1 ಸಮುಯೇಲ 5:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆದ್ದರಿಂದ ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ಅದು ಅಲ್ಲಿಗೆ ಬಂದಾಗ ಆ ಊರಿನವರು, “ನೋಡಿರಿ, ನಮ್ಮನ್ನೂ, ನಮಗೆ ಸೇರಿದವರನ್ನೂ ಕೊಲ್ಲುವುದಕ್ಕೋಸ್ಕರ ಇಸ್ರಾಯೇಲಿನ ದೇವರ ಮಂಜೂಷವನ್ನು ಇಲ್ಲಿಗೆ ಕಳುಹಿಸಿದ್ದಾರೆ” ಎಂದು ಕೂಗಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆದುದರಿಂದ ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ಅದು ಅಲ್ಲಿಗೆ ಬಂದಾಗ ಆ ಊರಿನವರು, “ನೋಡಿ, ನಮ್ಮನ್ನೂ ನಮಗೆ ಸೇರಿದವರನ್ನೂ ಕೊಲ್ಲುವುದಕ್ಕಾಗಿಯೇ ಇಸ್ರಯೇಲ್ ದೇವರ ಮಂಜೂಷವನ್ನು ಇಲ್ಲಿಗೆ ಕಳುಹಿಸಿದ್ದಾರೆ,” ಎಂದು ಕೂಗಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆದದರಿಂದ ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ಅದು ಅಲ್ಲಿಗೆ ಬಂದಾಗ ಆ ಊರಿನವರು - ನೋಡಿರಿ, ನಮ್ಮನ್ನೂ ನಮಗೆ ಸೇರಿದವರನ್ನೂ ಕೊಲ್ಲುವದಕ್ಕೋಸ್ಕರ ಇಸ್ರಾಯೇಲ್‍ದೇವರ ಮಂಜೂಷವನ್ನು ಇಲ್ಲಿಗೆ ಕಳುಹಿಸಿದ್ದಾರೆಂದು ಕೂಗಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆದ್ದರಿಂದ ಫಿಲಿಷ್ಟಿಯರು ದೇವರ ಪವಿತ್ರ ಪೆಟ್ಟಿಗೆಯನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಪವಿತ್ರ ಪೆಟ್ಟಿಗೆಯು ಎಕ್ರೋನಿಗೆ ಬಂದಾಗ, ಅಲ್ಲಿನ ಜನರು, “ಇಸ್ರೇಲರ ದೇವರನ್ನು ನಮ್ಮ ನಗರವಾದ ಎಕ್ರೋನಿಗೆ ನೀವೇಕೆ ತರುತ್ತಿರುವಿರಿ? ನಮ್ಮನ್ನೂ ನಮ್ಮ ಜನರನ್ನೂ ನೀವು ಕೊಲ್ಲಬೇಕೆಂದಿರುವಿರಾ?” ಎಂದು ಆಕ್ಷೇಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಮಂಜೂಷವು ಎಕ್ರೋನಿಗೆ ಬಂದಾಗ, ಎಕ್ರೋನ್ಯರು, “ನಮ್ಮನ್ನೂ, ನಮ್ಮ ಜನರನ್ನೂ ಕೊಂದುಹಾಕಬೇಕೆಂದು ಇಸ್ರಾಯೇಲ್ ದೇವರ ಮಂಜೂಷವನ್ನು ನಮ್ಮ ಬಳಿಗೆ ತಂದರು,” ಎಂದು ಕೂಗಿ ಹೇಳಿದರು. ಅಧ್ಯಾಯವನ್ನು ನೋಡಿ |