Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 6:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇದನ್ನೆಲ್ಲಾ ನೋಡಿದ ಮೇಲೆ ಫಿಲಿಷ್ಟಿಯರ ಐದು ಮಂದಿ ಪ್ರಭುಗಳು ಅದೇ ದಿನ ಎಕ್ರೋನಿಗೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇದನ್ನೆಲ್ಲ ನೋಡಿದ ಮೇಲೆ ಫಿಲಿಷ್ಟಿಯರ ಐದು ಮಂದಿ ರಾಜರು ಅದೇ ದಿನ ಎಕ್ರೋನಿಗೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇದನ್ನೆಲ್ಲಾ ನೋಡಿದ ಮೇಲೆ ಫಿಲಿಷ್ಟಿಯರ ಐದು ಮಂದಿ ಪ್ರಭುಗಳು ಅದೇ ದಿವಸ ಎಕ್ರೋನಿಗೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಬೇತ್‌ಷೆಮೆಷಿನ ಜನರು ಮಾಡಿದ್ದನ್ನೆಲ್ಲ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳು ನೋಡಿ ಅದೇ ದಿನ ಎಕ್ರೋನಿಗೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳು ಇವುಗಳನ್ನು ಕಂಡು, ಅದೇ ದಿನದಲ್ಲಿ ತಿರುಗಿ ಎಕ್ರೋನಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 6:16
7 ತಿಳಿವುಗಳ ಹೋಲಿಕೆ  

ಜನರು, “ನಾವು ಪ್ರಾಯಶ್ಚಿತ್ತಾರ್ಥವಾಗಿ ಏನು ಕಳುಹಿಸಬೇಕು?” ಎಂದು ಕೇಳಲು ಅವರು, “ನಿಮಗೂ ನಿಮ್ಮ ಪ್ರಭುಗಳಿಗೂ ಒಂದೇ ವಿಧವಾದ ವ್ಯಾಧಿ ಇರುವುದರಿಂದ ಪ್ರಭುಗಳ ಸಂಖ್ಯೆಗೆ ಸರಿಯಾಗಿ ಬಂಗಾರದ ಐದು ಗಡ್ಡೆಗಳನ್ನೂ, ಬಂಗಾರದ ಐದು ಇಲಿಗಳನ್ನು ಮಾಡಿಸಬೇಕು.


ಐದು ಮಂದಿ ಫಿಲಿಷ್ಟಿಯ ಪ್ರಭುಗಳು, ಸರ್ವ ಕಾನಾನ್ಯರು, ಚೀದೋನ್ಯರು, ಲೆಬನೋನ್ ಪರ್ವತಗಳಲ್ಲಿಯೂ ಬಾಳ್ ಹೆರ್ಮೊನ್ ಬೆಟ್ಟದಿಂದ ಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವ್ವಿಯರು ಇವರೇ.


ಗಾಜಾ, ಅಷ್ಡೋದ್, ಅಷ್ಕೆಲೋನ್, ಗತೂರು, ಎಕ್ರೋನ್ ಎಂಬ ಪಟ್ಟಣಗಳ ಐದು ಮಂದಿ ಫಿಲಿಷ್ಟಿಯ ಪ್ರಭುಗಳ ಸ್ವಾಧೀನದಲ್ಲಿದ್ದ ಫಿಲಿಷ್ಟಿಯ ಪ್ರಾಂತ್ಯ; ಗೆಷೂರ್ಯರ ಸೀಮೆಯು,


ಕೂಡಲೆ ಆ ಹಸುಗಳು ಬೇತ್ ಷೆಮೆಷಿನ ರಾಜಮಾರ್ಗವನ್ನು ಹಿಡಿದು, ಕೂಗುತ್ತಾ ನೆಟ್ಟಗೆ ಮುಂದೆ ನಡೆದವು; ಎಡಬಲಕ್ಕೆ ತಿರುಗಲಿಲ್ಲ. ಫಿಲಿಷ್ಟಿಯ ಪ್ರಭುಗಳು ಬೇತ್ ಷೆಮೆಷಿನ ಎಲ್ಲೆಯವರೆಗೂ ಅವುಗಳ ಹಿಂದೆ ಹೋದರು.


ಆದ್ದರಿಂದ ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ಅದು ಅಲ್ಲಿಗೆ ಬಂದಾಗ ಆ ಊರಿನವರು, “ನೋಡಿರಿ, ನಮ್ಮನ್ನೂ, ನಮಗೆ ಸೇರಿದವರನ್ನೂ ಕೊಲ್ಲುವುದಕ್ಕೋಸ್ಕರ ಇಸ್ರಾಯೇಲಿನ ದೇವರ ಮಂಜೂಷವನ್ನು ಇಲ್ಲಿಗೆ ಕಳುಹಿಸಿದ್ದಾರೆ” ಎಂದು ಕೂಗಿಕೊಂಡರು.


ಫಿಲಿಷ್ಟಿಯ ಪ್ರಭುಗಳು ಅವಳ ಬಳಿಗೆ ಹೋಗಿ ಅವಳಿಗೆ, “ನೀನು ಅವನನ್ನು ಮರುಳುಗೊಳಿಸಿ, ಅವನ ಮಹಾಶಕ್ತಿಯ ಮೂಲ ಯಾವುದೆಂಬುದನ್ನೂ, ನಾವು ಅವನನ್ನೂ ಗೆದ್ದು, ಬಲವನ್ನು ಕುಂದಿಸುವುದು ಹೇಗೆಂಬುದನ್ನೂ ಗೊತ್ತುಮಾಡಿಕೊಂಡು ನಮಗೆ ತಿಳಿಸು; ನಮ್ಮಲ್ಲಿ ಪ್ರತಿಯೊಬ್ಬನೂ ನಿನಗೆ ಸಾವಿರದ ನೂರು ರೂಪಾಯಿ ಕೊಡುವೆವು” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು