Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 4:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಫಿಲಿಷ್ಟಿಯರು ಯುದ್ಧಮಾಡಲು ಇಸ್ರಾಯೇಲರು ಸೋತು ತಮ್ಮ ತಮ್ಮ ಮನೆಗಳಿಗೆ ಓಡಿಹೋದರು. ಮಹಾ ಸಂಹಾರವಾಯಿತು; ಇಸ್ರಾಯೇಲರಲ್ಲಿ ಮೂವತ್ತು ಸಾವಿರ ಕಾಲಾಳುಗಳು ಮಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇಸ್ರಯೇಲರು ಸೋತು ತಮ್ಮ ತಮ್ಮ ಮನೆಗಳಿಗೆ ಓಡಿಹೋದರು. ಮಹಾ ಸಂಹಾರವಾಯಿತು; ಇಸ್ರಯೇಲರಲ್ಲಿ ಮೂವತ್ತು ಸಾವಿರ ಕಾಲಾಳುಗಳು ಮಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದಕಾರಣ ಶೌರ್ಯದಿಂದ ಯುದ್ಧಮಾಡಬೇಕು ಎಂದು ಹೇಳಿಕೊಂಡು ಯುದ್ಧಮಾಡಲು ಇಸ್ರಾಯೇಲ್ಯರು ಸೋತು ತಮ್ಮ ತಮ್ಮ ಮನೆಗಳಿಗೆ ಓಡಿಹೋದರು. ಮಹಾಸಂಹಾರವಾಯಿತು; ಇಸ್ರಾಯೇಲ್ಯರಲ್ಲಿ ಮೂವತ್ತು ಸಾವಿರ ಕಾಲಾಳುಗಳು ಮಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಫಿಲಿಷ್ಟಿಯರು ಶೌರ್ಯದಿಂದ ಹೋರಾಡಿ ಇಸ್ರೇಲರನ್ನು ಸೋಲಿಸಿದರು. ಇಸ್ರೇಲರ ಪ್ರತಿಯೊಬ್ಬ ಸೈನಿಕನೂ ತನ್ನ ಪಾಳೆಯಕ್ಕೆ ಓಡಿಹೋದನು. ಇಸ್ರೇಲರಿಗೆ ಭೀಕರ ಸೋಲಾಯಿತು. ಮೂವತ್ತು ಸಾವಿರ ಇಸ್ರೇಲರು ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಫಿಲಿಷ್ಟಿಯರು ಯುದ್ಧಮಾಡಿದರು. ಇಸ್ರಾಯೇಲರು ಸೋತು, ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು. ಅಲ್ಲಿ ಮಹಾ ಸಂಹಾರವಾಯಿತು. ಇಸ್ರಾಯೇಲಿನ ಮೂವತ್ತು ಸಾವಿರ ಕಾಲಾಳುಗಳು ಮಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 4:10
19 ತಿಳಿವುಗಳ ಹೋಲಿಕೆ  

ಯೆಹೂದ್ಯರು ಇಸ್ರಾಯೇಲರಿಂದ ಸೋಲಿಸಲ್ಪಟ್ಟು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.


ಇವರು ಇಸ್ರಾಯೇಲರಿಗೆ ಎದುರಾಗಿ ವ್ಯೂಹಕಟ್ಟಿ ಯುದ್ಧಮಾಡಲು ಇಸ್ರಾಯೇಲರು ಸೋತರು; ಫಿಲಿಷ್ಟಿಯರು ರಣರಂಗದಲ್ಲಿ ಸುಮಾರು ನಾಲ್ಕು ಸಾವಿರ ಮಂದಿ ಇಸ್ರಾಯೇಲರನ್ನು ಸಂಹರಿಸಿದರು.


ನೀವು ಶತ್ರುಗಳಿಂದ ಸೋಲನ್ನು ಅನುಭವಿಸುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು.


ನಾನು ನಿಮ್ಮ ಮೇಲೆ ಉಗ್ರಕೋಪಗೊಳ್ಳುವುದರಿಂದ ನೀವು ನಿಮ್ಮ ಶತ್ರುಗಳ ಮುಂದೆ ಸೋತು ಹೋಗುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು; ಯಾರೂ ಬೆನ್ನಟ್ಟಿ ಬರದಿದ್ದರು ನೀವು ಹೆದರಿ ಓಡುವಿರಿ.


ಅವರು ಅಬ್ಷಾಲೋಮನ ಶವವನ್ನು ಆ ಕಾಡಿನಲ್ಲಿದ್ದ ಒಂದು ದೊಡ್ಡ ಗುಂಡಿಯೊಳಗೆ ಹಾಕಿ ಅದರ ಮೇಲೆ ದೊಡ್ಡದಾದ ಕಲ್ಲು ಕುಪ್ಪೆಯನ್ನು ಮಾಡಿದರು. ಇಸ್ರಾಯೇಲ್ಯರಾದರೋ ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.


ಎಫ್ರಾಯೀಮ್ ಕುಲದವರು ಬಿಲ್ಲುಗಳಿಂದ ಸಿದ್ಧರಾಗಿ, ಯುದ್ಧಸಮಯದಲ್ಲಿ ಹಿಂದಿರುಗಿ ಓಡಿಹೋದರು.


ಯೆಹೂದ್ಯರು ಇಸ್ರಾಯೇಲ್ಯರಿಗೆ ಸೋತು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.


ಅಬೀಯನೂ ಅವನ ಜನರೂ ಅವರಲ್ಲಿ ಅನೇಕರನ್ನು ಸಂಹರಿಸಿಬಿಟ್ಟರು. ಇಸ್ರಾಯೇಲಿನ ಭಟರಲ್ಲಿ ಹತರಾಗಿ ಬಿದ್ದವರು ಐದು ಲಕ್ಷ ಮಂದಿ.


ಸೂರ್ಯಸ್ತಮಾನವಾದ ಕೂಡಲೆ “ಪ್ರತಿಯೊಬ್ಬನೂ ತನ್ನ ಪ್ರಾಂತ್ಯಕ್ಕೂ ಪಟ್ಟಣಕ್ಕೂ ಹೋಗಲಿ” ಎಂಬ ಕೂಗು ಇಸ್ರಾಯೇಲ್ ಸೈನ್ಯದಲ್ಲಿ ಹಬ್ಬಿಕೊಂಡಿತು


ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲವೆಂದೂ ತಿಳಿದು ಇಸ್ರಾಯೇಲರೆಲ್ಲರೂ ಅವನಿಗೆ, “ದಾವೀದನಲ್ಲಿ ನಮಗೇನು ಪಾಲು? ಇಷಯನ ಮಗನಲ್ಲಿ ನಮಗೇನು ಬಾಧ್ಯತೆ? ಇಸ್ರಾಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಿರಿ, ದಾವೀದನವರೇ ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ” ಎಂದು ಹೇಳಿ ತಮ್ಮ ತಮ್ಮ ನಿವಾಸಗಳಿಗೆ ಹೋದರು.


ಆಕಸ್ಮಾತ್ತಾಗಿ ಬೆನ್ಯಾಮೀನ ಕುಲದವನೂ, ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ದುಷ್ಟಮನುಷ್ಯನು ಅಲ್ಲಿ ಹೇಗೋ ಬಂದಿದ್ದನು. ಅವನು ಕಹಳೆಯನ್ನು ಊದಿ, “ಇಸ್ರಾಯೇಲರೇ, ದಾವೀದನಲ್ಲಿ ನಮಗೆ ಪಾಲಿಲ್ಲ. ಇಷಯನ ಮಗನಲ್ಲಿ ನಮಗೆ ಸ್ವತ್ತು ಇಲ್ಲ. ಪ್ರತಿಯೊಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ಹೋಗೋಣ” ಎಂದನು.


ಆಗ ಅರಸನು ಎದ್ದು ಬಂದು ಊರಬಾಗಿಲಲ್ಲಿ ಕುಳಿತುಕೊಂಡನು. ಇಗೋ, ಅರಸನು ಬಂದು ಊರಬಾಗಿಲಲ್ಲಿ ಕುಳಿತುಕೊಂಡಿದ್ದಾನೆಂಬ ಸುದ್ದಿಯು ಪ್ರಜೆಗಳಿಗೆ ಮುಟ್ಟಿದಾಗ ಅವರೆಲ್ಲರೂ ಅವನ ಮುಂದೆ ನೆರೆದು ಬಂದರು.


ಇಸ್ರಾಯೇಲರು ದಾವೀದನ ಸೈನಿಕರಿಂದ ಪೂರ್ಣವಾಗಿ ಸೋಲಿಸಲ್ಪಟ್ಟರು. ಆ ದಿನ ಇಪ್ಪತ್ತು ಸಾವಿರ ಜನರು ಹತರಾದರು.


ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಶಾಪಗಳು ನಿಮಗೆ ಪ್ರಾಪ್ತವಾಗುವವು:


“ನಾನು ಮೊದಲು ನನ್ನ ನಾಮವನ್ನು ಸ್ಥಾಪಿಸಿದ ಶೀಲೋವಿನಲ್ಲಿನ ನನ್ನ ಸ್ಥಾನಕ್ಕೆ ನೀವು ಹೋಗಿ ನನ್ನ ಜನರಾದ ಇಸ್ರಾಯೇಲರ ಅಧರ್ಮದ ನಿಮಿತ್ತ ಅದಕ್ಕೆ ತಂದ ಗತಿಯನ್ನು ನೋಡಿರಿ.


ಯೆಹೋವನು ಸಮುವೇಲನಿಗೆ “ನಾನು ಇಸ್ರಾಯೇಲ್ಯರಲ್ಲಿ ಒಂದು ವಿಶೇಷಕಾರ್ಯವನ್ನು ನಡೆಸುವೆನು; ಅದರ ವಿಷಯ ಕೇಳುವವರ ಎರಡು ಕಿವಿಗಳೂ ನಿಮಿರುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು