Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 4:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆ ಮನುಷ್ಯನು ಏಲಿಗೆ, “ನಾನು ರಣರಂಗದಲ್ಲಿದ್ದವನು; ಈ ಹೊತ್ತೇ ಅಲ್ಲಿಂದ ಓಡಿಬಂದೆನು” ಅನ್ನಲು ಏಲಿಯು ಅವನನ್ನು, “ನನ್ನ ಮಗನೇ, ವರ್ತಮಾನವೇನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆ ವ್ಯಕ್ತಿ ಏಲಿಗೆ, “ನಾನು ರಣರಂಗದಲ್ಲಿ ಇದ್ದವನು; ಈಹೊತ್ತೇ ಅಲ್ಲಿಂದ ಓಡಿಬಂದೆ,” ಎನ್ನಲು ಏಲಿ, “ಮಗು, ಏನು ಸುದ್ದಿ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆ ಮನುಷ್ಯನು ಏಲಿಗೆ - ನಾನು ರಣರಂಗದಲ್ಲಿದ್ದವನು; ಈ ಹೊತ್ತೇ ಅಲ್ಲಿಂದ ಓಡಿಬಂದೆನು ಅನ್ನಲು ಏಲಿಯು ಅವನನ್ನು - ನನ್ನ ಮಗನೇ, ವರ್ತಮಾನವೇನು ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆ ಬೆನ್ಯಾಮೀನ್ಯನು ಏಲಿಯ ಬಳಿಗೆ ಹೋಗಿ, “ನಾನು ಈ ದಿನವೇ ರಣರಂಗದಿಂದ ಓಡಿಬಂದೆನು” ಎಂದು ಹೇಳಿದನು. ಏಲಿಯು, “ನನ್ನ ಮಗನೇ ಏನಾಯಿತು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆ ಮನುಷ್ಯನು ಏಲಿಗೆ, “ಯುದ್ಧರಂಗದಿಂದ ಬಂದವನು ನಾನೇ; ನಾನು ಈ ಹೊತ್ತು ಯುದ್ಧರಂಗದಿಂದ ಓಡಿ ಬಂದೆನು,” ಎಂದನು. ಆಗ ಅವನು, “ನನ್ನ ಮಗನೇ, ಅಲ್ಲಿ ನಡೆದ ವರ್ತಮಾನವೇನು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 4:16
4 ತಿಳಿವುಗಳ ಹೋಲಿಕೆ  

ಆಗ ದಾವೀದನು, “ದಯವಿಟ್ಟು ಕಾರ್ಯವೇನಾಯಿತೆಂದು ತಿಳಿಸು” ಅನ್ನಲು ಆ ಮನುಷ್ಯನು, “ಇಸ್ರಾಯೇಲರು ರಣರಂಗದಿಂದ ಓಡಿಹೋದರು. ಅನೇಕರು ಗಾಯಗೊಂಡು ಸತ್ತುಹೋದರು. ಸೌಲನೂ ಅವನ ಮಗನಾದ ಯೋನಾತಾನನೂ ಮರಣಹೊಂದಿದರು” ಎಂದು ತಿಳಿಸಿದನು.


ಯೆಹೋವನು ತಿರುಗಿ, “ಸಮುವೇಲನೇ” ಎಂದು ಕರೆದನು. ಸಮುವೇಲನು ಕೂಡಲೆ ಎದ್ದು ಏಲಿಯ ಬಳಿಗೆ ಹೋಗಿ, “ಇಗೋ, ಬಂದಿದ್ದೇನೆ; ನೀನು ನನ್ನನ್ನು ಕರೆದೆಯಲ್ಲಾ” ಅನ್ನಲು ಅವನು, “ನನ್ನ ಮಗನೇ, ನಾನು ನಿನ್ನನ್ನು ಕರೆಯಲಿಲ್ಲಾ, ಹೋಗಿ ಮಲಗಿಕೋ” ಎಂದನು.


ಆಗ ಯೆಹೋಶುವನು ಆಕಾನನಿಗೆ “ನನ್ನ ಮಗನೇ, ನೀನು ಇಸ್ರಾಯೇಲರ ದೇವರಾದ ಯೆಹೋವನನ್ನು ಘನಪಡಿಸಿ ಆತನಿಗೆ ಸ್ತೋತ್ರ ಸಲ್ಲಿಸು. ನೀನು ಮಾಡಿದ್ದನ್ನು ನನಗೆ ಹೇಳು, ಯಾವುದನ್ನೂ ಮುಚ್ಚಿಡಬೇಡ” ಅಂದನು.


ಅವನು ಏಲಿಗೆ, “ಇಸ್ರಾಯೇಲರು ಫಿಲಿಷ್ಟಿಯರಿಗೆ ಬೆನ್ನುತೋರಿಸಿದರು; ಮಹಾಸಂಹಾರವಾಯಿತು. ನಿನ್ನ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸರು ಸತ್ತರು; ದೇವರ ಮಂಜೂಷವು ಶತ್ರುವಶವಾಯಿತು” ಎಂದು ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು