Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 4:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಫಿಲಿಷ್ಟಿಯರೇ, ಬಲಗೊಳ್ಳಿರಿ, ಶೂರರಾಗಿರಿ; ನಿಮಗೆ ದಾಸರಾಗಿದ್ದ ಇಬ್ರಿಯರಿಗೆ ನೀವೇ ದಾಸರಾದೀರಿ. ಆದಕಾರಣ ಶೌರ್ಯದಿಂದ ಯುದ್ಧಮಾಡಬೇಕು” ಎಂದು ಹೇಳಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಫಿಲಿಷ್ಟಿಯರೇ, ಧೈರ್ಯಗೊಳ್ಳಿ; ಶೂರರಾಗಿರಿ! ಇಲ್ಲವಾದರೆ ನಿಮಗೆ ಗುಲಾಮರಾಗಿದ್ದ ಹಿಬ್ರಿಯರಿಗೆ ನೀವೇ ಗುಲಾಮರಾದೀರಿ; ಆದಕಾರಣ ಶೌರ್ಯದಿಂದ ಯುದ್ಧಮಾಡಿ!” ಎಂದು ಹೇಳಿಕೊಂಡು ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಫಿಲಿಷ್ಟಿಯರೇ, ಬಲಗೊಳ್ಳಿರಿ, ಶೂರರಾಗಿರ್ರಿ; ನಿಮಗೆ ದಾಸರಾಗಿದ್ದ ಇಬ್ರಿಯರಿಗೆ ನೀವೇ ದಾಸರಾದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಫಿಲಿಷ್ಟಿಯರೇ, ಧೈರ್ಯದಿಂದಿರಿ! ಶೂರರಂತೆ ಹೋರಾಡಿ! ಇಬ್ರಿಯರು ಪುರಾತನ ಕಾಲದಲ್ಲಿ ನಮಗೆ ಗುಲಾಮರಾಗಿದ್ದರು. ಆದಕಾರಣ ಶೂರರಂತೆ ಹೋರಾಡಿರಿ, ಇಲ್ಲವಾದರೆ ನೀವು ಅವರಿಗೆ ಗುಲಾಮರಾಗುವಿರಿ!” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಫಿಲಿಷ್ಟಿಯರೇ, ನೀವು ಬಲಗೊಂಡು ಶೂರರಾಗಿರಿ. ಹಿಬ್ರಿಯರು ನಿಮಗೆ ಗುಲಾಮರಾಗಿ ಮಾಡಿದ ಪ್ರಕಾರ ನೀವು ಅವರಿಗೆ ಗುಲಾಮರಾಗದ ಹಾಗೆ ಶೂರರಾಗಿ ಇದ್ದು, ಯುದ್ಧಮಾಡಿರೆಂದು ಹೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 4:9
10 ತಿಳಿವುಗಳ ಹೋಲಿಕೆ  

ಎಚ್ಚರವಾಗಿರಿ, ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ. ಧೈರ್ಯವಂತರಾಗಿರಿ, ಬಲಗೊಳ್ಳಿರಿ.


ಇಸ್ರಾಯೇಲರು ತಿರುಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದುದರಿಂದ ಆತನು ಅವರನ್ನು ನಲ್ವತ್ತು ವರ್ಷಗಳ ಕಾಲ ಫಿಲಿಷ್ಟಿಯರ ಕೈಗೆ ಒಪ್ಪಿಸಿದನು.


ಧೈರ್ಯದಿಂದಿರು, ನಮ್ಮ ಜನರಿಗೋಸ್ಕರವೂ ಮತ್ತು ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ನಮ್ಮ ಶೌರ್ಯವನ್ನು, ಪೌರುಷವನ್ನು ತೋರಿಸೋಣ. ಯೆಹೋವನು ತನ್ನ ಚಿತ್ತದಂತೆ ಮಾಡಲಿ” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು.


ಸೂರೆಯಾಗದಿದ್ದರೂ ಸೂರೆಮಾಡಿದಿ! ಬಾಧೆಪಡದಿದ್ದರೂ ಬಾಧಿಸಿದಿ! ನಿನ್ನ ಗತಿಯನ್ನು ಏನು ಹೇಳಲಿ; ನೀನು ಸೂರೆಮಾಡಿ ಬಿಟ್ಟ ಮೇಲೆ ನೀನೂ ಸೂರೆಯಾಗುವಿ. ಬಾಧಿಸಿ ಬಿಟ್ಟ ಮೇಲೆ ನಿನ್ನನ್ನೂ ಬಾಧಿಸುವರು.


ಆದುದರಿಂದ ಆತನು ಇಸ್ರಾಯೇಲರ ಮೇಲೆ ಕೋಪಗೊಂಡು ಅವರನ್ನು ಫಿಲಿಷ್ಟಿಯರ ಮತ್ತು ಅಮ್ಮೋನಿಯರ ಕೈಗೆ ಒಪ್ಪಿಸಿಬಿಟ್ಟನು.


ಜನಾಂಗದವರು ಅವರನ್ನು ಕರೆದು ತಂದು ಸ್ವಸ್ಥಳಕ್ಕೆ ಸೇರಿಸುವರು; ಆಗ ಇಸ್ರಾಯೇಲಿನ ಮನೆತನದವರು ಯೆಹೋವನ ದೇಶದಲ್ಲಿ ಆ ಜನಾಂಗದವರನ್ನು ಗಂಡು ಹೆಣ್ಣಾಳುಗಳನ್ನಾಗಿ, ದಾಸದಾಸಿಯರನ್ನಾಗಿ ಇಟ್ಟುಕೊಳ್ಳುವರು; ಯಾರಿಗೆ ಸೆರೆಯಾಗಿದ್ದರೋ ಅವರನ್ನು ಸೆರೆಹಿಡಿಯುವರು; ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರ ನಡೆಸುವರು.


ಅಯ್ಯೋ! ಪರಾಕ್ರಮವುಳ್ಳ ಈ ದೇವರ ಕೈಯಿಂದ ನಮ್ಮನ್ನು ಬಿಡಿಸುವವರು ಯಾರು? ಐಗುಪ್ತ್ಯರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ನಾಶಮಾಡಿಬಿಟ್ಟ ದೇವರುಗಳು ಇವರೇ ಅಲ್ಲವೋ!


ಇದಲ್ಲದೆ ಮೊದಲಿನಿಂದಲೇ ಫಿಲಿಷ್ಟಿಯರನ್ನು ಸೇರಿಕೊಂಡು ಅವರೊಡನೆ ಪಾಳೆಯದಲ್ಲಿದ್ದ ಇಬ್ರಿಯರು, ಸೌಲ ಮತ್ತು ಯೋನಾತಾನರ ಜೊತೆಯಲ್ಲಿ ಬಂದ ಇಸ್ರಾಯೇಲರನ್ನು ಕೂಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು