1 ಸಮುಯೇಲ 4:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅವನು ಏಲಿಗೆ, “ಇಸ್ರಾಯೇಲರು ಫಿಲಿಷ್ಟಿಯರಿಗೆ ಬೆನ್ನುತೋರಿಸಿದರು; ಮಹಾಸಂಹಾರವಾಯಿತು. ನಿನ್ನ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸರು ಸತ್ತರು; ದೇವರ ಮಂಜೂಷವು ಶತ್ರುವಶವಾಯಿತು” ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅವನು ಏಲಿಗೆ, “ಇಸ್ರಯೇಲರು ಫಿಲಿಷ್ಟಿಯರಿಗೆ ಬೆನ್ನುತೋರಿಸಿದರು; ಮಹಾ ಸಂಹಾರವಾಯಿತು. ನಿಮ್ಮ ಇಬ್ಬರು ಮಕ್ಕಳಾದ ಹೊಫ್ನಿ ಹಾಗು ಫೀನೆಹಾಸ ಸತ್ತರು; ದೇವರ ಮಂಜೂಷವು ಶತ್ರುವಶವಾಯಿತು,” ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅವನು ಏಲಿಗೆ - ಇಸ್ರಾಯೇಲ್ಯರು ಫಿಲಿಷ್ಟಿಯರಿಗೆ ಬೆನ್ನು ತೋರಿಸಿದರು; ಮಹಾಸಂಹಾರವಾಯಿತು. ನಿನ್ನ ಇಬ್ಬರು ಮಕ್ಕಳಾದ ಹೊಫ್ನಿ ಫೀನೆಹಾಸರು ಸತ್ತರು; ದೇವರ ಮಂಜೂಷವು ಶತ್ರುವಶವಾಯಿತು ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆ ಬೆನ್ಯಾಮೀನ್ಯನು, “ಇಸ್ರೇಲರು ಫಿಲಿಷ್ಟಿಯರಿಂದ ಸೋತು, ಹಿಮ್ಮೆಟ್ಟಿದರು. ಇಸ್ರೇಲರ ಪಡೆಯು ಅನೇಕ ಸೈನಿಕರನ್ನು ಕಳೆದುಕೊಂಡಿತು. ನಿನ್ನ ಮಕ್ಕಳಿಬ್ಬರೂ ಸತ್ತರು. ಫಿಲಿಷ್ಟಿಯರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡು ಹೋದರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅದಕ್ಕೆ ವರ್ತಮಾನ ತಂದವನು, “ಇಸ್ರಾಯೇಲರು ಫಿಲಿಷ್ಟಿಯರ ಮುಂದೆ ಓಡಿಹೋದರು. ಜನರಲ್ಲಿ ದೊಡ್ಡ ಸಂಹಾರವಾಯಿತು. ನಿನ್ನ ಇಬ್ಬರು ಮಕ್ಕಳಾದ ಹೊಫ್ನಿಯೂ, ಫೀನೆಹಾಸನೂ ಮರಣಹೊಂದಿದರು. ದೇವರ ಮಂಜೂಷವು ಶತ್ರುವಶವಾಯಿತು,” ಎಂದನು. ಅಧ್ಯಾಯವನ್ನು ನೋಡಿ |