1 ಸಮುಯೇಲ 30:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ದಾವೀದನು ಚಿಕ್ಲಗ್ ಊರಿಗೆ ಬಂದನಂತರ ತನ್ನ ಸ್ನೇಹಿತರಾದ ಯೆಹೂದದ ಹಿರಿಯರಿಗೆ ಕೊಳ್ಳೆಯ ಒಂದು ಭಾಗವನ್ನು ಕಳುಹಿಸಿ, “ಇಗೋ ಯೆಹೋವನ ಶತ್ರುಗಳನ್ನು ಸೂರೆಮಾಡಿ ತಂದವುಗಳಲ್ಲಿ ಇದು ನಿಮಗೆ ಬಹುಮಾನವಾಗಿರಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ದಾವೀದನು ಚಿಕ್ಲಗಿಗೆ ಬಂದನಂತರ ತನ್ನ ಸ್ನೇಹಿತರಾದ ಯೆಹೂದ ಹಿರಿಯರಿಗೆ ಕೊಳ್ಳೆಯ ಒಂದು ಭಾಗವನ್ನು ಕಳುಹಿಸಿದನು. “ಇಗೋ, ಸರ್ವೇಶ್ವರ ಶತ್ರುಗಳನ್ನು ಸೂರೆಮಾಡಿ ತಂದವುಗಳಲ್ಲಿ ಇದು ನಿಮಗೆ ಬಹುಮಾನವಾಗಿರಲಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ದಾವೀದನು ಚಿಕ್ಲಗಿಗೆ ಬಂದನಂತರ ತನ್ನ ಸ್ನೇಹಿತರಾದ ಯೆಹೂದಹಿರಿಯರಿಗೆ ಕೊಳ್ಳೆಯ ಒಂದು ಭಾಗವನ್ನು ಕಳುಹಿಸಿ - ಇಗೋ, ಯೆಹೋವನ ಶತ್ರುಗಳನ್ನು ಸೂರೆಮಾಡಿ ತಂದವುಗಳಲ್ಲಿ ಇದು ನಿಮಗೆ ಬಹುಮಾನವಾಗಿರಲಿ ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ದಾವೀದನು ಚಿಕ್ಲಗಿಗೆ ಆಗಮಿಸಿದನು. ನಂತರ ಅವನು ಅಮಾಲೇಕ್ಯರಿಂದ ವಶಪಡಿಸಿಕೊಂಡಿದ್ದ ಕೆಲವು ವಸ್ತುಗಳನ್ನು ಯೆಹೂದದ ಅವನ ಗೆಳೆಯರಿಗೂ ನಾಯಕರಿಗೂ ಕಳುಹಿಸಿದನು. ದಾವೀದನು, “ಯೆಹೋವನ ಶತ್ರುಗಳಿಂದ ನಾವು ವಶಪಡಿಸಿಕೊಂಡ ವಸ್ತುಗಳ ಕೊಡುಗೆಯು ನಿಮಗಾಗಿ ಇಲ್ಲಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ದಾವೀದನು ಚಿಕ್ಲಗನ್ನು ತಲುಪಿದಾಗ ಕೊಳ್ಳೆಯಿಂದ ತಂದದ್ದರಲ್ಲಿ ಒಂದು ಭಾಗವನ್ನು ತನ್ನ ಸ್ನೇಹಿತರಾದ ಯೆಹೂದದ ಹಿರಿಯರಿಗೆ ಕಳುಹಿಸಿದನು. “ಯೆಹೋವ ದೇವರ ವೈರಿಗಳಿಂದ ಕೊಳ್ಳೆ ಹೊಡೆದದ್ದರಿಂದ ಈ ಬಹುಮಾನ ನಿಮಗಾಗಿದೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |