರೆ, ನಿನ್ನನ್ನು ಅಲ್ಲಿಗೆ ಕರೆದುಕೊಂಡು ಹೋಗುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿ |