Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 5:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನ ಹಸ್ತವು ಅಷ್ಡೋದಿನವರಿಗೆ ಬಾಧಕವಾಗಿತ್ತು; ಆತನು ಆ ನಗರದಲ್ಲಿಯೂ, ಅದರ ಗ್ರಾಮಗಳಲ್ಲಿಯೂ ಗಡ್ಡೆ ರೋಗವನ್ನು ಬರಮಾಡಿ ಅವರನ್ನು ನಾಶಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸರ್ವೇಶ್ವರನ ಹಸ್ತ ಅಷ್ಡೋದಿನವರಿಗೆ ಬಾಧಕವಾಗಿತ್ತು. ಸರ್ವೇಶ್ವರ ಗಡ್ಡೆರೋಗವನ್ನು ಬರಮಾಡಿ ಅವರ ನಗರವನ್ನೂ ಅದರ ಗ್ರಾಮಗಳನ್ನೂ ಹಾಳುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನ ಹಸ್ತವು ಅಷ್ಡೋದಿನವರಿಗೆ ಬಾಧಕವಾಗಿತ್ತು; ಆತನು ಆ ನಗರದಲ್ಲಿಯೂ ಅದರ ಗ್ರಾಮಗಳಲ್ಲಿಯೂ ಗಡ್ಡೆರೋಗವನ್ನು ಬರಮಾಡಿ ಅವುಗಳನ್ನು ಹಾಳುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಷ್ಡೋದಿನ ಮತ್ತು ಅವರ ನೆರೆಹೊರೆಯ ಜನರ ಜೀವನವನ್ನು ಯೆಹೋವನು ಕಠಿಣಗೊಳಿಸಿದನು. ಯೆಹೋವನು ಅವರಿಗೆ ಹೆಚ್ಚು ತೊಂದರೆ ಕೊಟ್ಟನು. ಆತನು ಅವರಿಗೆ ಗಡ್ಡೆರೋಗವನ್ನು ಬರಮಾಡಿದನು. ಅಲ್ಲದೆ ಯೆಹೋವನು ಅವರ ಬಳಿಗೆ ಇಲಿಗಳನ್ನು ಕಳುಹಿಸಿದನು. ಆ ಇಲಿಗಳು ಅವರ ಹಡಗುಗಳಲ್ಲೆಲ್ಲಾ ಮತ್ತು ಭೂಮಿಯಲ್ಲೆಲ್ಲಾ ಹರಡಿಕೊಂಡವು. ನಗರದ ಜನರು ಬಹು ಭಯಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರ ಕೈ ಅಷ್ಡೋದಿನವರ ಮೇಲೆ ಮಹಾ ಭಾರವಾಗಿತ್ತು. ಅವರನ್ನು ನಾಶಮಾಡಿ, ಅಷ್ಡೋದನ್ನೂ, ಅದರ ಮೇರೆಗಳನ್ನೂ ಗಡ್ಡೆರೋಗದಿಂದಲೂ ಬಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 5:6
13 ತಿಳಿವುಗಳ ಹೋಲಿಕೆ  

ದೇವರ ಹಸ್ತವು ಅವರಿಗೂ ಬಾಧಕವಾಗಿದ್ದುದರಿಂದ ಅವರಿಗೆ ಮರಣಭಯವುಂಟಾಯಿತು. ಅವರು ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ ಅವರಿಗೆ, “ಇಸ್ರಾಯೇಲಿನ ದೇವರ ಮಂಜೂಷವನ್ನು ಹಾಗೆಯೇ ಅದರ ಸ್ಥಳಕ್ಕೆ ಕಳುಹಿಸಿಬಿಡಿರಿ” ಅಂದರು.


ಇಗೋ, ಕರ್ತನು ನಿನಗೆ ವಿರುದ್ಧವಾಗಿ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ನೋಡದೆ ಇರುವಿ” ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಕಣ್ಣು ಮೊಬ್ಬಾಗಿ ಕತ್ತಲೆ ಕವಿಯಿತು; ಅವನು ಕೈಹಿಡಿದು ಆಧಾರ ಕೊಡುವವರನ್ನು ಹುಡುಕುತ್ತಾ ತಿರುಗಾಡಿದನು.


ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು; ನನ್ನ ಶರೀರದ ಸಾರವೆಲ್ಲಾ ಬೇಸಿಗೆಯ ನೀರಿನಂತೆ ಬತ್ತಿಹೋಯಿತು. ಸೆಲಾ


ಐಗುಪ್ತ್ಯರ ಹುಣ್ಣು, ಬಾವು, ತುರಿಕಜ್ಜಿ ಮುಂತಾದ ವಾಸಿಯಾಗದ ರೋಗಗಳಿಂದ ಯೆಹೋವನು ನಿಮ್ಮನ್ನು ಬಾಧಿಸುವನು.


ಯೆಹೋವನು ಅಡವಿಯಲ್ಲಿರುವ ನಿನ್ನ ಎಲ್ಲಾ ಪಶುಗಳಿಗೂ, ಕುದುರೆ, ಕತ್ತೆ, ಒಂಟೆ, ದನ, ಕುರಿ, ಆಡು ಇವೆಲ್ಲವುಗಳಿಗೂ ವಿರೋಧವಾಗಿ ತನ್ನ ಕೈಯನ್ನು ಎತ್ತಿ ಘೋರವ್ಯಾಧಿಯನ್ನು ಉಂಟುಮಾಡುವನೆಂದು ತಿಳಿದುಕೋ.


ತನ್ನ ಶತ್ರುಗಳನ್ನು ಸದೆಬಡಿದು, ನಿತ್ಯನಿಂದೆಗೆ ಅವರನ್ನು ಗುರಿಮಾಡಿದನು.


ಅಷ್ಡೋದಿನ ಜನರು ಅದನ್ನು ನೋಡಿ, “ಇಸ್ರಾಯೇಲಿನ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು; ಏಕೆಂದರೆ ಆತನ ಹಸ್ತವು ನಮಗೂ, ನಮ್ಮ ದೇವರಾದ ದಾಗೋನನಿಗೂ ಬಾಧಕವಾಗಿದೆ” ಎಂದು ಹೇಳಿ


ಆತನು ಅನ್ಯಾಯಗಾರರಿಗೆ ವಿಪತ್ತನ್ನೂ, ಕೆಡುಕರಿಗೆ ಉಪದ್ರವವನ್ನೂ ಕೊಡುತ್ತಾನಲ್ಲವೆ?


ಮಂಜೂಷವು ಅಲ್ಲಿ ಹೋದ ಮೇಲೆ ಯೆಹೋವನ ಹಸ್ತವು ಆ ಊರಿನವರಿಗೂ ಬಾಧಕವಾದುದರಿಂದ ಅಲ್ಲಿ ದೊಡ್ಡ ಗದ್ದಲವಾಯಿತು. ಯೆಹೋವನು ಊರಿನ ಚಿಕ್ಕವರಲ್ಲಿಯೂ, ದೊಡ್ಡವರಲ್ಲಿಯೂ ಗಡ್ಡೆಗಳನ್ನು ಬರಮಾಡಿದನು.


ಯೆಹೋವನು ತನ್ನನ್ನು ಪ್ರೀತಿಸುವವರೆಲ್ಲರನ್ನು ಕಾಪಾಡುತ್ತಾನೆ, ಆದರೆ ಎಲ್ಲಾ ದುಷ್ಟರನ್ನು ಸಂಹರಿಸುತ್ತಾನೆ.


ಯೆಹೋವನು ದೀನರಿಗೆ ಆಧಾರವಾಗಿದ್ದಾನೆ, ದುಷ್ಟರನ್ನು ನೆಲಕ್ಕೆ ಹಾಕಿ ತುಳಿದುಬಿಡುತ್ತಾನೆ.


ಮುಂದೆ ಬರುವ ಕ್ಷಾಮವು ಅತ್ಯಂತ ಘೋರವಾಗಿರುವುದರಿಂದ ಮೊದಲಿದ್ದ ಸಮೃದ್ಧಿಯ ಗುರುತೇ ಕಾಣಿಸದೆ ಹೋಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು