Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 4:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನ ಒಡಂಬಡಿಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ ಇಸ್ರಾಯೇಲ್ಯರೆಲ್ಲಾ ಭೂಮಿ ಕಂಪಿಸುವ ಹಾಗೆ ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸರ್ವೇಶ್ವರನ ಒಡಂಬಡಿಕೆಯ ಮಂಜೂಷ ಪಾಳೆಯಕ್ಕೆ ಬಂದಾಗ ಇಸ್ರಯೇಲರೆಲ್ಲರೂ ಭೂಮಿ ಬಿರಿಯುವಷ್ಟು ಗಟ್ಟಿಯಾಗಿ ಜಯಕಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನ ಒಡಂಬಡಿಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ ಇಸ್ರಾಯೇಲ್ಯರೆಲ್ಲರೂ ಭೂವಿುಯು ಪ್ರತಿಧ್ವನಿಕೊಡುವಷ್ಟು ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯು ಪಾಳೆಯಕ್ಕೆ ಬಂದಾಗ ಇಸ್ರೇಲರೆಲ್ಲರು ಆರ್ಭಟಿಸಿದರು. ಅವರ ಆರ್ಭಟವು ನೆಲವನ್ನು ನಡುಗಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ, ಇಸ್ರಾಯೇಲರೆಲ್ಲಾ ಮಹಾ ಆರ್ಭಟವಾಗಿ ಭೂಮಿ ಕಂಪಿಸುವ ಹಾಗೆ ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 4:5
10 ತಿಳಿವುಗಳ ಹೋಲಿಕೆ  

ಅವರು ದೀರ್ಘವಾಗಿ ಊದುವ ಕೊಂಬಿನ ಧ್ವನಿಯು ಕೇಳಿಸುತ್ತಲೇ ನೀವೆಲ್ಲರೂ ಗಟ್ಟಿಯಾಗಿ ಆರ್ಭಟಿಸಿರಿ. ಆಗ ಪಟ್ಟಣದ ಗೋಡೆಯು ತಾನೇ ಬಿದ್ದುಹೋಗುವುದು; ಪ್ರತಿಯೊಬ್ಬನೂ ನೆಟ್ಟಗೆ ಒಳಗೆ ನುಗ್ಗಬಹುದು” ಎಂದು ಹೇಳಿದನು.


ಆಹಾ! ಆ ಪ್ರಮುಖರು ಆಪತ್ತಿನ ದಿನದ ಯೋಚನೆಯನ್ನು ದೂರಕ್ಕೆ ತಳ್ಳುತ್ತಾರೆ ಮತ್ತು ಅನ್ಯಾಯದ ಪೀಠಗಳನ್ನು ಹತ್ತಿರಕ್ಕೆ ತಂದುಕೊಳ್ಳುತ್ತಾರೆ.


‘ಈ ಕಟ್ಟಡಗಳೇ ಯೆಹೋವನ ಆಲಯ, ಯೆಹೋವನ ಆಲಯ, ಯೆಹೋವನ ಆಲಯ’ ಎಂಬ ಸುಳ್ಳು ಮಾತುಗಳ ಮೇಲೆ ಭರವಸವಿಡಬೇಡಿರಿ.


ದುಷ್ಟರ ಉತ್ಸಾಹ ಧ್ವನಿಯು ಅಲ್ಪಕಾಲದ್ದು, ಭ್ರಷ್ಟನ ಉಲ್ಲಾಸವು ಕ್ಷಣಿಕವಾದದ್ದು ಎಂದು ನಿನಗೆ ಗೊತ್ತಿಲ್ಲವೋ?


ಸಂಸೋನನು ಲೆಹೀಯ ಸಮೀಪಕ್ಕೆ ಬರಲು ಫಿಲಿಷ್ಟಿಯರು ಅವನನ್ನು ಕಂಡು ಆರ್ಭಟಿಸಿದರು. ಯೆಹೋವನ ಆತ್ಮವು ಅವನ ಮೇಲೆ ಬಂದದ್ದರಿಂದ ಅವನ ರಟ್ಟೆಗಳಿಗೆ ಸುತ್ತಲೂ ಕಟ್ಟಿದ್ದ ಹಗ್ಗಗಳು ಸುಟ್ಟ ಸೆಣಬಿನ ಹಾಗಾದವು; ಕೈಗೆ ಹಾಕಿದ ಬೇಡಿಗಳು ಕಳಚಿ ಬಿದ್ದವು.


ಕೂಡಲೆ ಜನರ ಆರ್ಭಟವೂ ಕೊಂಬುಗಳ ಧ್ವನಿಯೂ ಉಂಟಾದವು. ಜನರು ಕೊಂಬಿನ ಧ್ವನಿಯನ್ನು ಕೇಳಿ ಗಟ್ಟಿಯಾಗಿ ಆರ್ಭಟಿಸಲು ಪಟ್ಟಣದ ಗೋಡೆಯು ತಾನೇ ಬಿದ್ದುಹೋಯಿತು. ಪ್ರತಿಯೊಬ್ಬನೂ ನೆಟ್ಟಗೆ ಪಟ್ಟಣದಲ್ಲಿ ನುಗ್ಗಿ ಹೋದನು. ಅದು ಅವರಿಗೆ ವಶವಾಯಿತು.


ಗಾಳಿಯನ್ನೂ, ಮೋಸವನ್ನೂ ಹಿಂಬಾಲಿಸುವ ಸುಳ್ಳುಗಾರನೊಬ್ಬನು, “ನಾನು ದ್ರಾಕ್ಷಾರಸ, ಮಧ್ಯಗಳ ವಿಷಯವಾಗಿ ನಿನಗೆ ಪ್ರವಾದನೆ ಮಾಡುವೆನು” ಎಂದು ಹೇಳಿದರೆ, ಈ ಜನರು ಅಂಥವನನ್ನು ಪ್ರವಾದಿಯನ್ನಾಗಿ ಸ್ವೀಕರಿಸಿಕೊಳ್ಳುವರು.


ಫಿಲಿಷ್ಟಿಯರು ಇದನ್ನು ಕೇಳಿ, “ಇಬ್ರಿಯರ ಪಾಳೆಯದಲ್ಲಿ ಇಂಥ ಆರ್ಭಟಕ್ಕೇನು ಕಾರಣ” ಎಂದು ವಿಚಾರಿಸುವಲ್ಲಿ ಯೆಹೋವನ ಮಂಜೂಷವು ಪಾಳೆಯದಲ್ಲಿ ಬಂದದ್ದೇ ಕಾರಣವೆಂದು ತಿಳಿದುಕೊಂಡರು.


ಚಾದೋಕನೂ ಅವನ ವಶದಲ್ಲಿದ್ದ ಎಲ್ಲಾ ಲೇವಿಯರೂ ದೇವರ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬಂದು ಅದನ್ನು ಜನರೆಲ್ಲರೂ ದಾಟಿಹೋಗುವವರೆಗೆ ಕೆಳಗಿಳಿಸಿದರು. ಎಬ್ಯಾತಾರನೂ ಯಜ್ಞವನ್ನು ಅರ್ಪಿಸುತ್ತಿದ್ದನು.


ತರುವಾಯ ಅವರೆಲ್ಲರೂ ಅವನನ್ನು ಹಿಂಬಾಲಿಸಿ ಕೊಳಲೂದುತ್ತಾ, ಬಹುಸಂತೋಷದಿಂದ ಜಯಘೋಷಮಾಡುತ್ತಾ ಹಿಂತಿರುಗಿ ಬಂದರು. ಅವರ ಕೂಗಿನಿಂದ ಭೂಮಿಯು ನಡುಗಿತೋ ಎಂಬಂತೆ ಆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು