Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 31:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡಿದರು. ಇಸ್ರಾಯೇಲರು ಅವರಿಂದ ಅಪಜಯಹೊಂದಿ ಗಿಲ್ಬೋವ ಬೆಟ್ಟದಲ್ಲಿ ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಫಿಲಿಷ್ಟಿಯರು ಇಸ್ರಯೇಲರೊಡನೆ ಯುದ್ಧಮಾಡಿದರು. ಇಸ್ರಯೇಲರು ಅವರಿಂದ ಅಪಜಯಹೊಂದಿ ಗಿಲ್ಬೋವ ಬೆಟ್ಟದಲ್ಲಿ ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಫಿಲಿಷ್ಟಿಯರು ಇಸ್ರಾಯೇಲ್ಯರೊಡನೆ ಯುದ್ಧಮಾಡಿದರು. ಇಸ್ರಾಯೇಲ್ಯರು ಅವರಿಂದ ಅಪಜಯ ಹೊಂದಿ ಗಿಲ್ಬೋವ ಬೆಟ್ಟದಲ್ಲಿ ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಫಿಲಿಷ್ಟಿಯರು ಇಸ್ರೇಲರ ವಿರುದ್ಧ ಹೋರಾಡಿದರು. ಇಸ್ರೇಲರು ಫಿಲಿಷ್ಟಿಯರಿಂದ ಸೋತು ಓಡಿಹೋದರು. ಬಹಳ ಜನ ಇಸ್ರೇಲರು ಗಿಲ್ಬೋವ ಶಿಖರದಲ್ಲಿ ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಫಿಲಿಷ್ಟಿಯರು ಇಸ್ರಾಯೇಲರ ವಿರುದ್ಧ ಯುದ್ಧಮಾಡಿದರು. ಆಗ ಇಸ್ರಾಯೇಲರು ಫಿಲಿಷ್ಟಿಯರಿಂದ ಸೋತು ಓಡಿಹೋಗಿ, ಗಿಲ್ಬೋವ ಬೆಟ್ಟದಲ್ಲಿ ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 31:1
10 ತಿಳಿವುಗಳ ಹೋಲಿಕೆ  

ಫಿಲಿಷ್ಟಿಯರು ಸೈನ್ಯಕೂಡಿಸಿಕೊಂಡು ಬಂದು ಶೂನೇಮಿನಲ್ಲಿ ಪಾಳೆಯಮಾಡಿಕೊಂಡರು. ಸೌಲನು ಎಲ್ಲಾ ಇಸ್ರಾಯೇಲರೊಡನೆ ಬಂದು, ಗಿಲ್ಬೋವದಲ್ಲಿ ಇಳಿದುಕೊಂಡರು.


ಗಿಲ್ಬೋವ ಗುಡ್ಡಗಳೇ, ನಿಮ್ಮ ಮೇಲೆ ಮಂಜು, ಮಳೆಯು, ನೈವೇದ್ಯಕ್ಕಾಗಿ ಫಲಿಸುವ ಹೊಲಗಳೂ ಇಲ್ಲದೆ ಹೋಗಲಿ. ಅಲ್ಲಿ ಪರಾಕ್ರಮಶಾಲಿಗಳ ಗುರಾಣಿಗಳು ಬಿದ್ದಿರುತ್ತವೆ. ಸೌಲನ ಗುರಾಣಿಯೂ ಅಭಿಷಿಕ್ತನಲ್ಲದವನ ಗುರಾಣಿಯಂತೆ ಬಿದ್ದಿದೆ.


ಫಿಲಿಷ್ಟಿಯರು ತಮ್ಮ ಸೈನ್ಯವನ್ನು ಕೂಡಿಸಿಕೊಂಡು ಬಂದು ಅಫೇಕಿನಲ್ಲಿ ಪಾಳೆಯಮಾಡಿಕೊಂಡರು. ಇಸ್ರಾಯೇಲರು ಇಜ್ರೇಲಿನ ಬೈಲಿನಲ್ಲಿರುವ ಬುಗ್ಗೆಯ ಬಳಿಯಲ್ಲಿ ಇಳಿದುಕೊಂಡರು.


ಆಗ ಸಮುವೇಲನು ಸೌಲನನ್ನು, “ನೀನು ನನ್ನ ವಿಶ್ರಾಂತಿಯನ್ನು ಕೇಡಿಸಿದ್ದೇಕೆ? ನನ್ನನ್ನು ಇಲ್ಲಿಗೆ ಯಾಕೆ ಬರಮಾಡಿದೆ?” ಎಂದು ಕೇಳಿದನು. ಅದಕ್ಕೆ ಸೌಲನು, “ನಾನು ಬಲು ಇಕ್ಕಟ್ಟಿನಲ್ಲಿದ್ದೇನೆ. ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಕ್ಕೆ ಬಂದಿದ್ದಾರೆ. ದೇವರು ನನ್ನನ್ನು ಬಿಟ್ಟು ದೂರ ಹೋಗಿದ್ದಾನೆ. ಆತನು ನನಗೆ ಪ್ರವಾದಿಗಳಿಂದಾಗಲಿ, ಕನಸುಗಳಿಂದಾಗಲಿ ಉತ್ತರಕೊಡಲೊಲ್ಲನು. ಆದುದರಿಂದ ನಾನು ಮಾಡಬೇಕಾದದ್ದನ್ನು ನೀನು ತಿಳಿಸುವಿಯೆಂದು ನಿನ್ನನ್ನು ಇಲ್ಲಿಗೆ ಬರಮಾಡಿದೆನು” ಅಂದನು.


ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕಾಗಿ ಸೈನ್ಯವನ್ನು ಕೂಡಿಸತೊಡಗಿದರು. ಆಗ ಆಕೀಷನು ದಾವೀದನಿಗೆ, “ನೀನೂ ನಿನ್ನ ಜನರೂ ಯುದ್ಧಕ್ಕೆ ನನ್ನ ಜೊತೆಯಲ್ಲಿ ಬರಬೇಕೆಂಬುದು ನಿನಗೆ ಗೊತ್ತಿಲ್ಲವೋ” ಎನ್ನಲು ದಾವೀದನು,


ನೀವು ದ್ರೋಹಿಗಳಾಗಿಯೇ ಇದ್ದರೆ ನೀವು ಮತ್ತು ನಿಮ್ಮ ಅರಸನು ನಾಶವಾಗುವಿರಿ” ಎಂದು ಹೇಳಿದನು.


“ನಾನು ಆಕಸ್ಮಿಕವಾಗಿ ಗಿಲ್ಬೋವ ಪರ್ವತಪ್ರದೇಶಕ್ಕೆ ಬಂದಾಗ ಸೌಲನು ತನ್ನ ಬರ್ಜಿಯನ್ನೂರಿಕೊಂಡು ನಿಂತಿರುವುದನ್ನೂ ರಥಗಳು ಮತ್ತು ರಾಹುತರು ಅವನನ್ನು ಹಿಂದಟ್ಟಿ ಬರುತ್ತಿರುವುದನ್ನೂ ಕಂಡೆನು.


ಸೌಲನ ಮಗನಾದ ಯೋನಾತಾನನಿಗೆ ಮೆಫೀಬೋಶೆತನೆಂಬ ಒಬ್ಬ ಕುಂಟ ಮಗನಿದ್ದನು. ಅವನು ಕುಂಟನಾಗಿದ್ದು ಹೇಗೆಂದರೆ, ಸೌಲಯೋನಾತಾನರು ಸತ್ತರೆಂಬ ವರ್ತಮಾನವು ಇಜ್ರೇಲಿನಿಂದ ಬಂದಾಗ, ಐದು ವರ್ಷದವನಾಗಿದ್ದ ಅವನನ್ನು ಅವನ ದಾದಿಯು ತೆಗೆದುಕೊಂಡು ಅವಸರದಿಂದ ಓಡಿಹೋಗುವಾಗ ಅವನು ಬಿದ್ದು ಕುಂಟನಾದನು.


ಆತನು ನಿನ್ನ ಕೂಡ ಇಸ್ರಾಯೇಲ್ಯರೆಲ್ಲರನ್ನೂ ಫಿಲಿಷ್ಟಿಯರ ಕೈಗೆ ಒಪ್ಪಿಸುವನು. ನಾಳೆ ನೀನೂ ನಿನ್ನ ಮಕ್ಕಳೂ ನಾನಿರುವಲ್ಲಿಗೆ ಬರುವಿರಿ. ಆತನು ಇಸ್ರಾಯೇಲ್ಯರ ಸೈನ್ಯವನ್ನು ಫಿಲಿಷ್ಟಿಯರ ಕೈಗೆ ಒಪ್ಪಿಸುವನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು