Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 6:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನ ಮಂಜೂಷವನ್ನೂ, ಚಿನ್ನದ ಇಲಿಗಳೂ, ಗಡ್ಡೆಗಳೂ ಇದ್ದ ಚಿಕ್ಕ ಪೆಟ್ಟಿಗೆಯನ್ನೂ ಬಂಡಿಯ ಮೇಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರನ ಮಂಜೂಷವನ್ನು ಮತ್ತು ಚಿನ್ನದ ಇಲಿಗಳೂ ಗಡ್ಡೆಗಳೂ ಇದ್ದ ಚಿಕ್ಕಪೆಟ್ಟಿಗೆಯನ್ನು ಬಂಡಿಯಲ್ಲಿ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನ ಮಂಜೂಷವನ್ನೂ ಚಿನ್ನದ ಇಲಿಗಳೂ ಗಡ್ಡೆಗಳೂ ಉಳ್ಳ ಚಿಕ್ಕ ಪೆಟ್ಟಿಗೆಯನ್ನೂ ಬಂಡಿಯ ಮೇಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಮೇಲೆ ಫಿಲಿಷ್ಟಿಯರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಬಂಡಿಯ ಮೇಲಿಟ್ಟರು. ಅಲ್ಲದೆ ಚಿನ್ನದ ಗಡ್ಡೆಗಳನ್ನೂ ಇಲಿಗಳನ್ನೂ ಚೀಲದೊಳಗೆ ಹಾಕಿ ಬಂಡಿಯ ಮೇಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರ ಮಂಜೂಷವನ್ನೂ, ಬಂಗಾರದ ಇಲಿಗಳನ್ನೂ, ತಮ್ಮ ಗಡ್ಡೆರೋಗದ ರೂಪಗಳನ್ನೂ ಇಟ್ಟಿರುವ ಚಿಕ್ಕ ಪೆಟ್ಟಿಗೆಯನ್ನೂ ಆ ಬಂಡಿಯ ಮೇಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 6:11
7 ತಿಳಿವುಗಳ ಹೋಲಿಕೆ  

ಅವರು ದೇವರ ಮಂಜೂಷವನ್ನು ಅಬೀನಾದಾಬನ ಮನೆಯಿಂದ ಹೊರಗೆ ತಂದು, ಒಂದು ಹೊಸ ಬಂಡಿಯ ಮೇಲೆ ಇಟ್ಟರು. ಉಜ್ಜನೂ ಮತ್ತು ಅಹಿಯೋವನೂ ಬಂಡಿಯನ್ನು ಓಡಿಸಿದರು.


ಅವರು ದೇವರ ಮಂಜೂಷವನ್ನು ಗುಡ್ಡದ ಮೇಲಿರುವ ಅಬೀನಾದಾಬನ ಮನೆಯಿಂದ ಹೊರಗೆ ತಂದು, ಅದನ್ನು ಒಂದು ಹೊಸ ಬಂಡಿಯ ಮೇಲೆ ಏರಿಸಿದರು. ಅಬೀನಾದಾಬನ ಮಕ್ಕಳಾದ ಉಜ್ಜನೂ ಮತ್ತು ಅಹಿಯೋವನೂ ಬಂಡಿಯನ್ನು ಮಾರ್ಗ ತೋರಿಸುತ್ತಾ ಮುನ್ನಡೆಸಿದರು.


ಐಗುಪ್ತ್ಯರ ಹುಣ್ಣು, ಬಾವು, ತುರಿಕಜ್ಜಿ ಮುಂತಾದ ವಾಸಿಯಾಗದ ರೋಗಗಳಿಂದ ಯೆಹೋವನು ನಿಮ್ಮನ್ನು ಬಾಧಿಸುವನು.


ಜನರು, “ನಾವು ಪ್ರಾಯಶ್ಚಿತ್ತಾರ್ಥವಾಗಿ ಏನು ಕಳುಹಿಸಬೇಕು?” ಎಂದು ಕೇಳಲು ಅವರು, “ನಿಮಗೂ ನಿಮ್ಮ ಪ್ರಭುಗಳಿಗೂ ಒಂದೇ ವಿಧವಾದ ವ್ಯಾಧಿ ಇರುವುದರಿಂದ ಪ್ರಭುಗಳ ಸಂಖ್ಯೆಗೆ ಸರಿಯಾಗಿ ಬಂಗಾರದ ಐದು ಗಡ್ಡೆಗಳನ್ನೂ, ಬಂಗಾರದ ಐದು ಇಲಿಗಳನ್ನು ಮಾಡಿಸಬೇಕು.


ಅದೇ ಪ್ರಕಾರ ಫಿಲಿಷ್ಟಿಯರು ಹಾಲುಕರೆಯುವ ಎರಡು ಹಸುಗಳನ್ನು ಹಿಡಿದುಕೊಂಡು ಬಂಡಿಗೆ ಹೂಡಿ ಅವುಗಳ ಕರುಗಳನ್ನು ಮನೆಯಲ್ಲಿ ಕಟ್ಟಿಹಾಕಿದರು.


ಕೂಡಲೆ ಆ ಹಸುಗಳು ಬೇತ್ ಷೆಮೆಷಿನ ರಾಜಮಾರ್ಗವನ್ನು ಹಿಡಿದು, ಕೂಗುತ್ತಾ ನೆಟ್ಟಗೆ ಮುಂದೆ ನಡೆದವು; ಎಡಬಲಕ್ಕೆ ತಿರುಗಲಿಲ್ಲ. ಫಿಲಿಷ್ಟಿಯ ಪ್ರಭುಗಳು ಬೇತ್ ಷೆಮೆಷಿನ ಎಲ್ಲೆಯವರೆಗೂ ಅವುಗಳ ಹಿಂದೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು