Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 31:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸೌಲನ ತಲೆಯನ್ನು ಕಡಿದು ಅವನ ಆಯುಧಗಳನ್ನು ತೆಗೆದುಕೊಂಡನು. ಅವುಗಳನ್ನು ತಮ್ಮ ದೇಶದ ಎಲ್ಲಾ ಕಡೆಗೂ ಕಳುಹಿಸಿ, ತಮ್ಮ ಎಲ್ಲ ಜನರಿಗೂ ದೇವಸ್ಥಾನಗಳಿಗೂ ಜಯವಾರ್ತೆಯನ್ನು ಮುಟ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸೌಲನ ತಲೆಯನ್ನು ಕಡಿದು, ಅವನ ಆಯುಧಗಳನ್ನು ತೆಗೆದುಕೊಂಡು, ಅವುಗಳನ್ನು ತಮ್ಮ ದೇಶದ ಎಲ್ಲಾ ಕಡೆಗೂ ಕಳುಹಿಸಿದರು. ತಮ್ಮ ಎಲ್ಲಾ ಜನರಿಗೂ ದೇವಸ್ಥಾನಗಳಿಗೂ ವಿಜಯವಾರ್ತೆಯನ್ನು ಮುಟ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಸೌಲನ ತಲೆಯನ್ನು ಕಡಿದು ಅವನ ಆಯುಧಗಳನ್ನು ತೆಗೆದುಕೊಂಡು ಅವುಗಳನ್ನು ತಮ್ಮ ದೇಶದ ಎಲ್ಲಾ ಕಡೆಗೂ ಕಳುಹಿಸಿ ತಮ್ಮ ಎಲ್ಲಾ ಜನರಿಗೂ ದೇವಸ್ಥಾನಗಳಿಗೂ ಜಯವಾರ್ತೆಯನ್ನು ಮುಟ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಸೌಲನ ತಲೆಯನ್ನು ಫಿಲಿಷ್ಟಿಯರು ಕಡಿದುಹಾಕಿದರು. ಮತ್ತು ಅವನ ಆಯುಧಗಳನ್ನು ತೆಗೆದುಕೊಂಡರು. ಫಿಲಿಷ್ಟಿಯ ಜನರಿಗೆ ಮತ್ತು ಅವರ ವಿಗ್ರಹಗಳ ಗುಡಿಗೆ ಈ ವಿಜಯದ ವಾರ್ತೆಯನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರು ಅವನ ತಲೆಯನ್ನು ಕಡಿದು, ಅವನ ಆಯುಧಗಳನ್ನು ತೆಗೆದುಕೊಂಡು, ತಮ್ಮ ವಿಗ್ರಹಗಳ ಮಂದಿರಗಳಿಗೂ, ಜನರಿಗೂ ಜಯವಾರ್ತೆಯನ್ನು ಸಾರುವ ಹಾಗೆ ಫಿಲಿಷ್ಟಿಯರ ದೇಶದ ಸುತ್ತಲೂ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 31:9
7 ತಿಳಿವುಗಳ ಹೋಲಿಕೆ  

ಈ ಸಂಗತಿಯನ್ನು ಗತ್ ಊರಿನಲ್ಲಿ ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರಬೇಡಿರಿ. ಫಿಲಿಷ್ಟಿಯರ ಹೆಂಗಸರು ಸಂತೋಷಿಸಾರು. ಸುನ್ನತಿಯಿಲ್ಲದವರ ಸ್ತ್ರೀಯರು ಉಲ್ಲಾಸಪಟ್ಟಾರು.


ಆದುದರಿಂದ ಸೌಲನು ಬಹು ಭೀತನಾಗಿ ತನ್ನ ಆಯುಧವಾಹಕನಿಗೆ “ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು. ಇಲ್ಲವಾದರೆ ಸುನ್ನತಿಯಿಲ್ಲದ ಈ ಜನರು ಬಂದು ನನ್ನನ್ನು ತಿವಿದು, ಅಪಕೀರ್ತಿಯನ್ನು ಉಂಟುಮಾಡಾರು” ಎಂದು ಹೇಳಲು ಅವನು ಹೆದರಿ, “ನಾನು ಕೊಲ್ಲಲಾರೆ” ಎಂದನು. ಆದುದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು ಅದರ ಮೇಲೆ ಬಿದ್ದನು.


ದಾವೀದನು ಆ ಫಿಲಿಷ್ಟಿಯನ ತಲೆಯನ್ನು ಯೆರೂಸಲೇಮಿಗೆ ಒಯ್ದನು. ಅವನ ಆಯುಧಗಳನ್ನು ತನ್ನ ಗುಡಾರದಲ್ಲಿಟ್ಟುಕೊಂಡನು.


ಈ ಪ್ರಕಾರ ದಾವೀದನು ಕತ್ತಿಯಿಂದಲ್ಲ ಬರೀ ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನನ್ನು ಸೋಲಿಸಿ, ಕೊಂದು ಹಾಕಿದನು ಫಿಲಿಷ್ಟಿಯರು ತಮ್ಮ ರಣವೀರನು ಸತ್ತುಹೋದದ್ದನ್ನು ಕಂಡು ಓಡಿಹೋದರು.


ಮರುದಿನ ಬೆಳಿಗ್ಗೆ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲಿದುಕೊಳ್ಳುವುದಕ್ಕೆ ಬಂದಾಗ, ಸೌಲನೂ ಅವನ ಮೂರು ಮಂದಿ ಮಕ್ಕಳೂ ಗಿಲ್ಬೋವ ಬೆಟ್ಟದಲ್ಲಿ ಸತ್ತುಬಿದ್ದಿರುವುದನ್ನು ಕಂಡು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು