Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 5:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮಾರನೆಯ ದಿನ ಬೆಳಿಗ್ಗೆ ನೋಡುವಾಗ ದಾಗೋನನ ತಲೆಯೂ, ಕೈಗಳೂ ಕಡಿಯಲ್ಪಟ್ಟು ಹೊಸ್ತಿಲಿನ ಮೇಲೆ ಬಿದ್ದಿದ್ದವು; ಮುಂಡ ಮಾತ್ರ ಯೆಹೋವನ ಮಂಜೂಷದ ಮುಂದೆ ಬಿದ್ದಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮಾರನೆಯ ದಿನ ಬೆಳಿಗ್ಗೆ ನೋಡುವಾಗ ದಾಗೋನನ ತಲೆ ಮತ್ತು ಕೈಗಳು ಮುರಿದು ಹೊಸ್ತಿಲಿನ ಮೇಲೆ ಬಿದ್ದಿದ್ದವು; ಮುಂಡ ಮಾತ್ರ ಸರ್ವೇಶ್ವರನ ಮಂಜೂಷದ ಮುಂದೆ ಬಿದ್ದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮುಂದಿನ ದಿನ ಬೆಳಿಗ್ಗೆ ನೋಡುವಾಗ ದಾಗೋನನ ತಲೆಯೂ ಕೈಗಳೂ ಕಡಿಯಲ್ಪಟ್ಟು ಹೊಸ್ತಲಿನ ಮೇಲೆ ಬಿದ್ದಿದ್ದವು; ಮುಂಡ ಮಾತ್ರ ಯೆಹೋವನ ಮಂಜೂಷದ ಮುಂದೆ ಬಿದ್ದಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ಮರುದಿನ ಬೆಳಿಗ್ಗೆ ಅಷ್ಡೋದಿನ ಜನರು ಎದ್ದಾಗ ದಾಗೋನ್ ವಿಗ್ರಹವು ನೆಲದ ಮೇಲೆ ಯೆಹೋವನ ಪವಿತ್ರ ಪೆಟ್ಟಿಗೆಯ ಮುಂದೆ ಬೋರಲಬಿದ್ದಿತ್ತು. ದಾಗೋನಿನ ತಲೆಯು ಮತ್ತು ಕೈಗಳು ಮುರಿದು ಹೊಸ್ತಿಲಿನ ಮೇಲೆ ಬಿದ್ದಿದ್ದವು; ದೇಹವು ಏಕಶಿಲೆಯಾಗಿ ಬಿದ್ದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಅವರು ದಾಗೋನನನ್ನು ತೆಗೆದು, ಅದನ್ನು ಅದರ ಸ್ಥಳದಲ್ಲಿ ತಿರುಗಿ ಇಟ್ಟರು. ಅವರು ಮಾರನೆಯ ದಿವಸ ಬೆಳಿಗ್ಗೆ ಎದ್ದಾಗ, ದಾಗೋನ್ ಯೆಹೋವ ದೇವರ ಮಂಜೂಷದ ಮುಂದೆ ಬೋರಲು ಬಿದ್ದಿತ್ತು. ದಾಗೋನನ ತಲೆಯೂ ಅದರ ಎರಡು ಕೈಗಳೂ ಕತ್ತರಿಸಲಾಗಿ ಹೊಸ್ತಿಲ ಮೇಲೆ ಬಿದ್ದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 5:4
11 ತಿಳಿವುಗಳ ಹೋಲಿಕೆ  

ಅದರ ಎರಕದ ಬೊಂಬೆಗಳನ್ನೆಲ್ಲಾ ಪುಡಿಪುಡಿ ಮಾಡುವೆನು. ಅದರ ಸಮಸ್ತ ಸಂಪಾದನೆಯು ಸುಟ್ಟುಹೋಗುವುದು. ಅದರ ಸಕಲ ವಿಗ್ರಹಗಳನ್ನು ಹಾಳುಮಾಡುವೆನು. ಅದು ವೇಶ್ಯಾವಾಟಿಕೆಯಿಂದ ಸಂಪಾದನೆಯಾಗಿ ಕೂಡಿಸಿಟ್ಟುಕೊಂಡವುಗಳು ಹಾಗೂ ವೇಶ್ಯಾವಾಟಿಕೆಯ ಸಂಪಾದನೆಯಾಗಿಯೇ ಪರರ ಪಾಲಾಗುವವು.


“ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಡದೆ ಹೀಗೆ ಸಾರಿರಿ, ‘ಬಾಬೆಲ್ ಶತ್ರುವಶವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.


ನೀವು ಅವುಗಳಿಗೆ, “ಭೂಮ್ಯಾಕಾಶಗಳನ್ನು ಸೃಷ್ಟಿಸದಿರುವ ದೇವರುಗಳು ಭೂಮಿಯ ಮೇಲಿನಿಂದ, ಆಕಾಶದ ಕೆಳಗಿನಿಂದ, ಅಳಿದುಹೋಗುವವು” ಎಂದು ಹೇಳಿರಿ.


ಅವರ ದೇವರುಗಳನ್ನೂ, ಎರಕದ ಬೊಂಬೆಗಳನ್ನೂ, ಒಳ್ಳೊಳ್ಳೆ ಬೆಳ್ಳಿಬಂಗಾರದ ಪಾತ್ರೆಗಳನ್ನೂ, ಸೂರೆ ಮಾಡಿಕೊಂಡು ಐಗುಪ್ತಕ್ಕೆ ಬಂದು, ಕೆಲವು ವರ್ಷಗಳ ತನಕ ಉತ್ತರ ದಿಕ್ಕಿನ ರಾಜನ ತಂಟೆಗೆ ಹೋಗುವುದಿಲ್ಲ.


ಹೀಗಿರಲು ಯಾಕೋಬ್ಯರು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿ ಪುಡಿ ಮಾಡಿ, ಅಶೇರವೆಂಬ ವಿಗ್ರಹಸ್ತಂಭಗಳನ್ನೂ, ಸೂರ್ಯಸ್ತಂಭಗಳನ್ನೂ ಪ್ರತಿಷ್ಠಿಸದೆ ನಾಶಮಾಡಿ ಅದೇ ಅವರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗುವಂತೆ ಮಾಡಿದನು ಮತ್ತು ಅವರ ಪಾಪ ಪರಿಹಾರಕ್ಕೆ ಗುರುತಾದ ಪೂರ್ಣಫಲವೂ ಇದಾಗಿದೆ.


ನೀವು ನಿಮ್ಮ ದೇಶನಿವಾಸಿಗಳ ವಿನಾಶಕ್ಕೆ ಕಾರಣವಾಗಿರುವ ಗಡ್ಡೆ ಮತ್ತು ಇಲಿ ಇವುಗಳ ಸ್ವರೂಪಗಳನ್ನು ಚಿನ್ನದಿಂದ ಮಾಡಿಸಿ, ಇಸ್ರಾಯೇಲಿನ ದೇವರಿಗೆ ಅದನ್ನು ಅರ್ಪಿಸಿ ಮಹಿಮೆಯನ್ನು ಸಲ್ಲಿಸಿದರೆ, ಆತನ ಶಿಕ್ಷಾಹಸ್ತವು ನಿಮ್ಮನ್ನೂ, ನಿಮ್ಮ ದೇವತೆಗಳನ್ನೂ, ಪ್ರಾಂತ್ಯಗಳನ್ನೂ ಬಿಟ್ಟುಹೋದೀತು.


(ಇಂಥದನ್ನು ದೇವರಿಗೆ) ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳಲಾರದ ಬಡವನು, ಹುಳಿತು ಹೋಗದ ಮರವನ್ನು ಹುಡುಕಿ ಚಲಿಸದ ವಿಗ್ರಹವನ್ನು ಮಾಡಿಸಲು ಶಿಲ್ಪಿಯನ್ನು ವಿಚಾರಿಸಿಕೊಳ್ಳುವನು.


ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು. ಅವನು ಎರಕ ಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.


ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ; ದಂಡನೆಯಾಗುವಾಗ ಅಳಿದುಹೋಗುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು