1 ಸಮುಯೇಲ 30:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ದಾವೀದನು ಮರುದಿನ ಹೊತ್ತಾರೆಯಿಂದ ಸೂರ್ಯಸ್ತಮಾನದವರೆಗೂ ಅವರನ್ನು ಸಂಹರಿಸಿದನು. ಒಂಟೆಗಳನ್ನು ಹತ್ತಿ ಓಡಿಹೋದ ನಾನೂರು ಮಂದಿ ಪ್ರಾಯಸ್ಥರ ಹೊರತು ಬೇರೆ ಯಾರೂ ತಪ್ಪಿಸಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ದಾವೀದನು ಮರುದಿನ ನಸುಕಿನಲ್ಲೇ ಅವರ ಮೇಲೆ ದಾಳಿಮಾಡಿ ಸೂರ್ಯ ಅಸ್ತವಾಗುವವರೆಗೂ ಅವರನ್ನು ಸದೆಬಡಿದನು. ಒಂಟೆಗಳನ್ನು ಹತ್ತಿ ಓಡಿಹೋದ ನಾನೂರು ಮಂದಿ ಯುವಕರ ಹೊರತು ಬೇರೆ ಯಾರೂ ತಪ್ಪಿಸಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ದಾವೀದನು ಮರುದಿನ ಹೊತ್ತಾರೆಯಿಂದ ಸೂರ್ಯಾಸ್ತಮಾನದವರೆಗೂ ಅವರನ್ನು ಸಂಹರಿಸಿದನು. ಒಂಟೆಗಳನ್ನು ಹತ್ತಿ ಓಡಿಹೋದ ನಾನೂರು ಮಂದಿ ಪ್ರಾಯಸ್ಥರ ಹೊರತು ಬೇರೆ ಯಾರೂ ತಪ್ಪಿಸಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ದಾವೀದನು ಅವರನ್ನು ಸೋಲಿಸಿ ಅವರನ್ನು ಕೊಂದನು. ಅವರು ಹೊತ್ತಾರೆಯಿಂದ ಮಾರನೆಯ ದಿನದ ಸಂಜೆಯವರೆಗೆ ಹೋರಾಡಿದರು. ನಾನೂರು ಮಂದಿ ಯುವಕರು ತಮ್ಮ ಒಂಟೆಗಳ ಮೇಲೇರಿ ಓಡಿಹೋದದ್ದನ್ನು ಬಿಟ್ಟರೆ, ಉಳಿದ ಅಮಾಲೇಕ್ಯರಲ್ಲಿ ಯಾರೂ ತಪ್ಪಿಸಿಕೊಳ್ಳಲಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆಗ ದಾವೀದನು ಅವರ ಮೇಲೆ ಬೆಳಗಿನಜಾವದಿಂದ ಮಾರನೆಯ ದಿವಸದ ಸಾಯಂಕಾಲದವರೆಗೂ ದಾಳಿಮಾಡುತ್ತಾ ಇದ್ದನು. ಆದರೆ ಅವರಲ್ಲಿ ಒಂಟೆಗಳ ಮೇಲೆ ಏರಿ ಓಡಿ ಹೋದ ನಾನೂರು ಮಂದಿ ಯುವಜನರ ಹೊರತು ಒಬ್ಬನಾದರೂ ತಪ್ಪಿಸಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿ |