1 ಸಮುಯೇಲ 5:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಮಂಜೂಷವು ಅಲ್ಲಿ ಹೋದ ಮೇಲೆ ಯೆಹೋವನ ಹಸ್ತವು ಆ ಊರಿನವರಿಗೂ ಬಾಧಕವಾದುದರಿಂದ ಅಲ್ಲಿ ದೊಡ್ಡ ಗದ್ದಲವಾಯಿತು. ಯೆಹೋವನು ಊರಿನ ಚಿಕ್ಕವರಲ್ಲಿಯೂ, ದೊಡ್ಡವರಲ್ಲಿಯೂ ಗಡ್ಡೆಗಳನ್ನು ಬರಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಮಂಜೂಷವು ಅಲ್ಲಿ ಹೋದ ಮೇಲೆ ಸರ್ವೇಶ್ವರನ ಹಸ್ತ ಆ ಊರಿನವರಿಗೂ ಬಾಧಕವಾದುದರಿಂದ ಅಲ್ಲಿ ದೊಡ್ಡ ಗದ್ದಲ ಎದ್ದಿತು. ಸರ್ವೇಶ್ವರ ಆ ಊರಿನ ಚಿಕ್ಕವರಲ್ಲೂ ದೊಡ್ಡವರಲ್ಲೂ ಗಡ್ಡೆಗಳನ್ನು ಬರಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಮಂಜೂಷವು ಅಲ್ಲಿ ಹೋದ ಮೇಲೆ ಯೆಹೋವನ ಹಸ್ತವು ಆ ಊರಿನವರಿಗೂ ಬಾಧಕವಾದದರಿಂದ ಅಲ್ಲಿ ದೊಡ್ಡ ಗದ್ದಲವಾಯಿತು. ಯೆಹೋವನು ಊರಿನ ಚಿಕ್ಕವರಲ್ಲಿಯೂ ದೊಡ್ಡವರಲ್ಲಿಯೂ ಗಡ್ಡೆಗಳನ್ನು ಬರಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆದರೆ ಫಿಲಿಷ್ಟಿಯರು ದೇವರ ಪವಿತ್ರ ಪೆಟ್ಟಿಗೆಯನ್ನು “ಗತ್”ಗೆ ಕಳುಹಿಸಿದ ನಂತರ ಯೆಹೋವನು “ಗತ್” ನಗರವನ್ನು ದಂಡಿಸಿದನು. ಅಲ್ಲಿಯ ಜನರು ಬಹಳ ಭಯಗೊಂಡರು. ಚಿಕ್ಕವರು, ದೊಡ್ಡವರು ಎನ್ನದೆ ಎಲ್ಲರಿಗೂ ದೇವರು ತೊಂದರೆ ಮಾಡಿದನು. ಗತ್ ಜನರಿಗೂ ದೇವರು ಗಡ್ಡೆರೋಗವನ್ನು ಬರಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆದರೆ ಅವರು ಅದನ್ನು ತಂದ ತರುವಾಯ, ಯೆಹೋವ ದೇವರ ಕೈ ಆ ಪಟ್ಟಣದ ಮೇಲೆ ಬಂದು ಮಹಾ ನಾಶಮಾಡಿತು. ಇದಲ್ಲದೆ ಯೆಹೋವ ದೇವರು ಚಿಕ್ಕವರಿಂದ ಹಿರಿಯರವರೆಗೂ ಆ ಪಟ್ಟಣದ ಮನುಷ್ಯರನ್ನು ಹೊಡೆದರು. ಅವರಿಗೆ ಗಡ್ಡೆರೋಗ ಬಂದಿತು. ಅಧ್ಯಾಯವನ್ನು ನೋಡಿ |