1 ಸಮುಯೇಲ 5:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ, “ಇಸ್ರಾಯೇಲಿನ ದೇವರ ಮಂಜೂಷವನ್ನು ಏನು ಮಾಡೋಣ?” ಎಂದು ಕೇಳಲು ಅವರು, “ಅದನ್ನು ಗತ್ ಊರಿಗೆ ಕಳುಹಿಸಿ ಕೊಡಬೇಕೆಂದು ನಿರ್ಣಯಿಸಿದರು.” ಅವರು ಹಾಗೆಯೇ ಇಸ್ರಾಯೇಲಿನ ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಫಿಲಿಷ್ಟಿಯದ ರಾಜರೆಲ್ಲರನ್ನು ಕೂಡಿಸಿ, “ಇಸ್ರಯೇಲ್ ದೇವರ ಮಂಜೂಷವನ್ನು ಏನು ಮಾಡೋಣ?” ಎಂದು ವಿಚಾರಿಸಿದರು. ಅವರು ಅದನ್ನು ಗತ್ ಊರಿಗೆ ಕಳುಹಿಸಬೇಕೆಂದು ನಿರ್ಣಯಿಸಿದರು. ಹಾಗೆಯೇ ಇಸ್ರಯೇಲ್ ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ - ಇಸ್ರಾಯೇಲ್‍ದೇವರ ಮಂಜೂಷವನ್ನು ಏನು ಮಾಡೋಣ ಎಂದು ಕೇಳಲು ಅವರು - ಅದನ್ನು ಗತ್ ಊರಿಗೆ ಕಳುಹಿಸಬೇಕೆಂದು ನಿರ್ಣಯಿಸಿದರು. ಅವರು ಹಾಗೆಯೇ ಇಸ್ರಾಯೇಲ್‍ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅಷ್ಡೋದಿನ ಜನರು ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳನ್ನು ಒಟ್ಟಿಗೆ ಸೇರಿಸಿ “ಇಸ್ರೇಲರ ಯೆಹೋವನ ಪವಿತ್ರ ಪೆಟ್ಟಿಗೆಯನ್ನು ನಾವು ಏನು ಮಾಡೋಣ?” ಎಂದು ಕೇಳಿದರು. ಅಧಿಪತಿಗಳು, “ಇಸ್ರೇಲರ ಪವಿತ್ರ ಪೆಟ್ಟಿಗೆಯನ್ನು ‘ಗತ್’ ನಗರಕ್ಕೆ ಕಳುಹಿಸಿ” ಎಂದು ಹೇಳಿದರು. ಅಂತೆಯೇ, ಅವರು ಅದನ್ನು ಗತ್ ನಗರಕ್ಕೆ ಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ತಮ್ಮ ಬಳಿಗೆ ಕರೆಯಕಳುಹಿಸಿ ಅವರಿಗೆ, “ಇಸ್ರಾಯೇಲ್ ದೇವರ ಮಂಜೂಷವನ್ನು ಏನು ಮಾಡೋಣ?” ಎಂದರು. ಅದಕ್ಕವರು, “ಇಸ್ರಾಯೇಲ್ ದೇವರ ಮಂಜೂಷವು ಗತ್ ಊರಿಗೆ ಕಳುಹಿಸಬೇಕು,” ಎಂದರು. ಅವರು ಇಸ್ರಾಯೇಲ್ ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು. ಅಧ್ಯಾಯವನ್ನು ನೋಡಿ |